ಬೆಳಗಾವಿ | ಶಿವಸೇನೆ, ಎಂಇಎಸ್, ಮರಾಠಿಗರ ದೌರ್ಜನ್ಯ ಖಂಡಿಸಿ ಕನ್ನಡಿಗರ ಮೌನ ಪ್ರತಿಭಟನೆ

Date:

ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರ ಮೇಲೆ ಶಿವಸೇನೆ, ಎಂಇಎಸ್ ಮತ್ತು ಮರಾಠಿಗರು ನಿರಂತರವಾಗಿ ದೌರ್ಜನ್ಯ ಮಾಡುತ್ತಲೇ ಬಂದಿದ್ದಾರೆ. ರಾಜ್ಯ ಸರ್ಕಾರ ಶೀಘ್ರವೇ ಕನ್ನಡಿಗರ ರಕ್ಷಣೆಗೆ ಮುಂದಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾಧ್ಯಕ್ಷ ಎಚ್‌ ಡಿ ಜಯರಾಂ ನೇತೃತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಪ್ರತಿಮೆ ಮುಂದೆ ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿ, “ಗಡಿ ಜಿಲ್ಲೆಯಲ್ಲಿ ಕನ್ನಡಿಗರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸುವ ಬದಲು ಸರ್ಕಾರ ಕನ್ನಡಿಗರ ಮೇಲೆಯೇ ಪ್ರಕರಣ ದಾಖಲು ಮಾಡುತ್ತಿದ್ದು, ನಾವು ಮರಾಠಿಗರ ಪಕ್ಷಪಾತಿಗಳು ಎಂಬ ಸಂದೇಶವನ್ನು ಕನ್ನಡಿಗರಿಗೆ ನೀಡುತ್ತ ಕನ್ನಡಿಗರ ತಾಳ್ಮೆಯನ್ನು ಕೆಣಕುತ್ತಿದೆ. ಇದು ಕನ್ನಡಿಗರಿಗೆ ಮಾಡುವ ಅಪಮಾನವಾಗಿದ್ದು, ಕನ್ನಡ ನಾಡಿನ ಸಂಪನ್ಮೂಲದಿಂದ ತಿಂದು ತೇಗುತ್ತಿರುವ ಇಂತಹ ನಾಡದ್ರೋಹಿಗಳ ಪರ ನಿಂತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರವು ಕನ್ನಡಿಗರ ಮೇಲಿನ ಪ್ರಕರಣವನ್ನು ಹಿಂಪಡೆದು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳುಮಾಡುತ್ತಿರುವ ನಾಡ ದ್ರೋಹಿಗಳ ವಿರುದ್ಧ ಪ್ರಕರಣ ದಾಖಲು ಮಾಡಬೇಕು. ನಾವು ಬಾಯಿಗೆ ಕಟ್ಟಿರುವ ಕಪ್ಪು ಪಟ್ಟಿಯು ರಾಜ್ಯ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದು, ಕನ್ನಡಿಗರ ಧ್ವನಿಯನ್ನು ಕರ್ನಾಟಕ ಸರ್ಕಾರವೇ ಆಡಗಿಸುತ್ತಿದೆ ಎಂಬ ಸಂದೇಶವನ್ನು ನೀಡುತ್ತದೆ” ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಗಡಿಭಾಗದ ಕನ್ನಡಿಗರ ಮೇಲೆ ಮರಾಠಿಗರು ನಿರಂತರವಾಗಿ ದೌರ್ಜನ್ಯ ಮಾಡುತ್ತಿದ್ದಾರೆ. ನೌಕರರ ಮೇಲೆ ಸುಳ್ಳು ದೂರು ನೀಡುವ ಮೂಲಕ ಪೋಕ್ಸೊ ಪ್ರಕರಣವನ್ನು ದಾಖಲು ಮಾಡುವಂತೆ ಮರಾಠಿಗ ಸಂಘಗಳು ನೋಡಿಕೊಳ್ಳುತ್ತಿದ್ದು, ಪ್ರಕರಣ ಕುರಿತು ಸಮಗ್ರ ತನಿಖೆಯನ್ನು ನಡೆಸಬೇಕು. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಂಡು, ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು. ಇಲ್ಲವಾದರೆ ರಾಜ್ಯದ ಕನ್ನಡಿಗರು ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಬುದ್ಧಿ ಕಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾನಪದ ಜಾಗೃತಿ ಪರಿಷತ್ ಕಾರ್ಯಕ್ರಮದಲ್ಲಿ ಕಾಯಕಯೋಗಿ ಪ್ರಶಸ್ತಿ ಪ್ರದಾನ.

ಬಸ್‌ ಚಾಲನೆ ಮಾಡುವ ಚಾಲಕ ಮತ್ತು ಟಿಕೆಟ್‌ ನೀಡುವ ನಿರ್ವಾಹಕ ಸಾರ್ವಜನಿಕವಾಗಿ ಓರ್ವ ಹೆಣ್ಣುಮಗುವಿನ ಮೇಲೆ ಹೇಗೆ ದೌರ್ಜನ್ಯ ಮಾಡಲು ಸಾಧ್ಯ. ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಮರಾಠಿ ಸಂಘಗಳು ಕನ್ನಡಿಗರ ಧ್ವನಿಯನ್ನು ಮತ್ತು ಕನ್ನಡ ನೌಕರರನ್ನು ಬಲಿಪಶು ಮಾಡುವ ಹುನ್ನಾರದಿಂದ ಇಂತಹ ಪ್ರಕರಣವನ್ನು ದಾಖಲು ಮಾಡುತ್ತಿದ್ದಾರೆ. ಕನ್ನಡ ನೌಕರರಿಗೆ ತಲೆ ಎತ್ತಿ ಗೌರವಯುತ ಜೀವನ ನಡೆಸಲು ಬಿಡುತ್ತಿಲ್ಲ. ಇಂತಹ ಪ್ರಕರಣಗಳ ಸತ್ಯಾಸತ್ಯತೆಯನ್ನು ತಿಳಿದು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...