ಬೆಳಗಾವಿ | ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ: ಶಾಸಕ ರಾಜು ಕಾಗೆ

Date:

ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್ ದರ ಏರಿಕೆಯ ವಿಚಾರ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ, “ಬಸ್ ಟಿಕೆಟ್ ದರ ಏರಿಕೆ ಅನಿವಾರ್ಯ” ಎಂದು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಮಾತನಾಡಿದ ಶಾಸಕರು, “ರಾಜ್ಯದಲ್ಲಿ ಕಳೆದ ಏಳೆಂಟು ವರ್ಷಗಳಿಂದ ಬಸ್ ಟಿಕೆಟ್‌ ದರ ಏರಿಕೆಯಾಗಿಲ್ಲ. ಡೀಸೆಲ್, ಆಯಿಲ್, ಟೈರ್ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಸರ್ಕಾರ ಅನಿವಾರ್ಯವಾಗಿ ಟಿಕೆಟ್ ದರ ಏರಿಕೆ ಮಾಡಿದೆ. ಪ್ರತಿ ದಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಒಂದು ಕೋಟಿ ನಷ್ಟದಲ್ಲಿದೆ. ಹೊಸ ಬಸ್‌ಗಳನ್ನು ಈಗಾಗಲೇ ಖರೀದಿ ಮಾಡಿದ್ದೇವೆ. ಕಳೆದ ಐದಾರು ವರ್ಷಗಳಿಂದ ಬಸ್‌ ಖರೀದಿ ಮಾಡಿಲ್ಲ. ಈಗ ಐದನೂರು ಹೊಸ ಬಸ್‌ ಖರೀದಿ ಮಾಡಿದ್ದೇವೆ” ಎಂದು ತಿಳಿಸಿದರು.

ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಶೇ. 15 ಏರಿಕೆ ಮಾಡಿದ್ದು ಸರಿಯಿದೆ. ಕೆಲ ವರ್ಷಗಳ ಹಿಂದೆಯೇ ಟಿಕೆಟ್ ದರ ಏರಿಕೆಯಾಗಬೇಕಿತ್ತು. ಈಗ ಏರಿಕೆಯಾಗಿದೆ ಎಂದು ಶಾಸಕ ರಾಜು ಕಾಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಯಚೂರು | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಹೇಳಿಕೆ ಖಂಡಿಸಿ ಜ.7ರಂದು ‘ದೇವದುರ್ಗ ಬಂದ್‌’

ಜನರ ಸೇವೆಗೆ ಬಸ್ ಖರೀದಿ ಮಾಡಿದಾಗ ಬಸ್ ಟಿಕೆಟ್ ದರ ಏರಿಕೆ ಮಾಡುವುದು ಅನಿವಾರ್ಯ. ಡೀಸೆಲ್ ₹50 ಇದ್ದಾಗ ಇದೇ ಟಿಕೆಟ್ ದರ ಇತ್ತು. ಆದರೆ ಈಗ ಡೀಸೆಲ್ ದರ ಏರಿಕೆಯಾಗಿದೆ. ಟಿಕೆಟ್ ದರ ಏರಿಕೆ ಮಾಡಿದ್ದೇವೆ. ಕಳೆದ ಬಿಜೆಪಿ ಸರ್ಕಾರ ಕೆಎಸ್‌ಆರ್‌ಟಿಸಿಯನ್ನು ನಷ್ಟಕ್ಕೆ ದೂಡಿದ್ದಾರೆ’ ಎಂದು ಬಿಜೆಪಿ ವಿರುದ್ಧ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...