ಬೆಳಗಾವಿ | ಅನುಮತಿ ನಿರಾಕರಣೆ ನಡುವೆಯೂ ಬೃಹತ್ ‘ಕರಾಳ ದಿನ’ ರ್‍ಯಾಲಿ ನಡೆಸಿದ ಎಂಇಎಸ್

Date:

ಬೆಳಗಾವಿ ಜಿಲ್ಲಾಡಳಿತ ನವೆಂಬರ್‌ 1ರಂದು ‘ಕರಾಳ ದಿನ’ ಆಚರಿಸುವುದನ್ನು ನಿಷೇಧಿಸಿದ ಬಳಿಕವೂ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಶುಕ್ರವಾರ ಬೆಳಿಗ್ಗೆ ನಗರದಲ್ಲಿ ಬೃಹತ್ ‘ಕರಾಳ ದಿನ’ ರ್‍ಯಾಲಿ ನಡೆಸಿದ್ದು, ಪೊಲೀಸ್ ಇಲಾಖೆ ಜಾಣ ಕುರುಡು ಪ್ರದರ್ಶಿಸಿದೆ.

ಬೆಳಗಾವಿ ನಗರದ ಧರ್ಮವೀರ ಸಂಭಾಜಿ ಉದ್ಯಾನದಿಂದ ಪ್ರಾರಂಭವಾದ ಬೈಕ್ ರ್‍ಯಾಲಿಯನ್ನು ನಿಯಂತ್ರಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಜನರು ಹಣೆ ಮತ್ತು ಭುಜಗಳಿಗೆ ಕಪ್ಪು ಕಪ್ಪು ಪಟ್ಟಿ ಧರಿಸಿ, ಬೈಕ್ ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಎಂಇಎಸ್ ರ್‍ಯಾಲಿ ಮತ್ತು ರಾಜ್ಯೋತ್ಸವ ರ್‍ಯಾಲಿ ನಡುವೆ ಘರ್ಷಣೆ ನಡೆಯದಂತೆ ತಡೆಯುವಲ್ಲಿ ಪೊಲೀಸರು ಅಸಹಾಯಕರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರೀ ಬಂದೋಬಸ್ತ್ ಹೊರತಾಗಿಯೂ, ಪ್ರತಿ ಸಣ್ಣ ಮತ್ತು ದೊಡ್ಡ ಬೀದಿಗಳಿಂದ ಜನರು ಕೇಸರಿ ಮತ್ತು ಕಪ್ಪು ಧ್ವಜಗಳನ್ನು ಹಿಡಿದು ರ್‍ಯಾಲಿಯಲ್ಲಿ ಸೇರುತ್ತಿದ್ದುದರಿಂದ ಜನಸಮೂಹ ಹೇಗೆ ಹೆಚ್ಚುತ್ತಿದೆಯೆಂಬುದರ ಕುರಿತು ಪೊಲೀಸರು ಗೊಂದಲಕ್ಕೊಳಗಾಗಿದ್ದರು.

ಬೆಳಗಾವಿ, ನಿಪ್ಪಾಣಿ, ಖಾನಾಪುರ, ಕಾರವಾರ, ಬೀದರ್ ಮತ್ತು ಭಾಲ್ಕಿಯನ್ನು ಮಹಾರಾಷ್ಟ್ರಕ್ಕೆ ವಿಲೀನಗೊಳಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ರ್‍ಯಾಲಿಯ ನಂತರ, ಬಹುತೇಕ ಎಲ್ಲ ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದು, ವಿಶೇಷವಾಗಿ ಹಳೆಯ ಬೆಳಗಾವಿಯ ಶಹಾಪುರ, ವಡಗಾಂವ್, ಅನಗೋಳ, ತಿಲಕವಾಡಿ, ಹಿಂದವಾಡಿ ಮತ್ತು ಉದ್ಯಾಂಬಾಗ್ ಪ್ರದೇಶಗಳಲ್ಲಿ ಸಂಪೂರ್ಣ ಬಂದ್‌ ಮಾಡಲಾಗಿತ್ತು.

ಧರ್ಮವೀರ ಸಂಭಾಜಿ ಉದ್ಯಾನದಿಂದ ಪ್ರಾರಂಭವಾದ ಜಾಥಾ ತಾನಾಜಿ ಗಲ್ಲಿ, ಭಂಡೂರ್‌ ಗಲ್ಲಿ, ಪಾಟೀಲ್ ಗಲ್ಲಿ, ರಾಮಲಿಂಗ ಖಿಂಡ್ ಗಲ್ಲಿ, ಹೇಮು ಕಲಾನಿ ಚೌಕ್, ತಹಶೀಲ್ದಾರ್ ಗಲ್ಲಿ, ಫುಲ್ಬಾಗ್ ಗಲ್ಲಿ, ಕಪಿಲೇಶ್ವರ ಸೇತುವೆ, ಎಪಿಎಂಸಿ ರಸ್ತೆ, ಶಿವಾಜಿ ಗಾರ್ಡನ್, ನರ್ವೇಕರ್ ಗಲ್ಲಿ, ಆಚಾರ್ಯ ಗಲ್ಲಿ, ಸರಾಫ್ ಗಲ್ಲಿ, ಬಸವನ ಗಲ್ಲಿ, ಗಣೇಶ್ ಗಲ್ಲಿ, ಜೆಡ್ ಗಲ್ಲಿ, ಕೋರೆ ಗಲ್ಲಿ, ಕೆ ಮೀರಾಪುರ್ ಗಲ್ಲಿ, ಖಾಡೆ ಬಜಾರ್, ಮಹಾತ್ಮಾ ಫುಲೆ ರಸ್ತೆ ಮತ್ತು ಗೋವಾಸ್ ವೃತ್ತ ಸೇರಿದಂತೆ ರೈಲ್ವೆ ಮೇಲ್ಸೇತುವೆ ಬಳಿಯ ಮರಾಠಾ ಮಂದಿರದಲ್ಲಿ ಮುಕ್ತಾಯಗೊಂಡಿತು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆ

‘ಕರಾಳ ದಿನ’ ರ್‍ಯಾಲಿಯಲ್ಲಿ ಭಾಗವಹಿಸಲು ಮಹಾರಾಷ್ಟ್ರ ನಾಯಕರು ಬೆಳಗಾವಿಗೆ ಪ್ರವೇಶಿಸುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ನಗರದಾದ್ಯಂತ, ವಿಶೇಷವಾಗಿ ಎಂಇಎಸ್ ಮೆರವಣಿಗೆ ನಡೆಯುವ ಮಾರ್ಗವಾದ ಹಳೆ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ‘ಕರಾಳ ದಿನ’ ರ್‍ಯಾಲಿಯಲ್ಲಿ ಭಾಗವಹಿಸುವ ಗುಂಪಿನ ಮೇಲೆ ನಿಗಾ ಇಡಲು ಇಲಾಖೆ ಸಿಸಿಟಿವಿ ಮತ್ತು ಡ್ರೋನ್ ಕ್ಯಾಮೆರಾಗಳನ್ನು ವ್ಯವಸ್ಥೆ ಮಾಡಿದೆ.

ಹದಿನೈದು ದಿನಗಳ ಹಿಂದೆ ಕನ್ನಡ ರಾಜ್ಯೋತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ ಅನುಮತಿ ಕೋರಿ ಜಿಲ್ಲಾಧಿಕಾರಿಯನ್ನು ಭೇಟಿಯಾದ ಎಂಇಎಸ್ ನಾಯಕರಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ರ್‍ಯಾಲಿಗೆ ಅನುಮತಿ ನಿರಾಕರಿಸುವುದಾಗಿ ಘೋಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...