ಲಂಚ ಪಡೆಯುತ್ತಿದ್ದಾಗ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಬೀಳಿಸಿದ ಪೊಲೀಸರು!

Date:

ಚಿನ್ನಾಭರಣ ಅಂಗಡಿಯೊಂದರ ಮಾಲೀಕನಿಂದ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದ ವೇಳೆ ಐಟಿ ಅಧಿಕಾರಿಯೊಬ್ಬನನ್ನು ರೆಡ್‍ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಐಟಿ ಅಧಿಕಾರಿ ಅವಿನಾಶ್ ಟೊಣಪೆ ಎಂಬಾತ ಚಿಕ್ಕೋಡಿ ಅಂಕಲಿಯ ಪರಶುರಾಮ್ ಬಂಕಾಪುರ ಎಂಬವರ ಬಳಿ 10 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪರಶುರಾಮ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದರಂತೆ ಆರೋಪಿಯನ್ನು ಸೆರೆ ಹಿಡಿಯಲು ಯೋಜನೆ ರೂಪಿಸಿದ್ದ ಪೊಲೀಸರು, ಕವರ್‌ನಲ್ಲಿ 40 ಸಾವಿರ ಹಣ ಇಟ್ಟುಕೊಂಡು ಟೊಣಪೆ ಹೇಳಿದ ಜಾಗಕ್ಕೆ ಹೋಗಿ ನಿಂತಿದ್ದರು. ಖಾಸಗಿ ಡೆಂಟಲ್ ಕಾಲೇಜ್ ಮೈದಾನದಲ್ಲಿ ಹಣ ಪಡೆಯುತ್ತಿದ್ದ ವೇಳೆ ಸಿನಿಮೀಯ ರೀತಿ ದಾಳಿ ಮಾಡಿ, ಮಫ್ತಿಯಲ್ಲಿದ್ದ ಪೊಲೀಸರು ಐಟಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಟಿ ಅಧಿಕಾರಿ ಅವಿನಾಶ್ ಟೊಣಪೆ ವಶಕ್ಕೆ ಪಡೆದ ಬೆಳಗಾವಿ ಪೊಲೀಸರು ಎಪಿಎಂಸಿ ಠಾಣೆಗೆ ಕರೆತಂದು ತನಿಖೆ ನಡೆಸಿದ್ದಾರೆ. ಮಾರ್ಕೆಟ್ ಎಸಿಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಐಟಿ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಅಧಿಕಾರಿಯನ್ನು ವಶಕ್ಕೆ ಪಡೆದಿರುವ ದೃಶ್ಯ, ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಐಟಿ ಅಧಿಕಾರಿ ಅವಿನಾಶ್ ಟೊಣಪೆ ನೇತೃತ್ವದ ತಂಡ ಅಂಕಲಿ ಗ್ರಾಮದಲ್ಲಿರುವ ಬಂಕಾಪುರ ಚಿನ್ನದಂಗಡಿ ಮೇಲೆ ದಾಳಿ ಮಾಡಿತ್ತು. ಆ ಬಳಿಕ ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್​​ ಒಂದರ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು ಸುಮಾರು 42 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದಿರುವ ಸುದ್ದಿ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಡುವೆಯೇ ಬೆಳಗಾವಿಯಲ್ಲಿ ಐಟಿ ಅಧಿಕಾರಿ ಪೊಲೀಸರ ಕೈಗೆ ಸಿನಿಮೀಯ ರೀತಿಯಲ್ಲಿ ಸಿಕ್ಕಿ ಬಿದ್ದಿರುವುದು ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...