ಬೆಳಗಾವಿ | ಜಮೀನು ವಿಚಾರಕ್ಕೆ ಜಗಳ; ಮಹಿಳೆಯನ್ನು‌ ವಿವಸ್ತ್ರಗೊಳಿಸಿ ಹಲ್ಲೆ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಜಗಳ ನಡೆದಿದ್ದು, ಮಹಿಳೆಯೊಬ್ಬರನ್ನು‌ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.

4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಕಳೆದ ಕೆಲವು ವರ್ಷಗಳಿಂದ ತಂಟೆ-ತಕರಾರು ನಡೆದಿದ್ದವು. 2025ರ ಫೆಬ್ರವರಿ 20ರಂದು ಇದೇ ವಿಚಾರವಾಗಿ ಮತ್ತೆ ಜಗಳ ನಡೆದಿದ್ದು, ಪೊಲೀಸರ ಎದುರೇ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆಂದು ಅರೋಪಿಸಲಾಗಿದೆ.

“15ಕ್ಕೂ ಅಧಿಕ ಮಂದಿ ರೈತ ಸಂಘದವರ ಮುಂದಾಳತ್ವದಲ್ಲಿ ಬಂದು ಹಲ್ಲೆ ಮಾಡಿದ್ದಾರೆ. ಆಗ ನಾನು ಪೊಲೀಸರಿಗೆ ಫೋನ್ ಮಾಡಿದೆ. ಪೊಲೀಸರು ಸ್ಥಳಕ್ಕೆ ಬಂದಾಗಲೇ ಅವರ ಮುಂದೆಯೇ ನನ್ನ ಬಟ್ಟೆ‌ ಹರಿದು ಹಲ್ಲೆ ಮಾಡಿದ್ದಾರೆ” ಎಂದು ಸಂತ್ರಸ್ತ ಮಹಿಳೆ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅರೆಬೆತ್ತಲೆಯಾಗಿಯೇ ನಾನು ಸವದತ್ತಿ ಪೊಲೀಸ್ ಠಾಣೆಗೆ ಹೋದೆ. ಆದರೆ ಪೊಲೀಸರು ಬೆತ್ತಲೆ ಮಾಡಿ ಹೊಡೆದಿದ್ದಕ್ಕೆ ಸಾಕ್ಷಿ ಕೊಡಿ ಎಂದು ಕೇಳಿದರು. ದೂರು ಪಡೆಯಲಿಲ್ಲ. ನನ್ನ ಹೊಟ್ಟೆಗೆ ತೀವ್ರ ಪೆಟ್ಟಾಗಿದ್ದರಿಂದ ಸವದತ್ತಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ‌ ಚಿಕಿತ್ಸೆ ಪಡೆದು, ನಂತರ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೆ” ಎಂದು ಹೇಳಿದ್ದಾರೆ.

“ಇದೇ‌ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 2024ರ ಜೂನ್ 18 ಹಾಗೂ 2025ರ ಜನವರಿ 1ರಂದು ಎರಡು ಬಾರಿ ದೂರು‌ ನೀಡಲಾಗಿದೆ. ಜೂನ್ 15ರಂದು ಜಮೀನಿನಲ್ಲಿ ಬಿತ್ತಲು ಮುಂದಾದಾಗ ಏಳು ಜನರ ಗುಂಪು ಕಟ್ಟಿಕೊಂಡು ಬಂದು ಬಿತ್ತನೆ ಕಾರ್ಯಕ್ಕೆ ತಕರಾರು‌ ಮಾಡಿದರು. ನನ್ನ ಮೇಲೆ ಹಲ್ಲೆ ಕೂಡ ಮಾಡಿದ್ದರು. ಹಾಗಾಗಿ ಜೂನ್ 18ರಂದು‌ ಸವದತ್ತಿ ಠಾಣೆಗೆ ದೂರು ನೀಡಿದ್ದೆ. ನಂತರ ಡಿಸೆಂಬರ್ 19ರಂದು ಹೊಲದಲ್ಲಿ ಕಳೆ ತೆಗೆಯುತ್ತಿದ್ದಾಗ ಯಲ್ಲಪ್ಪ‌ ಉರೂಫ್ ಪಟ್ಟಣಗೌಡ ಪಾಟೀಲ ಎಂಬುವವರು ಹೊಲಕ್ಕೆ ಬಂದು‌ ಜಗಳ ತೆಗೆದರು‌. ನನ್ನ ಬಟ್ಟೆ ಹರಿದು ಮಾನಭಂಗ ಮಾಡಲು‌ ಯತ್ನಿಸಿದರು” ಎಂದು ಸಂತ್ರಸ್ತೆ ಜನವರಿ 1ರಂದು ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರಕಾರಿ ಜಾಗ ಒತ್ತುವರಿ,ಜಿಲ್ಲಾಡಳಿತದಿಂದ ತೆರವು

“ಇದೇ ವಿಚಾರವಾಗಿ ಮತ್ತೆ ಫೆಬ್ರವರಿ 20ರಂದು ಕಲಹ ನಡೆದಿದೆ. ಹೊಲ ತಮ್ಮದೆಂದು ಹೇಳಿಕೊಂಡು ಆರೋಪಿಗಳು ರೈತ ಸಂಘಟನೆಯವರನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದ್ದಾರೆ. ಬೆಳೆದ ಬೆಳೆಯನ್ನೂ ತಾವೇ‌ ತೆಗೆದುಕೊಂಡು‌‌ ಹೋಗುವುದಾಗಿ ಹೇಳಿದ್ದಾರೆ. ಇದಕ್ಕೆ ವಿರೋಧಿಸಿದ್ದರಿಂದ ಪುರುಷರು‌, ಮಹಿಳೆಯರು ಸೇರಿ ಬಟ್ಟೆ ಹರಿದು‌ ಹೊಡೆದಿದ್ದಾರೆ” ಎಂದು ಸಂತ್ರಸ್ತೆ ಆರೋಪ ಮಾಡಿದ್ದಾರೆ.‌

“4 ಎಕರೆ 19 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಗಲಾಟೆಗಳಾಗಿರುವುದು ನಿಜ. ಮಹಿಳೆಯ ವಿಚಾರವಾಗಿ ಈ ಹಿಂದೆ ಕೂಡ ದೂರು ಪಡೆದು ಕ್ರಮ‌ ವಹಿಸಲಾಗಿದೆ. ಪೊಲೀಸರ ಮುಂದೆ ವಿವಸ್ತ್ರಗೊಳಿಸಿ ಹೊಡೆದಿದ್ದಾರೆ ಎಂಬ ಅರೋಪ ಪರಿಶೀಲನೆ ಮಾಡಲಾಗುವುದು” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...