ಬೆಳಗಾವಿ | ಅತ್ಯಾಚಾರ ಆರೋಪ: ಮೇಖಳಿಯ ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ, ಬಂಧನ

Date:

17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಹಿನ್ನಲೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ​ಜೈಲಿಗಟ್ಟಿದ್ದಾರೆ.

ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ಸ್ವಾಮೀಜಿ ರಾಯಚೂರಿಗೆ ಕರೆದೊಯ್ದಿದ್ದರು. ಮೇ 13, 14ರಂದು ರಾಯಚೂರಿನಲ್ಲಿ ಎರಡು ದಿನ ಇದ್ದರು. ಬಳಿಕ 15ರ ರಾತ್ರಿ ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿದ್ದರು. ಎರಡೂ ಕಡೆ ವಾಸ್ತವ್ಯ ಇದ್ದಾಗಲೂ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿಯೂ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 16ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಸ್ವಾಮೀಜಿ ಬಾಲಕಿಯನ್ನು ಬಿಟ್ಟು ಹೋಗಿದ್ದರು. ಈ ಬಗ್ಗೆ ಮೇ 17ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬಳಿಕ ಮಹಿಳಾ ಠಾಣೆ ಪೊಲೀಸರು ಪ್ರಕರಣವನ್ನು ಮೂಡಲಗಿ ಠಾಣೆಗೆ ವರ್ಗಾಯಿಸಿದ್ದರು.

ದೂರು ದಾಖಲಾಗುತ್ತಿದ್ದಂತೆ ಲೋಕೇಶ್ವರ ಸ್ವಾಮೀಜಿಯ ರಾಮಮಂದಿರ ಮಠಕ್ಕೆ ತೆರಳಿದ ಪೊಲೀಸರು ಮಠದಲ್ಲಿ ಶೋಧಕಾರ್ಯ ನಡೆಸಿದ್ದರು. ಕಳ್ಳ ಸ್ವಾಮೀಜಿಯ ಮಠದಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿರುವುದು ತಿಳಿದುಬಂದಿದೆ. ಹೀನಕೃತ್ಯವೆಸಗಿದ ಸ್ವಾಮೀಜಿಯನ್ನು ಬಂಧಿಸಿದ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಆರಾಮ ಇಲ್ಲದೇ ಇದ್ದಾಗ ಬಾಲಕಿಯ ತಂದೆ-ತಾಯಿಯೇ ಬಾಲಕಿಯನ್ನು ವಾರಗಟ್ಟಲೆ ಮಠದಲ್ಲೇ ಬಿಟ್ಟು ಹೋಗುತ್ತಿದ್ದರು. ಅದನ್ನೇ ಸ್ವಾಮೀಜಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆಂಬ ಆರೋಪವೂ ಇದೆ.

ಇದನ್ನೂ ಓದಿದ್ದೀರಾ? ದಾವಣಗೆರೆ | ಪರಿಶಿಷ್ಟ ಜಾತಿ ಗಣತಿ ಶೇ.100ರಷ್ಟು ‌ಸಾಧನೆಯ ಹೆಗ್ಗಳಿಕೆ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.

2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಇದೀಗ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಹಿನ್ನಲೆ ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಸ್ವಾಮೀಜಿಯನ್ನು ಯಾವುದೇ ಕಾರಣಕ್ಕೂ ಬಿಡದಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಘಟನೆ ಸಂಬಂಧ ಮಾಹಿತಿಗಾಗಿ ಈ ದಿನ.ಕಾಮ್‌ ರಾಯಬಾಗ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿದೆಯಾದರೂ ಕರೆಗೆ ಯಾರೂ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...