ಬೆಳಗಾವಿ | ನಷ್ಟದ ಆತಂಕ ಎದುರಿಸುತ್ತಿರುವ ಸೋಯಾಬೀನ್ ಬೆಳೆದ ಬೆಳೆಗಾರರು!

Date:

ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬೈಲಹೊಂಗಲ, ಗೋಕಾಕ, ಕಿತ್ತೂರು, ಬೆಳಗಾವಿ ತಾಲೂಕುಗಳಲ್ಲಿ ರೈತರು ಸೋಯಾಬೀನ್ ಬೆಳೆ ಬೆಳೆದಿದ್ದು, ಸರಿಯಾದ ಇಳುವರಿ ಮತ್ತು ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ.

ಈ ಕುರಿತು ಈ ದಿನ.ಕಾಮ್ ಜೊತೆ ಸೊಯಾಬೀನ್ ಬೆಳೆಗಾರರಾದ ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ ಶೇಖಪ್ಪ ಅಕ್ಕನ್ನವರ ಮಾತನಾಡಿ, ಈ ವರ್ಷದ ಅತಿಯಾದ ಮಳೆಯಿಂದ ತಂಪಾಗಿ ಹೂವು ಉದುರಿ, ಕೆಂಪು ರೋಗ ಬಂದಿದೆ. ಇದರಿಂದ ಇಳುವರಿಯೂ ಕಡಿಮೆ ಬಂದಿದೆ. ಇದರ ಜೊತೆಗೆ ಸೋಯಾಬೀನ್ ಬೆಳೆಗೆ ಸರಿಯಾದ ಬೆಲೆಯೂ ಇಲ್ಲ ಎಂದು ತಿಳಿಸಿದ್ದಾರೆ.

ಒಂದು ಎಕರೆಯಲ್ಲಿ ಒಳ್ಳೆಯ ಇಳುವರಿ ಬಂದರೆ 8ರಿಂದ 9 ಕ್ವಿಂಟಾಲ್ ಬರುತ್ತದೆ. ಆದರೆ ಈ ವರ್ಷ ಕೇವಲ 3ರಿಂದ 4 ಕ್ವಿಂಟಲ್ ಇಳುವರಿ ಬಂದಿದೆ. ಹಿಂದಿನ ವರ್ಷ ಒಂದು ಕ್ವಿಂಟಾಲ್ ಸೋಯಾಬೀನ್‌ಗೆ 7 ರಿಂದ 8 ಸಾವಿರದವರೆಗೆ ಮಾರಾಟವಾಗಿತ್ತು. ಈ ವರ್ಷ 4 ಸಾವಿರದವರೆಗೆ ಮಾತ್ರ ಬೆಲೆ ಇದೆ. ಒಂದು ಎಕರೆ ಸೋಯಾಬೀನ್ ಬೆಳೆಯಲು ಸುಮಾರು 15 ಸಾವಿರ ರೂಪಾಯಿ ವೆಚ್ಚ ತಗಲುತ್ತದೆ. ಈ ವೆಚ್ಚವನ್ನು ಸಹ ಭರಿಸಲು ಆಗುವುದಿಲ್ಲ. ಸೋಯಾಬೀನ್ ಬೆಳೆ ಬೆಳೆದ ರೈತರ ಬದುಕು ಮೂರಾಬಟ್ಟೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಕೃಷಿಕ ಸಮಾಜದ ಮುಖಂಡರಾದ ಸಿದಗೌಡ ಮೋದಗಿ ಮಾತನಾಡಿ, ಸೋಯಾಬೀನ್ ಸೂಕ್ಷ್ಮ ಹವಾಮಾನದಲ್ಲಿ ಬೆಳೆಯುವಂತಹ ಬೆಳೆ. ಹಿಂದಿನ ವರ್ಷ ಬರಗಾಲದಿಂದ ಸೋಯಾಬಿನ್ ಇಳುವರಿ ಕಡಿಮೆ ಆಗಿತ್ತು. ಈ ವರ್ಷ ಅತಿಯಾದ ಮಳೆಯಿಂದ ಉತ್ಪನ್ನ ಕುಂಠಿತವಾಗಿದೆ ಎಂದು ತಿಳಿಸಿದ್ದಾರೆ.

ಸೋಯಾಬೀನ್ ಮಾರಾಟಕ್ಕೆ ಒಂದು ಸೂಕ್ತ ಮಾರುಕಟ್ಟೆ ಇಲ್ಲ.‌ ದಲ್ಲಾಳಿಗಳು ನೇರವಾಗಿ ರೈತರ ಊರುಗಳಲ್ಲಿ ಬಂದು ಖರಿದಿಸುತ್ತಾರೆ ಹಾಗೂ ತೂಕದಲ್ಲಿ ಮೋಸ ಮಾಡುತ್ತಾರೆ. ನಾವು ಈ ಕುರಿತು ಖಾಸಗಿ ಮಾರುಕಟ್ಟೆಯನ್ನು ಬಂದ್ ಮಾಡಿ ಸರ್ಕಾರಿ ಮಾರುಕಟ್ಟೆಯನ್ನು ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ರೈತರು ಸಹ ಕೃಷಿ ಮಾರುಕಟ್ಟೆಗೆ ಬಂದು ಮಾರಾಟ ಮಾಡುವಂತಾಗಬೇಕು ಹಾಗೂ ಸರ್ಕಾರ ಸೋಯಾಬೀನ್ ಬೆಳೆದ ರೈತರಿಗೆ 10 ಸಾವಿರ ಬೆಂಬಲ ಬೆಲೆ ಕೊಡಬೇಕು ಎಂದು ಹೇಳಿದರು‌

ಬೆಳಗಾವಿ ಜಿಲ್ಲೆಯಲ್ಲಿ ಸೋಯಾಬೀನ್ ಬೆಳೆದ ರೈತರು ಬಿತ್ತನೆಗೆ ಮಾಡಿದ ಬೀಜ ಗೊಬ್ಬರ ಔಷಧಿ, ಆಳುಗಳ ಖರ್ಚು ಸಹ ಭರಿಸಲು ಸಾಧ್ಯವಿಲ್ಲದೆ ಕಂಗಾಲಾಗಿದ್ದಾರೆ ಸರ್ಕಾರವು ರೈತರ ನೆರವಿಗೆ ಬರುವುದು ಅವಶ್ಯವಾಗಿದೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...