ಬೆಳಗಾವಿ | ಕುಂಭಮೇಳದಲ್ಲಿ ಕಾಲ್ತುಳಿತ; ನಾಲ್ವರು ಸಾವು, ಒಬ್ಬರಿಗೆ ಗಾಯ

Date:

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಕಾರ್ಯಕ್ರಮಕ್ಕೆ ತೆರಳಿದ್ದ ಬೆಳಗಾವಿಯ ಇಬ್ಬರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ನಗರದ ವಡಗಾಂವಿಯ ನಿವಾಸಿ ಜ್ಯೋತಿ ಹತ್ತರವಾಠ ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ, ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ, ಶಿವಾಜಿ ನಗರದ ನಿವಾಸಿ ಮಹಾದೇವಿ ಮೃತಪಟ್ಟಿದ್ದು, ಸರೋಜಿನಿ ನಡುವಿನಹಳ್ಳಿ ಗಾಯಗೊಂಡಿದ್ದಾರೆ.

ಗಾಯಗೊಂಡವರು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದ್ದು, ಘಟನೆಯ ನಂತರ ಅನೇಕರು ತಮ್ಮ ಕುಟುಂಬ ಸದಸ್ಯರು ಮತ್ತು ಆಪ್ತರಿಂದ ಬೇರ್ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಗಾವಿಯಿಂದ ಸುಮಾರು 60 ಮಂದಿ ಎರಡು ಬಸ್‌ಗಳಲ್ಲಿ ಪ್ರಯಾಗ್ ರಾಜ್‌ಗೆ ಪ್ರಯಾಣಿಸಿ ಪವಿತ್ರ ಸ್ನಾನ ಮಾಡಲು ಮಧ್ಯರಾತ್ರಿ 1ಕ್ಕೆ ಗಂಗಾ-ಯಮುನಾ ಸಂಗಮ ತಲುಪಿದೆವು. ಇದ್ದಕ್ಕಿದ್ದಂತೆ, ಕಾಲ್ತುಳಿತ ಪ್ರಾರಂಭವಾಯಿತು. ಜನರು ನಮ್ಮನ್ನು ತುಳಿಯಲಾರಂಭಿಸಿದರು. ನಮ್ಮಲ್ಲಿ ಅನೇಕರು ಸ್ಥಳಾಂತರಗೊಂಡಿದ್ದು, ಕೆಲವರು ಕಾಲ್ತುಳಿತಕ್ಕೊಳಗಾಗಿದ್ದೇವೆ” ಎಂದು ಗಾಯಾಳು ಸರೋಜಿನಿ ನಡುವಿನಹಳ್ಳಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕುಂಭಮೇಳಕ್ಕೆ ತೆರಳಿದ್ದ ಯುವಕರು ಅಪಘಾತದಲ್ಲಿ ದುರ್ಮರಣ

“ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಬೆಳಗಾವಿಯಿಂದ ಜನರನ್ನು ಕರೆದೊಯ್ದಿದ್ದ ಟ್ರಾವೆಲ್ ಏಜೆನ್ಸಿಯೊಂದಿಗೆ ಆಡಳಿತವು ನಿರಂತರವಾಗಿ ಸಂಪರ್ಕದಲ್ಲಿದೆ. ಬೆಳಗಾವಿಯ ನಾಲ್ವರು ಸಾವನ್ನಪ್ಫಿರುವ ಮಾಹಿತಿ ಖಚಿತವಾಗಿದೆ. ಅವರ ಶವಗಳನ್ನು ತರಲು ಕ್ರಮ ವಹಿಸಲಾಗಿದೆ ಮತ್ತು ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುವುದು” ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...