ಬೆಳಗಾವಿ | ಮಗಳ ಮೇಲೆ ಕಾಮುಕ ತಂದೆಯಿಂದಲೇ ನಿರಂತರ ಅತ್ಯಾಚಾರ; ತಡವಾಗಿ ಬೆಳಕಿಗೆ ಬಂದ ಪ್ರಕರಣ

Date:

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಬೆಳಗಾವಿ ಜಿಲ್ಲೆ ಸುದ್ದಿಯಾಗುತ್ತಲೇ ಇದೆ. ಇದೀಗ, ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ಪ್ರಕರಣ ನಡೆದಿದೆ. ಯುವತಿ ಬುದ್ಧಿಮಾಂದ್ಯಳೆಂದು ತಿಳಿದುಬಂದಿದೆ. ಕೆಲ ವರ್ಷಗಳ ಹಿಂದೆ ಸಂತ್ರಸ್ತ ಯುವತಿಯ ತಾಯಿ ಮೃತಪಟ್ಟಿದ್ದರು. ಮನೆಯಲ್ಲಿ ಮನೆಯಲ್ಲಿ ತಂದೆ-ಮಗಳು ಮಾತ್ರ ಇರುತ್ತಿದ್ದರು ಎಂದು ವರದಿಯಾಗಿದೆ.

ಕಾಮುಕ ತಂದೆ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. 2023ರ ಫೆಬ್ರವರಿಯಲ್ಲಿ ಯುವತಿ ಗರ್ಭ ಧರಿಸಿದ್ದ ಬಗ್ಗೆ ಅನುಮಾನಗೊಂಡ ಗ್ರಾಮದ ಕೆಲವರು ಆಶಾ ಕಾರ್ಯಕರ್ತೆಗೆ ಮಾಹಿತಿ ನೀಡಿದ್ದರು. ಅವರ ಮೂಲಕ ಎನ್‌ಜಿಒ ತಂಡವೊಂದು ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಯುವತಿ ಗರ್ಭಿಣಿ ಆಗಿರುವುದು ಖಚಿತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್‌ಜಿಒ ಸದಸ್ಯರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದರು. ಬುದ್ಧಿಮಾಂದ್ಯೆಗೆ ಜನಿಸಿದ ಮಗು ಹಾಗೂ ಆಕೆಯ ತಂದೆಯ ಡಿಎನ್‌ಎ ಅನ್ನು ಆಗಸ್ಟ್‌ನಲ್ಲಿ ತಪಾಸಣೆ ಮಾಡಲಾಗಿತ್ತು. ತಂದೆಯೇ ಮಗಳ ಮೇಲೆ ಅತ್ಯಾಚಾರ ಎಸಗಿದ್ದರಿಂದ ಮಗು ಜನಿಸಿದೆ ಎಂಬುದು ಖಚಿತವಾಗಿತ್ತು.

ಆರೋಪಿಯನ್ನು ಬಂಧಿಸಿ, ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡ ಸಲ್ಲಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಎಸ್‌.ಎನ್. ಸಿದ್ರಾಮಪ್ಪ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...