ಬೆಳಗಾವಿ | ತುಂಬು ಗರ್ಭಿಣಿಯ ಕೊಲೆ ಪ್ರಕರಣ: ಗಂಡನ ಅಣ್ಣನೇ ಕೊಲೆ ಆರೋಪಿ!

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಡಿ.20ರಂದು ನಡೆದ ತುಂಬು ಗರ್ಭಿಣಿ ಸುವರ್ಣ ಮಠಪತಿ ಅವರ ಭೀಕರ ಕೊಲೆ ಪ್ರಕರಣದಲ್ಲಿ ಗಂಡನ ಅಣ್ಣನೇ ಕೊಲೆ ಆರೋಪಿ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ವಾರದಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 9 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಘಟನೆ‌ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಗರ್ಭಿಣಿ ಸುವರ್ಣ ಮಠಪತಯವರನ್ನು ಹಾರೊಗೇರೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ 33 ವರ್ಷದ ಗರ್ಭಿಣಿ ಸುವರ್ಣ ಮಾಂತಯ್ಯ ಮಠಪತಿ ಸಾವನ್ನಪ್ಪಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಕೃತ್ಯ ಎಸಗಿದ್ದರಿಂದ ಈ ಘಟನೆಯಿಂದಾಗಿ ಇಡೀ ಗ್ರಾಮವೇ ಬೆಚ್ಚಿ ಬಿದ್ದಿತ್ತು.

ಈ ಘಟನೆ ಸಂಬಂಧ ಅಥಣಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ನಂತರ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಆರೋಪಿಯ ಜಾಡು ಹಿಡಿದು ಹೋದಾಗ ಕೊಲೆ ಮಾಡಿದ್ದು ಮೃತ ಸುವರ್ಣಳ ಸ್ವಂತ ಅಕ್ಕನ ಗಂಡ ಅಂದ್ರೆ ಭಾವನೇ ಇಂತಹ ಪೈಶಾಚಿಕ ಕೃತ್ಯವೆಸಗಿರೋದು ಪೋಲಿಸರಿಂದ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ನಿವಾಸಿ ಅಪ್ಪಯ್ಯ ರಾಚಯ ಮಠಪತಿ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕೆಲಸವಿಲ್ಲದೆ, ಕುಡಿತದ ದಾಸನಾದ ಕೊಲೆ ಆರೋಪಿ ಅಪ್ಪಯ್ಯ 7.5 ಲಕ್ಷ ಸಾಲ ಮಾಡಿದ್ದ. ಕೊಲೆಯಾದ ಸುವರ್ಣ ಬಳಿಯೂ ಸುಮಾರು 50,000 ಹಣ ಪಡೆದಿದ್ದ. ಮತ್ತೆ ಹಣ ನೀಡುವಂತೆ ಕೇಳುತ್ತಿದ್ದ.

ಕೊಲೆ ನಡೆಯೋ ಎರಡು ದಿನಗಳ ಹಿಂದೆ ಕೊಲೆ ಆರೋಪಿ ಅಪ್ಪಯ್ಯ ಜೊತೆ ಸುವರ್ಣ, ನನ್ನ ಡೆಲಿವರಿ ಸಮಯ ಹತ್ರ ಬಂದಿದೆ. ನನಗೆ ನನ್ನ ಹಣ ನೀಡು ಎಂದು ಫೋನ್‌ನಲ್ಲಿ ಗದರಿದ್ದಾಳೆ. ಸಿಟ್ಟಿಗೆದ್ದ ಅಪ್ಪಯ್ಯ ಆಕೆಯನ್ನೇ ಮುಗಿಸಿ ಬಿಡುವ ಸಂಚು ಹಾಕಿ, ಡಿ. 20ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವರ ತೋಟದ ಮನೆಗೆ ಬಂದು ಗರ್ಭಿಣಿ ಸುವರ್ಣ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಮೈಮೇಲಿದ್ದ ಓಲೆ ಹಾಗೂ ಸಣ್ಣಪುಟ್ಟ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿದ್ದನು. ಅಥಣಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೃತ ಸುವರ್ಣ 18 ವರ್ಷಗಳ ಹಿಂದೆ, ಮಹಾಂತಯ್ಯಾ ದುಂಡಯ್ಯಾ ಮಠಪತಿ ಅವರನ್ನು ವಿವಾಹವಾಗಿದ್ದರು. ಇವರಿಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು ಅವರನ್ನು 15 ವರ್ಷದ ಸಾಕ್ಷಿ, 12 ವರ್ಷದ ಸಾಂಯವ್ವಾ, 9 ವರ್ಷದ ಶ್ರಾವಣಿ ಹಾಗೂ 6 ವರ್ಷದ ಸುರಕ್ಷಾ ಎಂದು ಗುರುತಿಸಲಾಗಿದೆ. ಇನ್ನೊಂದು ವಾರದಲ್ಲಿ ಈಕೆ ಐದನೇ ಮಗುವಿಗೆ ಜನ್ಮ ನೀಡಬೇಕಿತ್ತು.

ಕೇವಲ ಹಣಕ್ಕಾಗಿ ತುಂಬು ಗರ್ಭಿಣಿ ಅಂತಾನೂ ಲೆಕ್ಕಿಸದೆ ನೀಚ ಕೃತ್ಯವೆಸಗಿದ ಪಾಪಿಯನ್ನು ಪೊಲೀಸರು, ಜೈಲಿಗಟ್ಟಿದ್ದು ಇತ್ತ ತಾಯಿ ಹಾಗೂ ಮಗುವನ್ನು ಕಳೆದುಕೊಂಡ ಕುಟುಂಬದ ರೋದನ ಹೇಳತೀರದಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...