ಬೆಳಗಾವಿ | ಕುರ್‌ಆನ್‌ ಸುಟ್ಟು ಧಾರ್ಮಿಕ ಭಾವನೆಗೆ ಧಕ್ಕೆ; ಮುಸ್ಲಿಮರ ಪ್ರತಿಭಟನೆ – ಇನ್ಸ್‌ಪೆಕ್ಟರ್ ಅಮಾನತು

Date:

ಕಿಡಿಗೇಡಿಗಳು ಕುರ್‌ಆನ್‌ ಗ್ರಂಥವನ್ನು ಸುಟ್ಟು ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂತಿಬಸ್ತವಾಡ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಕುರ್‌ಆರ್‌ಅನ್ನು ಸುಟ್ಟ ದುಷ್ಕರ್ಮಿಗಳನ್ನು ಬಂಧಿಸುವಂತೆ ಮುಸ್ಲಿ ಸಮುದಾಯದ ಮುಖಂಡರು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯವಹಿಸಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ ಒಬ್ಬರನ್ನು ಅಮಾನತು ಮಾಡಲಾಗಿದೆ.

ಸಂತಿಬಸ್ತವಾಡ ಗ್ರಾಮದಲ್ಲಿ ಮೇ 12ರಂದು ಕೋಮುವಾದಿ ದುಷ್ಕರ್ಮಿಗಳು ಕುರ್‌ಆನ್‌ ಸುಟ್ಟು ಹಾಕಿದ್ದರು. ಘಟನೆ ನಡೆದು ಐದಾರು ದಿನಗಳು ಕಳೆದಿದ್ದರೂ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಪಿಗಳನ್ನು ಬಂಧಿಸಿಲ್ಲವೆಂದು ಆರೋಪಿಸಿ ಮುಸ್ಲಿಂ ಮುಖಂಡರು ಮತ್ತು ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ 10 ಸಾವಿರಕ್ಕೂ ಹೆಚ್ಚು ಮುಸ್ಲಿಮರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಕ್ಕೊತ್ತಾಯ ಸ್ವೀಕರಿಸಿದ ಜಿಲ್ಲಾಧಿಕಾರಿ, “ಆರೋಪಿಗಳನ್ನು ಬಂಧಿಸಲು ಐದಾರು ದಿನ ಕಾಲಾವಕಾಶ ಕೊಡಿ. ಐದು ದಿನಗಳೊಳಗೆ ಆರೋಪಿಗಳನ್ನು ಬಂಧಿಸುತ್ತೇವೆ. ಪ್ರತಿಭಟನೆಯನ್ನು ನಿಲ್ಲಿಸಿ” ಎಂದು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತ-ಪಾಕ್ ಸಂಘರ್ಷ | ಜಾಗತಿಕವಾಗಿ ಭಾರತಕ್ಕೆಷ್ಟು ಬೆಂಬಲ ಸಿಕ್ಕಿತು?

ಏಪ್ರಿಲ್ 12ರಂದು ಸಂತಿಬಸ್ತವಾಡ ಗ್ರಾಮದ ಈದ್ಗಾ ಮೈದಾನದ ಮಿನಾರ್‌ಗಳಿಗೆ ಧಕ್ಕೆ ಉಂಟುಮಾಡಲಾಗಿತ್ತು. ಆ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆ ಘಟನೆ ಬೆನ್ನಲ್ಲೇ, ಅದೇ ಗ್ರಾಮದಲ್ಲಿ ಇದೀಗ ಕುರ್‌ಆನ್‌ಅನ್ನು ಸುಟ್ಟು ಧಾರ್ಮಿಕ ಉದ್ವಿಗ್ನತೆ ಉಂಟುಮಾಡಲು ಯತ್ನಿಸಲಾಗಿದೆ. ಈ ಎರಡೂ ಪ್ರಕರಣಗಳಲ್ಲಿ ಇನ್ಸ್‌ಪೆಕ್ಟರ್‌ ಕರ್ತವ್ಯಲೋಪ ಕಂಡುಬಂದಿದೆ ಎಂದು ಆರೋಪಿಸಲಾಗಿದ್ದು, ಬೆಳಗಾವಿ ಗ್ರಾಮೀಣ ಠಾಣೆಯ ಇನ್‌ಸ್ಪೆಕ್ಟರ್‌ ಮಂಜುನಾಥ ಹಿರೇಮಠ ಅವರನ್ನು ಅಮಾನತು ಮಾಡಲಾಗಿದೆ. ಬೆಳಗಾವಿ ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...