ಬೆಳಗಾವಿಯಿಂದ ಸದ್ದಿಲ್ಲದೇ ಮನೆ ಖಾಲಿ ಮಾಡಿದ ಸಂಸದ ಜಗದೀಶ್ ಶೆಟ್ಟರ್!

Date:

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಬೆಳಗಾವಿಯಲ್ಲಿ ಖಾಯಂ ವಿಳಾಸ ಕುರಿತು ಚರ್ಚೆಯಾಗಿತ್ತು. ಆ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ‘ಜಗದೀಶ್ ಶೆಟ್ಟರ್ ಹೊರಗಿನಿಂದ ಬಂದವರು. ಅವರಿಗೆ ಬೆಳಗಾವಿಯಲ್ಲಿ ಖಾಯಂ ವಿಳಾಸ ಇಲ್ಲ’ ಎಂದು ವ್ಯಂಗ್ಯವಾಡಿದ್ದರು.

ಇದಕ್ಕೆ ಉತ್ತರಿಸಿದ್ದ ಜಗದೀಶ್ ಶೆಟ್ಟರ್, “ಬೆಳಗಾವಿ ನನ್ನ ಕರ್ಮ ಭೂಮಿ. ನಾನು ಬೆಳಗಾವಿಯಲ್ಲಿ ಮನೆ ಮಾಡಿದ್ದು ಖಾಯಂ ವಿಳಾಸಕ್ಕಾಗಿ. ಇಲ್ಲಿಯೇ ಇರುವುದಾಗಿ ತಿಳಿಸಿದ್ದರು. ಮತ್ತು ಆ ಸಂದರ್ಭದಲ್ಲಿ ಶೆಟ್ಟರ್ ಅವರು ಬೆಳಗಾವಿ ನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿ ಬಾಡಿಗೆ ಮನೆಯೊಂದನ್ನು ಮಾಡಿ, ಅಲ್ಲಿಯೇ ಕುಟುಂಬ ಸಮೇತ ವಾಸವಿದ್ದರು. ಆದರೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು, ಸಂಸದರಾದ ನಂತರ ಸದ್ದಿಲ್ಲದೆಯೇ ಮನೆ ಖಾಲಿ ಮಾಡಿದ್ದಾರೆ.

ಶೆಟ್ಟರ್ 1

ಶೆಟ್ಟರ್ ಇದ್ದ ಮನೆಯನ್ನು ಮಾಲೀಕ ಬೇರೆಯವರಿಗೆ ಬಾಡಿಗೆ ನೀಡಿದ್ದಾರೆ. ಈ ಸಂಬಂಧ ಆ ಮನೆಯಲ್ಲಿ ಬಾಡಿಗೆ ಇರುವ ವ್ಯಕ್ತಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗದೀಶ್ ಶೆಟ್ಟರ್ ಅವರ ಈ ನಡೆಗೆ ಬೆಳಗಾವಿ ಜಿಲ್ಲೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಚುನಾವಣೆಯಲ್ಲಿ ಬಾಡಿಗೆ ಮನೆ ಮಾಡಿ ಗೆದ್ದ ಮೇಲೆ ಮನೆ ಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಮಾತನಾಡಿರುವ ಜಗದೀಶ್ ಶೆಟ್ಟರ್, “ಒಂದು ಖಾಯಂ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಸೈಟ್ ನೋಡುತ್ತಿದ್ದೇನೆ. ಆದಷ್ಟು ಬೇಗನೆ ಸೈಟ್ ಖರೀದಿಸಿ, ಮನೆ ಕಟ್ಟುವ ಕೆಲಸ ಆರಂಭಿಸುತ್ತೇನೆ. ಜನರಿಗೆ ಲಭ್ಯವಾಗುವ ನಿಟ್ಟಿನಲ್ಲಿ ವಾರದಲ್ಲಿ ಮೂರ್ನಾಲ್ಕು ದಿನ ಬೆಳಗಾವಿಯಲ್ಲೇ ಇರುವ ಜೊತೆಗೆ ಪ್ರತಿ ತಾಲೂಕಿಗೂ ಭೇಟಿ ನೀಡುವ ಕೆಲಸ ಮಾಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಅವರಿದ್ದ ಬಾಡಿಗೆ ಮನೆ
ಜಗದೀಶ್ ಶೆಟ್ಟರ್ ಅವರಿದ್ದ ಬಾಡಿಗೆ ಮನೆ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...