ಬೆಳಗಾವಿ | ವೃದ್ಧನ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

Date:

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ವೃದ್ಧ ಅಪ್ಪಾಸಾಬ ಭೀಮಾ ನಾಯಿಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಖಡಕಲಾಟ ಪೊಲೀಸರು ಬಂಧಿಸಿದ್ದಾರೆ.

ವಾಳಕಿ ಗ್ರಾಮ ನಿವಾಸಿಗಳಾದ ಸಂತೋಷ ಪರಶರಾಮ ನಾಯಿಕ(30), ಹೊಳೆಪ್ಪಾ ಅಲಿಯಾಸ್ ಬಚ್ಚನ ಮಾರುತಿ ಘಸ್ತಿ(23) ಮತ್ತು ಮಹೇಶ ಸುರೇಶ ಬೇರಡ(20) ಬಂಧಿತ ಆರೋಪಿಗಳು.

ನಮ್ಮ ತಂದೆ ಅಪ್ಪಾಸಾಬ ಭೀಮಾ ನಾಯಿಕ(64) ಕಾಣೆಯಾಗಿದ್ದಾರೆ ಎಂದು ಚಿಕ್ಕೋಡಿ ತಾಲೂಕಿನ ವಾಳಕಿ ಗ್ರಾಮದ ಕಾಕಾಸಾಹೇಬ ಅಪ್ಪಾಸಾಬ ನಾಯಿಕ ಅವರು ಸಮೀಪದ ಖಡಕಲಾಟ ಪೊಲೀಸ್‌ ಠಾಣೆಯಲ್ಲಿ ಆಗಸ್ಟ್ 11ರಂದು ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 9ರಂದು ಕಾಕಾಸಾಹೇಬ ಅವರು ಮತ್ತೆ ಠಾಣೆಗೆ ಬಂದು, ಮೂವರು ಸೇರಿ ನನ್ನ ತಂದೆಯನ್ನು ಕೊಲೆ ಮಾಡಿ ಶವವನ್ನು ಮಹಾರಾಷ್ಟ್ರದ ಫೋಂಡಾ ಘಾಟ್‌ನಲ್ಲಿ ಎಸೆದಿದ್ದಾರೆಂದು ಪೊಲೀಸರಿಗೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಆರೋಪಿ ಸಂತೋಷ ಪರಶರಾಮ ನಾಯಿಕ ಸಾರಾಯಿ ಕುಡಿದು ಅಮಲಿನಲ್ಲಿ ಕೊಲೆಯ ಮಾಹಿತಿಯನ್ನು ವಾಳಕಿ ಗ್ರಾಮದ ಕೆಂಪಣ್ಣ ನಾಯಿಕ ಅವರ ಮುಂದೆ ಹೇಳಿದ್ದಾನೆಂದು ಕಾಕಾಸಾಹೇಬ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸ್ಥಳೀಯ ಸಿಪಿಐ ಬಿ ಎಸ್ ತಳವಾರ ನೇತೃತ್ವದಲ್ಲಿ ಖಡಕಲಾಟ ಠಾಣೆಯ ಪ್ರಭಾರ ಪಿಎಸ್‌ಐ ಬಿ ಕೆ ಪಾಟೀಲ, ಸ್ಥಳೀಯ ಗ್ರಾಮೀಣ ಪಿಎಸ್‌ಐ ಶಿವರಾಜ ನಾಯಿಕವಾಡಿ, ಸ್ಥಳೀಯ ಬಿಸಿಪಿಎಸ್‌ ಪಿಎಸ್‌ಐ ರಮೇಶ ಪವಾರ ಮತ್ತು ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶವದ ಕುರುಹುಗಳ ಬಗ್ಗೆ ಪೊಲೀಸರು ಪತ್ತೆ ಕಾರ್ಯ ಮುಂದುವರೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...