ಬೆಳಗಾವಿ | ಶಾಲೆ ಬ್ಯಾಗ್ ತರದಿದ್ದಕ್ಕೆ ವಿದ್ಯಾರ್ಥಿಗೆ ಚಾಕು ಇರಿದ ಸಹಪಾಠಿಗಳು

Date:

ವಿದ್ಯಾರ್ಥಿಯೊಬ್ಬನಿಗೆ ಶಾಲೆ ಬ್ಯಾಗ್ ತರುವಂತೆ ಹೇಳಿದ್ದನ್ನು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಸಹಪಾಠಿಗಳು ವಿದ್ಯಾರ್ಥಿಗೆ ಮಾರಕಾಸ್ತ್ರ(ಚಾಕು)ದಿಂದ ಇರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ.

ನಗರದಲ್ಲಿರುವ ಸರ್ಕಾರಿ‌ ಪ್ರೌಢಶಾಲೆ ಪಕ್ಕದಲ್ಲಿರುವ ವಾಲ್ಮೀಕಿ ಮೈದಾನದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ಓರ್ವ ವಿದ್ಯಾರ್ಥಿಯ ಕುತ್ತಿಗೆ, ಕೈ ಮತ್ತು ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಾಕು ಇರಿತಕ್ಕೆ ಒಳಗಾದ ವಿದ್ಯಾರ್ಥಿ ಪ್ರದೀಪ ಎಂದು ಗುರುತಿಸಲಾಗಿದೆ.

10ನೇ ತರಗತಿಯಲ್ಲಿ ಓದುತ್ತಿದ್ದ ಪ್ರದೀಪ ಬಂಡಿವಡ್ಡರ ಎಂಬಾತನಿಗೆ ಅದೇ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತಿದ್ದ ಮೂವರು ಸಹಪಾಠಿಗಳು ಸಂಜೆ ಶಾಲೆ ಬಿಟ್ಟ ನಂತರ ಆತನ ಬ್ಯಾಗ್‌ ತರುವಂತೆ ಹೇಳಿದ್ದಾರೆ. ಆತ ಬ್ಯಾಗ್‌ ತರಲು ನಿರಾಕರಿಸಿದ ಕಾರಣಕ್ಕೆ ಚಾಕು ಇರಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಸಿಲೆಂಡರ್ ಸ್ಫೋಟದಲ್ಲಿ ಮೃತಪಟ್ಟ 8 ಮಂದಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ನರಳಾಡುತಿದ್ದ ಗಾಯಾಳು ಪ್ರದೀಪ್‌ನನ್ನು ಸ್ಥಳೀಯ ಶಿಕ್ಷಕರು ಗೋಕಾಕ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಗರ ಪೊಲೀಸರು ಆಸ್ಪತ್ರೆಗೆ ದೌಢಾಯಿಸಿ ಹಲ್ಲೆಗೊಳಗಾದವನಿಂದ ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದು, ಗೋಕಾಕ್ ನಗರ ಠಾಣೆಯಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...