ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

Date:

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂತ್ರಸ್ತೆಯು ಸರ್ವೆ ನಂ.237/ಎ ಸರ್ಕಾರದಿಂದ ಜಮೀನು ಮಂಜೂರು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿತರು ಜಮೀನಿನ ಒತ್ತುವರಿ ಹಾಗೂ ರಸ್ತೆ ಬಂದ್‌ ಮಾಡಿದ್ದರಿಂದ ಕೇಳಲು ಹೋದ ಸಂತ್ರಸ್ತೆಯನ್ನು ವಿವಸ್ತ್ರಗೊಳಿಸಿದ್ದಲ್ಲದೆ ಹಲ್ಲೆಯನ್ನೂ ನಡೆಸಿದ್ದರು ಎನ್ನಲಾಗಿತ್ತು.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮಗಳಲ್ಲಿ ಹರಿದಾಡಿದ್ದರಿಂದ, ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ತಾಲೂಕು ಆಡಳಿತ ಗಂಭೀರವಾಗಿ ಪರಿಗಣಿಸಿ ಸ್ಥಳ ಪರಿಶೀಲನೆ ನಡೆಸಿ ಜಮೀನು ಹಾಗೂ ರಸ್ತೆ ಸರಿಪಡಿಸುವ ಕಾರ್ಯ ಮಾರ್ಚ್‌ 1ರಂದು ಆರಂಭಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪಿಲಿಚಾಮುಂಡಿ ದೇವಸ್ಥಾನದ ಭಂಡಾರ ಮನೆ ಧ್ವಂಸ; ಮೂವರ ಬಂಧನ

ಪ್ರಕರಣದಲ್ಲಿ ಮಹಿಳೆ 13 ಜನರ ವಿರುದ್ಧ ದೂರು ನೀಡಿದ್ದು, ಅದರಲ್ಲಿ ಶುಕ್ರವಾರ ತಡ ರಾತ್ರಿ ಪೊಲೀಸರು ಬೀರಪ್ಪ ನಾಗನೂರ ಹಾಗೂ ಆನಂದ ಹಾದಿಮನಿ ಎಂಬ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಉಳಿದ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...