ಬೆಳಗಾವಿ | ಲೋಕಸಭಾ ಚುನಾವಣೆ: ಜಗದೀಶ್ ಶೆಟ್ಟರ್ ವಿರುದ್ಧ ಬ್ಯಾನರ್‌ ಅಳವಡಿಕೆ

Date:

ಬೆಳಗಾವಿ ಲೋಕಸಭಾ ಚುನಾವಣಾ ರಾಜಕೀಯ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದ್ದು, ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ನೀಡುವರೋ, ಇಲ್ಲವೋ ಎಂಬ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಆದರೆ, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವುದಾಗಿ ಬಿಜೆಪಿ ಮುಖಂಡರು ಹೇಳಿದ್ದಾರೆ.

ಶೆಟ್ಟರ್ ಟಿಕೆಟ್‌ ದೊರೆಯುವ ಸಾಧ್ಯತೆ ಇದೆ ಎಂಬುದನ್ನು ತಿಳಿದ ಬೆನ್ನಲ್ಲೇ ಬೆಳಗಾವಿ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದಾರೆ. ಜಿಲ್ಲೆಯ ನಾಯಕರೆಲ್ಲ ಪ್ರತ್ಯೇಕ ಸಭೆ ನಡೆಸಿದ್ದು, ಜಗದೀಶ್ ಶೆಟ್ಟರ್‌ ಅವರಿಗೆ ಟಿಕೆಟ್ ಬೇಡವೆಂದು ಒತ್ತಾಯ ಮಾಡುತ್ತಿದ್ದಾರೆ. ಮತ್ತೊಂದೆಡೆ, ಜಗದೀಶ್ ಶೆಟ್ಟರ್ ವಿರೋಧಿಗಳು ಸಾಮಾಜಿಕ ಜಾಲತಾಣಗಳಲ್ಲಿ ‘ಗೋಬ್ಯಾಕ್ ಶೆಟರ್’ ಅಭಿಯಾನ ಪ್ರಾರಂಭಿಸಿದ್ದಾರೆ.‌

ರಸ್ತೆಯ ಪಕ್ಕದಲ್ಲಿ ʼಬರ್ರಿ ಶೆಟ್ಟರ್ ಉಂಡ ಹೋಗ್ರಿ, ಬೆಳಗಾವಿ ನಿಮ್ಮಂತವರಿಗೆ ಬಿಟ್ಟಿ ಬಿದ್ದೈತಿʼ ಎಂಬ ಬ್ಯಾನರ್‌ಗಳನ್ನು ಅಳವಡಿಸಿ ಶೆಟ್ಟರ್‌ ಅವರಿಗೆ ಬೆಳಗಾವಿ ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವುದನ್ನು ವಿರೋಧಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗದೀಶ್ ಶೆಟ್ಟರ್ ವಿರುದ್ಧ ಬ್ಯಾನರ್ ಹಾಕಿರುವುದನ್ನು ವಿರೋಧಿಸಿರುವ ಬೆಳಗಾವಿ ಜಿಲ್ಲಾ ಬಿಜೆಪಿ ಸಮಿತಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಕಾಂಗ್ರೆಸ್ ಪಕ್ಷದಿಂದ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ ಹೆಬ್ಬಾಳ್ಕರ್‌ ಅವರಿಗೆ ಟಿಕೆಟ್ ಘೋಷಿಸಿದ್ದು,
ಕಾಂಗ್ರೆಸ್ ಕ್ಷೇತ್ರದಲ್ಲಿ ಪ್ರಚಾರವನ್ನೂ ಆರಂಭಿಸಿದೆ. ಆದರೆ ಬಿಜೆಪಿ ಟಿಕೆಟ್ ಘೋಷಣೆ ಮಾಡದೆ ಕಾಂಗ್ರೆಸ್‌ನಿಂದ ಮರಳಿ ಬಿಜೆಪಿಗೆ ಪಕ್ಷಾಂತರ ಮಾಡಿದ ಜಗದೀಶ್ ಶೆಟ್ಟರ್ ಅವರನ್ನು ಸತಾಯಿಸುತ್ತಿರುವುದರ ಹಿಂದಿನ ತಂತ್ರ ಏನಾಗಿರಬಹುದು. ಟಿಕೆಟ್ ತಪ್ಪಿದರೆ ಜಗದೀಶ್ ಶೆಟ್ಟರ್ ಮುಂದಿನ ನಡೆ ಏನು? ಹಾಲಿ ಸಂಸದೆ ಮಂಗಲಾ ಅಂಗಡಿಯರ ನಡೆ ಏನು ಎಂಬಿತ್ಯಾದಿ ಪ್ರಶ್ನೆಗಳು ಬೆಳಗಾವಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ: ಲೈಂಗಿಕ ಕಿರುಕುಳಕ್ಕೆ ಬೇಸತ್ತು ದಯಾಮರಣಕ್ಕೆ ಮನವಿ ಮಾಡಿದ ಸಿಬ್ಬಂದಿ

ಜಗದೀಶ್ ಶೆಟ್ಟರ್ ಮಾತ್ರ ಟಿಕೆಟ್ ಸಿಗುತ್ತದೆಂಬ ವಿಶ್ವಾಸದಲ್ಲಿ ಇದ್ದಾರೆ. ಟಿಕೆಟ್ ಸಿಕ್ಕರೂ ಸ್ಥಳೀಯ ನಾಯಕರು ಪ್ರಚಾರದಲ್ಲಿ ಭಾಗಿಯಾಗುವರಾ? ಒಟ್ಟಿನಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿಗೆ ಕಠಿಣವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...