ಬೆಳಗಾವಿ | ‘ಇಎಂಐ’ ಕಟ್ಟಿಲ್ಲವೆಂದು ರೈತನ ಮನೆ ‘ಸೀಜ್’ ಮಾಡಿದ ಬ್ಯಾಂಕ್‌; ಬೀದಿ ಪಾಲಾದ ಕುಟುಂಬ!

Date:

ಸಾಲ ಮರುಪಾವತಿ ಮಾಡಿಲ್ಲವೆಂದು ರೈತರೊಬ್ಬರ ಮನೆಯನ್ನು ‘ಈಕ್ವಿಟಾಸ್ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌’ನ ಅಧಿಕಾರಿಗಳು ಸೀಜ್‌ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮನೆಯನ್ನು ‘ಮುಟ್ಟುಗೋಲು’ ಹಾಕಿಕೊಂಡಿರುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ನಾಗನೂರು ಗ್ರಾಮದ ರೈತ ಸೈದಪ್ಪ ಗಡಾಡಿ ಅವರ ಮನೆಯನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಸೈದಪ್ಪ ಅವರು ಸಾಲವನ್ನು ಸಕಾಲದಲ್ಲಿ ಮರುಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ. ಬ್ಯಾಂಕ್‌ ಧೋರಣೆಯಿಂದ ಸೈದಪ್ಪ ಅವರು ತನ್ನ ಪತ್ನಿ ಮತ್ತು ಮಗು ಸೇರಿದಂತೆ ಕುಟುಂಬದ 7 ಮಂದಿ ಬೀದಿಪಾಲಾಗಿದ್ದಾರೆ. ಕುಟುಂಬವು ಬಯಲಿನಲ್ಲಿಯೇ ಬದುಕುವಂತಾಗಿದೆ.  

ರೈತ ಸುಮಾರು ಒಂದೂವರೆ ವರ್ಷಗಳಿಂದ ಕಂತು (ಇಎಂಐ) ಪಾವತಿಸಿಲ್ಲ ಎಂದು ಬ್ಯಾಂಕ್ ಆರೋಪಿಸಿದೆ. ಆದರೆ, ರೈತ ತಾವು ಪಡೆದಿದ್ದ 5 ಲಕ್ಷ ರೂ. ಸಾಲದಲ್ಲಿ 3.16 ಲಕ್ಷ ರೂ.ಗಳವರೆಗೆ ಮರುಪಾವತಿಸಿದ್ದಾರೆ. ಈ ನಡುವೆ ತಾವು ಸಾಕಿದ್ದ ದನಗಳು ಸಾವನ್ನಪ್ಪಿದ್ದರಿಂದ ನಷ್ಟ ಅನಭವಿಸಿದ್ದರು. ಆ ವೇಳೆ, ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ. ಆದರೆ, ಇತ್ತೀಚೆಗೆ ಮತ್ತೆ ಇಎಂಐ ಪಾವತಿಸಲು ಪುನರಾರಂಭಿದ್ದೇನೆ ಎಂದು ಸಂತ್ರಸ್ತ ರೈತ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಜಾತಿ ದೌರ್ಜನ್ಯ | ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

“ನಾನು ಕಂತುಗಳನ್ನು ಪಾವತಿಸಿದ್ದೇನೆ. ಆದರೆ, ಬ್ಯಾಂಕ್‌ನ ಸಿಬ್ಬಂದಿ ಆ ಮೊತ್ತವನ್ನು ಬ್ಯಾಂಕ್‌ನಲ್ಲಿ ಠೇವಣಿ ಇಡದೆ, ದುರುಪಯೋಗ ಮಾಡಿಕೊಂಡಿದ್ದಾರೆ” ಎಂದು ಸೈದಪ್ಪ ಆರೋಪಿಸಿದ್ದಾರೆ.

“ತಮ್ಮ ಕಂತಿನ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಪದೇ ಪದೇ ಮನವಿ ಮಾಡಿದರೂ, ಬ್ಯಾಂಕ್ ಅಧಿಕಾರಿಗಳು ಸಮಸ್ಯೆಯನ್ನು ಪರಿಹಸಲಿಲ್ಲ” ಎಂದು ರೈತ ಹೇಳಿದ್ದಾರೆ. ಆದರೆ, ಅವರ ಆರೋಪವನ್ನು ಬ್ಯಾಂಕ್ ನಿರಾಕರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...