ಬೆಳಗಾವಿ | ಮಲ್ಲಯ್ಯನ ಗುಡ್ಡದಲ್ಲಿ 10 ಎಕರೆ ಭೂಮಿ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಮಲ್ಲಯ್ಯನ ಗುಡ್ಡದಲ್ಲಿ 10 ಎಕರೆ ಭೂಮಿ ಮಂಜೂರು ಮಾಡಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿ, “ಈ ವರ್ಷ ಉತ್ತಮ ಮಳೆಯಾದ ಕಾರಣ ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ₹19 ಕೋಟಿ ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸಲಾಗಿದೆ. ಹಿರೇಬಾಗೇವಾಡಿ ಹಾಗೂ ಸುತ್ತಮತ್ತಲಿನ ಗ್ರಾಮಗಳ ಬಹುದಿನಗಳ ಬೇಡಿಕೆಯಾಗಿದ್ದ ಸಿದ್ಧನಬಾವಿ ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದೆ” ಎಂದರು.

“ಕೆರೆಗಳು ತುಂಬಿರುವುದರಿಂದ ಬೋರ್‌ವೆಲ್‌ಗಳ ಅಂತರ್ಜಲ ವೃದ್ಧಿಯಾಗಲಿದೆ. ಜನರಿಗೆ, ಜಾನುವಾರುಗಳಿಗೆ, ಸುತ್ತಮುತ್ತಲಿನ ರೈತರಿಗೆ ಸಹಾಯವಾಗಲಿದೆ. ಈ ಮೊದಲು ಕೆರೆ ತುಂಬಿಸುವ ಭರವಸೆ ನೀಡಿದ್ದೆ, ಇದೀಗ ನುಡಿದಂತೆ ಕೆರೆ ತುಂಬಿಸುವ ಕಾರ್ಯ ಮುಗಿದಿದೆ. ಹಿರೇಬಾಗೇವಾಡಿ ಗ್ರಾಮದ 80 ಎಕರೆ ಜಮೀನು ವಿಶ್ವವಿದ್ಯಾಲಯಕ್ಕೆ ಹೋಗಿದೆ. ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರ ಹತ್ತಿರ ಮಾತನಾಡಿ, ಮಲ್ಲಯ್ಯನ ಗುಡ್ಡದಲ್ಲಿ ಗ್ರಾಮಸ್ಥರಿಗಾಗಿ 10 ಎಕರೆ ಭೂಮಿ ವಾಪಸ್ ಕೊಡಿಸಲಾಗುವುದು. ಜತೆಗೆ ಆ ಜಮೀನಿನಲ್ಲಿ ಮಲ್ಲಯ್ಯನ ದೇವಸ್ಥಾನ ನಿರ್ಮಿಸಲಾಗುವುದು” ಎಂದು ಗ್ರಾಮಸ್ಥರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಲಾರ | ಉಸಿರಾಡುವ ಗಾಳಿಯನ್ನು ಖರೀದಿಸುವ ಕಾಲ ದೂರವಿಲ್ಲ : ನ್ಯಾ.ಸುನಿಲ್ ಹೊಸಮನಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಸಿ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪಾಟೀಲ, ಉಪಾಧ್ಯಕ್ಷೆ ಪುಷ್ಪ ನಾಯ್ಕರ್, ಸುರೇಶ ಇಟಗಿ, ಗೌಸಮೊದೀನ್ ಜಾಲಿಕೊಪ್ಪ, ಅನಿಲ್ ಪಾಟೀಲ, ಶ್ರೀಕಾಂತ ಮಾಧು ಭರಮಣ್ಣವರ, ಅಡಿವೇಶ ಇಟಗಿ, ಪಡಿಗೌಡ ಪಾಟೀಲ, ಶಿವು ಹಳೇಮನಿ, ಪ್ರಕಾಶ ಜಪ್ತಿ, ಖತಾಲ್ ಗೋವೆ, ಮಹಾಂತೇಶ ಹಂಚಿನಮನಿ, ನಿಂಗಪ್ಪ ತಳವಾರ, ಆನಂದ ಪಾಟೀಲ, ಅಡಿವೆಪ್ಪ ತೋಟಗಿ, ಆನಂದ ಪಾಟೀಲ, ರಘು ಪಾಟೀಲ, ಉಳವಪ್ಪ ಅಜ್ಜ, ಗಂಗಯ್ಯ ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...