ಬೆಳಗಾವಿ | ಪ್ರತಿಯೊಂದು ಮಗುವಿಗೂ ಗುಣಾತ್ಮಕ, ಸಮಾನ ಶಿಕ್ಷಣದ ಅವಶ್ಯವಿದೆ: ನಿವೃತ್ತ ನ್ಯಾ. ನಾಗಮೋಹನ ದಾಸ್

Date:

ದೇಶದ ಪ್ರತಿಯೊಂದು ಮಗುವಿಗೂ ಗುಣಾತ್ಮಕ ಹಾಗೂ ಸಮಾನ ಶಿಕ್ಷಣದ ಅವಶ್ಯವಿದೆ ಎಂದು ನಿವೃತ್ತ ನ್ಯಾ.ನಾಗಮೋಹನ ದಾಸ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.

“ಭಾರತ ದೇಶವು ಶಿಕ್ಷಣ ಕ್ಷೇತ್ರದಲ್ಲಿ ಸಮಾನ ಮತ್ತು ಗುಣಾತ್ಮಕ ಶಿಕ್ಷಣದ ಕೊರತೆಯಿಂದ ಬಳಲುತ್ತಿದೆ. ದಿನೇ ದಿನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ನೀಡುವ ಹಣಕಾಸಿನ ನೆರವನ್ನು ಕಡಿಮೆ ಮಾಡುತ್ತಿವೆ. ಇದರಿಂದ, ಬಡವರ ಮಕ್ಕಳು ಶುಲ್ಕ ಕಟ್ಟಲಾಗದೆ ಶಿಕ್ಷಣವನ್ನು ಮೊಟಕುಗೊಳಿಸುತ್ತಿದ್ದಾರೆ. ಇದು ದೇಶಕ್ಕೆ ಒಳ್ಳೆದಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗತ್ತಿನ ಸಮಸ್ಯೆಗಳ ಮಾತನಾಡುತ್ತ, ಮಹಾಯುದ್ಧಗಳ ಕುರಿತು ಮೆಲುಕು ಹಾಕಿದರು. “ಭಾರತ ದೇಶವು ಜಾತಿ, ಧರ್ಮ ಬೇಧವಿಲ್ಲದೆ ಅಭಿವೃದ್ಧಿಪಥದತ್ತ ಸಾಗಲು ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ಕಾರಣ ಹಾಗೂ ಯುವಜನರು ದೇಶದ ಮಿಡಿತ ತಿಳಿಯಬೇಕೆಂದರೆ, ವಿಶ್ಲೇಷಣಾತ್ಮಕವಾಗಿ ಬರೆದಿರುವ ಸಂವಿಧಾನ ಓದು ಕೈಪಿಡಿಯನ್ನು ಓದಬೇಕು” ಎಂದು ಸಲಹೆ ನೀಡಿದರು. ಇದೇ ವೇಳೆ ವಿವಿಯ ವಿವಿಧ ವಿಭಾಗಗಳ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ವಿವಿಗೆ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿಗ ಸಿ ಎಂ ತ್ಯಾಗರಾಜ ಮಾತನಾಡಿ, ವಿವಿ ಸ್ಥಾಪನೆಗೆ ಶ್ರಮಿಸಿದ ಹಲವಾರು ಮಹನೀಯರನ್ನು ಸ್ಮರಿಸಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಕಾರ್ಕಳ ಪರಶುರಾಮ ಪ್ರತಿಮೆ ವಿವಾದ | ಶಾಸಕ ಸುನಿಲ್ ಪ್ರಚಂಡ ಸುಳ್ಳುಗಾರ: ಕಾಂಗ್ರೆಸ್‌ ಮುಖಂಡ ಉದಯ್ ಶೆಟ್ಟಿ

ಕುಲಸಚಿವ ಸಂತೋಷ ಕಾಮಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿ, ವಿವಿಯ ಹಲವಾರು ಸಾಧನೆಗಳನ್ನು ವರದಿಯ ವಾಚಿಸುವುದರ ಮೂಲಕ ಪ್ರಸ್ತುತ ಪಡಿಸಿ, ವಿವಿಯ ಮುನ್ನೋಟದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯ ಮೇಲೆ ಮೌಲ್ಯಮಾಪನ ಕುಲಸಚಿವ ಪ್ರೊ.ರವೀಂದ್ರ ಎನ್ ಕದಮ್, ಹಣಕಾಸು ಅಧಿಕಾರಿ ಎಂ ಎ ಸ್ವಪ್ನ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...