ಬೆಳಗಾವಿ | ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗಲೂ ಅನ್ಯಾಯ, ಸಂಸದರಾದಾಗಲೂ ಅನ್ಯಾಯ: ಜನರ ಆರೋಪ

Date:

ಜಗದೀಶ್ ಶೆಟ್ಟರ್ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ವಿರೋಧದ ನಡುವೆಯೂ ಬಿಜೆಪಿ ಟಿಕೆಟ್ ಪಡೆದು ಬೆಳಗಾವಿ ಲೋಕಸಭಾ ಸಂಸದರಾಗಿದ್ದಾರೆ. ಇವರು 2012 ಮತ್ತು 2013ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೂ ಬೆಳಗಾವಿಗೆ ಅನ್ಯಾಯ ಮಾಡಿದ್ದರು. ಈಗಲೂ ಸಂಸದರಾಗಿಯೂ ಕೂಡ ಬೆಳಗಾವಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಗೆ ಬರಬೇಕಿದ್ದ ಹೈಕೋರ್ಟ್ ಪೀಠವನ್ನು ವಿರೋಧ ಮಾಡಿ ಧಾರವಾಡಕ್ಕೆ ಆಗುವಂತೆ ನೋಡಿಕೊಂಡಿದ್ದರು. ಆ ಸಂದರ್ಭದಲ್ಲಿಯೂ ಬೆಳಗಾವಿ ಜಿಲ್ಲೆಯ ಜನರಿಂದ ಆಕ್ರೋಶ ವ್ಯಕ್ತವಾಗಿತ್ತು.

ವಂದೇ ಭಾರತ್ ಎ‌ಕ್ಸ್‌ಪ್ರೆಸ್‌ ರೈಲು ಸಂಚಾರ ಧಾರವಾಡದವರೆಗೆ ಮಾತ್ರವೇ ಇತ್ತು. ನಂತರ ಬೆಳಗಾವಿಗೂ ವಂದೇ ಭಾರತ್ ರೈಲು ಸಂಚಾರವನ್ನು ವಿಸ್ತರಿಸಬೇಕೆಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳ ಒತ್ತಾಯಕ್ಕೆ ರೈಲ್ವೆ ಇಲಾಖೆ ಮಣಿಯಿತು. ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಣೆ ಮಾಡಲಾಗುತ್ತದೆಂದು ಘೋಷಣೆ ಮಾಡಿತು. 2024ರ ನವೆಂಬರ್‌ನಲ್ಲಿ ಬೆಂಗಳೂರು-ಬೆಳಗಾವಿ ನಡುವಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಧಾರವಾಡದಿಂದ ಬೆಳಗಾವಿವರೆಗೆ ಲೋಂಡಾ ಪ್ರದೇಶದಲ್ಲಿ ಹೆಚ್ಚು ತಿರುವುಗಳಿರುವುದರಿಂದ ವೇಗದ ಸಂಚಾರ ಅಸಾಧ್ಯವೆಂಬ ಕಾರಣ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈಗ ಇದೇ ಮಾರ್ಗದಲ್ಲಿ ಪುಣೆಯಿಂದ ಬೆಳಗಾವಿ, ಬೆಳಗಾವಿಯಿಂದ ಹುಬ್ಬಳ್ಳಿಗೆ ವಂದೇ ಭಾರತ್‌ ರೈಲು ಸಂಚರಿಸಲು ಗ್ರೀನ್‌ ಸಿಗ್ನಲ್‌ ನೀಡಲಾಗಿದೆ. ಈ ರೈಲಿಗೆ ಆ ತಿರುವುಗಳು ಅಡ್ಡಿಯಾಗುವುದಿಲ್ಲ ಏಕೆ ಎಂಬುದು ಬೆಳಗಾವಿ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿಯಿಂದ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದಾಗಲೂ ಇದೇ ಕಾರಣಕ್ಕೆ ʼಗೋ ಬ್ಯಾಕ್ ಜಗದೀಶ್ ಶೆಟ್ಟರ್ ಬೆಳಗಾವಿಗೆ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲು ಬೇಕು, ಜಗದೀಶ್ ಶೆಟ್ಟರ್ ಬೇಡʼವೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವನ್ನೂ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಿಎಂ ಬದಲಾವಣೆ ಪರಿಸ್ಥಿತಿ ಬಂದರೆ ನಾನೂ ಸಿಎಂ ಆಕಾಂಕ್ಷಿ: ಶಾಮನೂರು ಶಿವಶಂಕರಪ್ಪ

ಈ ಕುರಿತು ಸ್ವಾಭಿಮಾನಿ ಶೇತಕರಿ ರೈತ ಸಂಘಟನೆಯ ಮುಖಂಡರಾದ ಶಿವಲೀಲಾ ಮಿಸಾಳೆಯವರು ಈ ದಿನ.ಕಾಮ್ ಜೊತೆ ಮಾತನಾಡಿ, “ನಮ್ಮ ಜಿಲ್ಲೆಯ ಮೊದಲ ಬೇಡಿಕೆ ಧಾರವಾಡದಿಂದ ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆಗಿಬೇಕಿತ್ತು. ಆದರೆ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಲಾಭಕ್ಕಾಗಿ ಪೂನಾದಿಂದ ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. ಇದರಲ್ಲಿ ಜಿಲ್ಲೆಯ ಜನರ ಹಿತಾಸಕ್ತಿ ಏನಿಲ್ಲ” ಎಂದು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ವಿಷಯದಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಧೋರಣೆ ಏಕೆ ಎಂಬ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಮತ್ತು ಕೇಂದ್ರ ಸರ್ಕಾರ ಉತ್ತರಿಸಬೇಕಿದೆ

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...