ಬೆಳಗಾವಿ | ನ್ಯಾಯಾಲಯದ ಆವರಣದಲ್ಲಿ ಪತ್ನಿ ಕೊಲೆಗೆ ಯತ್ನ; ದುರುಳ ಪತಿಗೆ 10 ವರ್ಷ ಜೈಲು

Date:

ನ್ಯಾಯಾಲಯದ ಆವರಣದಲ್ಲಿಯೇ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ದುರುಳ ಪತಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೈಲು ಶಿಕ್ಷೆಯ ಆದೇಶ ನೀಡಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನನಗೊಂಡಿಕೊಪ್ಪ ಗ್ರಾಮದ ಶಿವಪ್ಪ ನಿಂಗಪ್ಪ ಅಡಕಿ 2021ರಲ್ಲಿ ಕೋರ್ಟ್‌ ಆವರಣದಲ್ಲಿಯೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆತನಿಗೆ 10 ವರ್ಷ ಜೈಲು ಮತ್ತು 25 ಸಾವಿರ ರೂ. ದಂಡ ವಿಧಿಸಿ ಕೋರ್ಟ್‌ ಆದೇಶಿಸಿದೆ.

ಆರೋಪಿ ಶಿವಪ್ಪ ಮತ್ತು ಆತನ ಪತ್ನಿ ಜಯಮಾಲಾ ದಾಂಪತ್ಯ ಕಲಹದಿಂದ ಕೋರ್ಟ್‌ ಮೆಟ್ಟಿಲೇರಿದ್ದರು. 2021ರ ಅಕ್ಟೋಬರ್ 29ರಂದು ಬೈಲಹೊಂಗಲ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ಮುಗಿಸಿ ಹೊರ ಬಂದಾಗ, ನ್ಯಾಯಾಲಯದ ಆವರಣದಲ್ಲಿಯೇ ಜಯಮಾಲಾ ಮೇಲೆ ಶಿವಪ್ಪ ದಾಳಿ ನಡೆಸಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸುಭಾಷ ಸಂಕದ ಅವರು, ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಶಿಕ್ಷೆ ವಿಧಿಸಿದ್ದಾರೆ. ವಿಧಿಸಲಾದ ದಂಡವನ್ನು ಪಾವತಿಸದಿದ್ದಲ್ಲಿ ಆರೋಪಿಯು ಹೆಚ್ಚುವರಿ ಮೂರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪಿನಲ್ಲಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...