ಬೆಳಗಾವಿ | ಶಾಸಕ ಅಶೋಕ್ ಪಟ್ಟಣವರಿಗೆ ಸಚಿವ ಸ್ಥಾನ ನೀಡಿ: ರೇಣುಕಾ ಶಿವಯೋಗಿ ಶಿವಾಚಾರ್ಯ ಸ್ವಾಮಿಜಿ ಒತ್ತಾಯ

Date:

ಶಾಸಕ ಅಶೋಕ ಪಟ್ಟಣ ಅವರು ತಮ್ಮ ತಂದೆ ತಾಯಿಗಳಂತೆ ಸಮಾಜ ಸೇವೆಯನ್ನು ಮುಂದೆವರೆಸಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ಸಿಗಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಸಕ ಅಶೋಕ್ ಪಟ್ಟಣವರ ಹಿರಿತನವನ್ನು ಗಮನಿಸಿ ಸಚಿವರನ್ನಾಗಿ ಮಾಡಬೇಕು ಎಂದು ಡವಳೇಶ್ವರ ಮಠದ ರೇಣುಕಾ ಶಿವಯೋಗಿ ಶಿವಾಚಾರ್ಯ ಸ್ವಾಮಿ ಒತ್ತಾಯಿಸಿದರು.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ವಿದ್ಯಾಚೇತನ ಆವರಣದಲ್ಲಿ ಕ್ಷೇತ್ರದ ಮಾದರಿ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಬುಕ್ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮಕ್ಕೆ ಶಾಸಕ ಅಶೋಕ ಪಟ್ಟಣವರು ಚಾಲನೆ ನೀಡಿದರು. ಈ ವೇಳೆ ಡವಳೇಶ್ವರ ಮಠದ ರೇಣುಕಾ ಶಿವಯೋಗಿ ಶಿವಾಚಾರ್ಯ ಸ್ವಾಮಿ ಮಾತನಾಡಿದರು.

ರಾಮದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ ಪಟ್ಟಣವರು 3 ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಹಾಗೂ ಸಿದ್ದರಾಮಯ್ಯನವರ ಮೊದಲ ಮತ್ತು ಈಗಿನ ಸರ್ಕಾರದಲ್ಲಿ ಮುಖ್ಯ ಸಚೇತಕರಾಗಿದ್ದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಪೂರ್ವದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಭರವಸೆಯಂತೆ ರಾಮದುರ್ಗ ತಾಲೂಕಿನ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಬುಕ್ ಮತ್ತು ಬ್ಯಾಗ್ ವಿತರಿಸಲು ಪ್ರಾರಂಭಿಸಿದ್ದಾರೆ. ಹಿಂದಿನ ಅವಧಿಯಲ್ಲಿ ಶಾಸಕರಾದ ಸಂದರ್ಭದಲ್ಲಿಯೂ ತಾಲೂಕಿನ ವಿದ್ಯಾರ್ಥಿಗಳಿಗೆ ಬುಕ್ ಮತ್ತು ಬ್ಯಾಗ್ ನೀಡಿದ್ದರು‌.

ಶಾಸಕ ಅಶೋಕ ಪಟ್ಟಣವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ರಾಮದುರ್ಗ ತಾಲೂಕಿನ ಮಾಧ್ಯಮಿಕ, ಪ್ರಾಥಮಿಕ, ಕಾಲೇಜು ವಿದ್ಯಾರ್ಥಿಗಳಿಗೆ ಸೇರಿದಂತೆ 65 ಸಾವಿರ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಸುಮಾರು 4 ಲಕ್ಷ ನೋಟಬುಕ್ ವಿತರಿಸಲಾಗುವುದು. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳನ್ನು ತೆರೆಯಲು ತಿರ್ಮಾನಿಸಿದ್ದೇನೆ. ತಾಲೂಕಿನಲ್ಲಿ ಉತ್ತಮ ಕ್ರೀಡಾಂಗಣಕ್ಕೆ ಜಾಗ ಗುರುತಿಸಿ ಕ್ರೀಡಾಂಗಣ ನಿರ್ಮಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ ಬೆಂಕಿ ಅವಘಡ; ವ್ಯಾಪಾರಸ್ಥರಿಗೆ ಶೀಘ್ರ ನಷ್ಟ ಪರಿಹಾರ ನೀಡಲು ಆಗ್ರಹ

ತಾ ಪಂ ಇಒ ಪ್ರವೀಣ್‌ಕುಮಾರ ಸಾಲಿ, ಬಿಇಒ ಆರ್ ಟಿ ಬಳಿಗಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ ಬಿ ರಂಗನಗೌಡರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಮ್ ಎಸ್ ನಿಜಗುಲಿ ಮಾತನಾಡಿದರು.

ತಹಶೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ, ಡಿವೈಎಸ್‌ಪಿ ಎಂ ಪಾಂಡುರಂಗ ಯೋಗ್ಯ, ಪ್ರದೀಪ್ ಪಟ್ಟಣ, ರಾಯಪ್ಪ ಕತ್ತಿ, ಸೋಮಶೇಖರ್, ಸಿದ್ಲಿಂಗಪ್ಪನವರ ಸೇರಿದಂತೆ ಪುರಸಭೆ ಸದಸ್ಯರು ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಪದಾಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...