ಬೆಳಗಾವಿ | ಘಟಪ್ರಭಾದಲ್ಲಿ ಹದಗೆಟ್ಟ ರಸ್ತೆ; ಸ್ಥಳೀಯ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

Date:

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದ ಮುಖ್ಯರಸ್ತೆ ಹದಗೆಟ್ಟಿದ್ದು, ಸಂಚಾರಕ್ಕೆ ಅಸ್ತವ್ಯಸ್ತವಾಗಿದೆ. ಸುಮಾರು ನಾಲ್ಕೈದು ವರ್ಷಗಳಿಂದ ರಸ್ತೆ ಹದಗೆಟ್ಟಿದ್ದು, ನಿತ್ಯ ವಾಹನಗಳಲ್ಲಿ ಸಂಚರಿಸಲು ಹರಸಾಹಸಪಡುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಸ್ತೆಯು ಮಧ್ಯೆ ತಗ್ಗು ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ನಿತ್ಯ ಜೀವ ಕೈಯಲ್ಲಿಡಿದು ಸಂಚರಿಸುತ್ತಿದ್ದರೂ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲಿ ಇತ್ತಕಡೆ ಗಮನ ಹರಿಸುತ್ತಿಲ್ಲ. ಇವರ ನಿರ್ಲಕ್ಷ್ಯದಿಂದ ಈವರೆಗೆ ರಸ್ತೆಯು ದುರಸ್ತಿಯಾಗದೆ ಉಳಿದಿದೆ” ಎಂದು ಆರೋಪಿಸುತ್ತಿದ್ದಾರೆ.

ಘಟಪ್ರಭಾ ರಸ್ತೆ ದುಃಸ್ಥಿತಿ

ಸ್ಥಳೀಯ ನಿವಾಸಿ ರಾಜು ಎಂಬುವವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ರಸ್ತೆ ಮಧ್ಯೆ ತಗ್ಗು ಗುಂಡಿಗಳು ಬಿದ್ದಿವೆ. ಪಟ್ಟಣ ಪಂಚಾಯಿತಿಯವರು ಗರಸು ಮಣ್ಣು ಹಾಕಿ ತಗ್ಗು ಗುಂಡಿಗಳನ್ನು ಮುಚ್ಚುತ್ತಾರೆ. ಆದರೆ ಮಳೆ ಬಂದರೆ ಮತ್ತೆ ರಸ್ತೆ ಹಾಳಾಗುತ್ತದೆ ನಿತ್ಯ ಸಂಚರಿಸುವ ವಾಹನಗಳಿಂದ ದೂಳು ಬರುತ್ತದೆ. ಇದರಿಂದ ಸಾರ್ವಜನಿಕರ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ. ಹಾಗಾಗಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕ್ರಮವಹಿಸಿ ರಸ್ತೆ ದುರಸ್ತಿ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಮಾಹಿತಿ ಪಡೆಯಲು ಈ ದಿನ.ಕಾಮ್ ಘಟಪ್ರಭಾ ಪುರಸಭೆ ಕಚೇರಿಗೆ ಸಂಪರ್ಕಿಸಿದಾಗ ಪುರಸಭೆ ಸಿಬ್ಬಂದಿ ಮಾತನಾಡಿ, “ರಸ್ತೆ ಸಮಸ್ಯೆ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದು ರಸ್ತೆ ಸರಿಪಡಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ʼಈ ದಿನʼ ವರದಿಗೆ ಎಚ್ಚೆತ್ತ ಅಧಿಕಾರಿಗಳು; ನ್ಯೂಮಂಡ್ಲಿ ಉರ್ದು ಶಾಲೆಗೆ ಬಿಇಒ ಭೇಟಿ, ಸಮಸ್ಯೆ ಬಗೆಹರಿಸುವ ಭರವಸೆ

“ಘಟಪ್ರಭಾದಲ್ಲಿ 1935ರಲ್ಲಿ ಪ್ರಾರಂಭವಾಗಿರುವ ಕರ್ನಾಟಕ ಆರೋಗ್ಯ ಧಾಮ ಆಸ್ಪತ್ರೆಗೆ ಬೇರೆ ಬೇರೆ ಹಳ್ಳಿಗಳಿಂದ ನಿತ್ಯವೂ ಸಾವಿರಾರು ಜನರು ಆಸ್ಪತ್ರೆಗೆ ಬರುತ್ತಾರೆ. ಇವರ ಸಂಚಾರಕ್ಕೂ ಅನಾನುಕೂಲವಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳು ಆದಷ್ಟು ಬೇಗ ರಸ್ತೆ ದುರಸ್ತಿ ಮಾಡಬೇಕಿದೆ” ಎಂದು ಆಗ್ರಹಿಸಿದರು.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...