ಬೆಳಗಾವಿ | ಆಪ್ತ ಸಹಾಯಕ ಆತ್ಮಹತ್ಯೆ ಪ್ರಕರಣ: ಜಾಮೀನು ಸಿಕ್ಕ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ತಹಶೀಲ್ದಾರ್

Date:

ಬೆಳಗಾವಿ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಸಿಬ್ಬಂದಿ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸೇರಿದಂತೆ ಮೂವರು ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ನಡುವೆಯೇ ಮೂವರು ಆರೋಪಿಗಳಾದ ತಹಶೀಲ್ದಾರ್ ಬಸವರಾಜ ನಾಗರಾಳ, ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು ದೊಡವಾಡಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇವರಿಗೆ ಜಿಲ್ಲಾ ನ್ಯಾಯಾಧೀಶ ಶಿರೋಳ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದರು.

ನಿರೀಕ್ಷಣಾ ಜಾಮೀನು ಮಂಜೂರಾಗುತ್ತಿದ್ದಂತೆ ಕಳೆದ ಒಂಭತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಮತ್ತು ಎ1 ಆರೋಪಿ ತಹಶೀಲ್ದಾರ್ ಬಸವರಾಜ ನಾಗರಾಳ ಶುಕ್ರವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಎಸ್‌ಡಿಎ ಸಿಬ್ಬಂದಿ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡ ಛೇಂಬರಿನಲ್ಲಿಯೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಪ್ರಕರಣದ ಕುರಿತು ತಹಶೀಲ್ದಾರ್ ಬಸವರಾಜ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಆಗಿದ್ದ ರುದ್ರಣ್ಣ ಯಡವನ್ನವರ ನವೆಂಬರ್ 5ರಂದು ತಹಶೀಲ್ದಾರ್ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ, ತಮ್ಮ ಸಾವಿಗೆ ತಹಶೀಲ್ದಾರ್ ಬಸವರಾಜ ನಾಗರಾಳ, ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು ದೊಡವಾಡಿ ಕಾರಣ ಮೂವರು ಹೊಣೆ ಎಂದು ಅವರ ಹೆಸರನ್ನು ವಾಟ್ಸ್‌ಆ್ಯಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದರು. ತದನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...