ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಈ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮುಂಚೆ ನಿರ್ದೇಶಕರ ಸಭೆ ನಡೆದ ಬಳಿಕ ಜೊಲ್ಲೆ ಮತ್ತು ರಾಜು ಕಾಗೆ ನಾಮಪತ್ರ ಸಲ್ಲಿಕೆಗೆ ಹೊರಟರು. ಬಾಲಚಂದ್ರ ಜಾರಕಿಹೊಳಿ ಅವರ ಕಾರಿನಲ್ಲೇ ಈ ಇಬ್ಬರೂ ನಾಮಪತ್ರ ಸಲ್ಲಿಸಲು ತೆರಳಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಡಿಸಿಸಿ ಬ್ಯಾಂಕ್ ಬೆಳಗಾವಿ ಜಿಲ್ಲೆಯ ಅತಿದೊಡ್ಡ ಗ್ರಾಮೀಣ ಋಣ ಸಹಕಾರ ಸಂಸ್ಥೆ. ಇದರ ನಿರ್ವಹಣೆಯಲ್ಲಿ ಜಾರಕಿಹೊಳಿ, ಜೊಲ್ಲೆ, ಕತ್ತಿ ಕುಟುಂಬಗಳು ಹಲವು ವರ್ಷಗಳಿಂದ ಪ್ರಭಾವ ಬೀರಿವೆ. ಈ ಬಾರಿಯ ಚುನಾವಣೆಯೂ ರಾಜಕೀಯ ಹೋರಾಟದ ರೂಪ ಪಡೆದಿತ್ತು.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ಮಧ್ಯೆ 30-30 ತಿಂಗಳು ಅಧಿಕಾರ ಹಂಚಿಕೆ ಸೂತ್ರ ನಡೆದಿದೆ. ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಬಿಜೆಪಿ ವಿರೋದಿಯಾಗಿದ್ದರೂ ಕೂಡ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯಲ್ಲಿ ಮೈತ್ರಿ ನಡೆದಿದೆ.
“ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಸಾಹೇಬ್ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ. 30 ತಿಂಗಳ ಅವಧಿಗೆ ಅಧಿಕಾರ ಹಂಚಿಕೆಯಾಗಿದೆ. ಬಿಜೆಪಿಗೆ ಈಗ ಅಧ್ಯಕ್ಷ ಸ್ಥಾನ, ಕಾಂಗ್ರೆಸ್‌ಗೆ ಉಪಾಧ್ಯಕ್ಷ ಸ್ಥಾನ ಹಂಚಿಕೊಂಡಿದ್ದೇವೆ. ಈ ಹಿಂದೆ ನಾವು 3 ಮಂದಿ ಇದ್ದರೂ ಬಿಜೆಪಿಯವರು ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಟ್ಟಿದ್ದೇವೆ. ಜೊಲ್ಲೆಯವರು ನಮ್ಮನ್ನು ನಂಬಿ ಬಂದಿದ್ದರು. ಹೀಗಾಗಿ ಜೊಲ್ಲೆಯವರನ್ನ ಗೆಲ್ಲಿಸಿ, ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಸದ್ಯದ ಪರಿಸ್ಥಿತಿಯಲ್ಲಿ ಬ್ಯಾಂಕ್‌ಗೆ ಅಣ್ಣಸಾಹೇಬ್ ಜೊಲ್ಲೆಯವರ ಅಗತ್ಯವಿದೆ” ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪೌರ ಕಾರ್ಮಿಕರ ವೇತನ ಬಿಡುಗಡೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಧರಣಿ
“ಪ್ರತಿಸ್ಪರ್ಧಿಗಳಿಂದ ನಾಮಪತ್ರ ಸಲ್ಲಿಕೆಯಾಗಿರದ ಕಾರಣ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.





