ಬೆಳಗಾವಿ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

Date:

ಕೇಂದ್ರ ಸರ್ಕಾರದ 25 ಮಂತ್ರಿಗಳ ಮೇಲೆ ಚಾರ್ಜ್‌ಶೀಟ್‌ ಮತ್ತು ಪ್ರಕರಣ ದಾಖಲಾಗಿವೆ. ಆದರೂ ಮಂತ್ರಿಗಳಾಗಿದ್ದಾರೆ, ಹೀಗಿರುವಾಗ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಲೋಕೊಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಿಎಂ‌ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಅನುಮತಿ ನೀಡಿರುವ ವಿಚಾರದ ಕುರಿತು ಬೆಳಗಾವಿಯಲ್ಲಿ ಮಾಧ್ಯಗಳ ಜೊತೆಗೆ ಮಾತನಾಡಿ, “ನಿರೀಕ್ಷೆಯಂತೆ ತನಿಖೆಗೆ ಅನುಮತಿ ಕೊಡುತ್ತಾರೆಂದು ಗೊತ್ತಿತ್ತು, ಕೊಟ್ಟಿದ್ದಾರೆ. ನಾವೂ ಕೂಡ ಮಾನಸಿಕವಾಗಿ ಸಿದ್ಧರಾಗಿದ್ದೇವೆ. ಸದ್ಯ ನಮ್ಮಮುಂದೆ ಇರುವುದು ಕಾನೂನು ಹೋರಾಟ. ರಾಜ್ಯಪಾಲರು ಅನುಮತಿ ಕೊಟ್ಟ ಒಂದು ದಿನಕ್ಕೆ ಏನೂ ಆಗಲ್ಲ. ಕಾಯ್ದು ನೋಡಬೇಕು” ಎಂದರು.

“ಬಿಜೆಪಿ ಹೈಕಮಾಂಡ್ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡುತ್ತಿದೆ. ದೇಶದಲ್ಲಿ ಅನೇಕರು ಬಿಜೆಪಿಯನ್ನು ಸಮರ್ಥವಾಗಿ ಎದುರಿಸಿದ್ದಾರೆ, ಸಿದ್ದರಾಮಯ್ಯ ಅವರಿಗೂ ಇದೇ ಪರಿಸ್ಥಿತಿ ಬಂದಿದೆ. ಅವರೂ ಕೂಡಾ ಸಮರ್ಥವಾಗಿ ಎದುರಿಸುತ್ತಿದ್ದಾರೆ. ಹಾಗಾಗಿ, ಅವರು ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ‌. ನಾವೆಲ್ಲಾ ಗಟ್ಟಿಯಾಗಿ ಅವರ ಜೊತೆಗಿದ್ದೇವೆ. ಇಡೀ ಪಕ್ಷ ಅವರ ಜೊತೆ ಇರಬೇಕಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ‌ ಸಿಎಂ ನೀವೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಇರುವಾಗ ಆ ಪ್ರಶ್ನೆ ಬರುವುದಿಲ್ಲ. ಒಂದೇ ಸ್ಥಾನ ಇರುವಾಗ ಎರಡು ಸ್ಥಾನ ಎಲ್ಲಿಂದ ತರೋದು. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ನಾವೂ ಕೂಡಾ ಸಿಎಂ ಆಗುವ ಪ್ರಶ್ನೆ ಬರುವುದಿಲ್ಲ. ಅದೇ ರೀತಿ ಬೇರೆ ಯಾರೂ ಸಿಎಂ ಆಗುವ ಪ್ರಶ್ನೆ ಕೂಡ ಬರೋದಿಲ್ಲ” ಎಂದು ಹೇಳಿದರು.‌

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ; ರಾಜ್ಯಪಾಲರ ಅಧಿಕಾರ ದುರುಪಯೋಗಕ್ಕೆ ಸಿಪಿಐಎಂ ಖಂಡನೆ

“ಜೊಲ್ಲೆ, ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡದ ಬಗ್ಗೆ ರಾಜಭವನದಲ್ಲಿ ಆ ಪ್ರಕರಣಗಳು ಬಾಕಿಯಿವೆ. ಇದನ್ನು ನಾವು ರಾಜಕೀಯವಾಗಿ ನೋಡಬೇಕು. ಹಾಗಾಗಿ, ಬಹಳ ಮಹತ್ವ ಕೊಡುವ ಅವಶ್ಯಕತೆ ಇಲ್ಲ” ಎಂದು ಸತೀಶ್ ಜಾರಕಿಹೊಳಿ‌ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...