ಬೆಳಗಾವಿ | ಗೋವಾ, ಮಹಾರಾಷ್ಟ್ರ ಗಡಿಗಳಲ್ಲಿ 24 ಚೆಕ್‌ಪೋಸ್ಟ್‌ ನಿರ್ಮಾಣ

Date:

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗೋವಾ ಮತ್ತು ಮಹಾರಾಷ್ಟ್ರದ ಅಂತಾರಾಜ್ಯ ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ 24 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದೆ. ಉಭಯ ರಾಜ್ಯಗಳಿಂದ ಬೆಳಗಾವಿಗೆ ಪ್ರವೇಶಿಸುವ ವಾಹನಗಳ ತಪಾಸಣೆ ಮತ್ತಷ್ಟು ಚುರುಕುಗೊಂಡಿದೆ.

ಬೆಳಗಾವಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ್, “ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ 20 ಮತ್ತು ಗೋವಾ ಗಡಿಯಲ್ಲಿ ನಾಲ್ಕು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ಚುನಾವಣಾ ಪ್ರಚಾರ ನಡೆಸಲು ರಾಜಕೀಯ ಪಕ್ಷಗಳಿಗೆ ಅನುಮತಿ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಬಳಸುತ್ತಿರುವ ಭಿತ್ತಿಪತ್ರಗಳು, ಬ್ಯಾನರ್‌ಗಳು ಸೇರಿದಂತೆ ಅನುಮತಿಯಿಲ್ಲದೆ ಅಳವಡಿಸಿರುವ ಪೋಸ್ಟರ್‌ಗಳು, ಬ್ಯಾನರ್‌ಗಳನ್ನು ತೆರವುಗೊಳಿಸಬೇಕು. ಸಂಬಂಧಪಟ್ಟ ರಾಜಕೀಯ ಮುಖಂಡರಿಂದ ದಂಡ ಮತ್ತು ಶುಲ್ಕ ವಸೂಲಿ ಮಾಡಬೇಕು” ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮಗಳ ಮೂಲಕ ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳ ಬಗ್ಗೆ ಪ್ರಚಾರ ಮಾಡುವುದು ಅಥವಾ ಟೀಕೆ ಮಾಡುವುದು, ನೇರವಾಗಿ ಅಥವಾ ಪರೋಕ್ಷವಾಗಿ ಪ್ರಚಾರಗಳಲ್ಲಿ ಭಾಗವಹಿಸುವುದರಿಂದ ಸರ್ಕಾರಿ ಅಧಿಕಾರಿಗಳು ದೂರವಿರಬೇಕು” ಎಂದೂ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕರ್ನಾಟಕ ಚುನಾವಣೆ | ರಾಜಕೀಯ ಪಕ್ಷಗಳ ಪ್ರಚಾರಕ್ಕೆ ಐತಿಹಾಸಿಕ ನಾಯಕರೇ ದಾಳ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಅವರು ಜಿಲ್ಲೆಯ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿಗಳನ್ನು ವಿತರಿಸಿದರು. “ಅನುಮತಿ ಇಲ್ಲದೆ ಯಾವುದೇ ಶಾಲೆ ಅಥವಾ ಕಚೇರಿ ಕಟ್ಟಡವನ್ನು ಚುನಾವಣಾ ಉದ್ದೇಶಕ್ಕೆ ಬಳಸುವಂತಿಲ್ಲ. ಒಂದು ವೇಳೆ, ಲೋಪ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...