ಬೆಳಗಾವಿ | ಡಿಸಿಸಿ ಬ್ಯಾಂಕ್ ಚುನಾವಣೆ; ಗ್ರಾಮ ದೇವತೆ ಮೇಲೆ ಆಣೆ ಪ್ರಮಾಣ

Date:

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಬಿಡಿಸಿಸಿ) ಚುನಾವಣೆ ರಾಜಕೀಯ ಧ್ರುವೀಕರಣಕ್ಕೆ ನಾಂದಿ ಹಾಡಿದೆ. ಮೂರು ದಶಕಗಳ ಕಾಲ ಬ್ಯಾಂಕಿನ ಮೇಲೆ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು ದೂರ ಇಡಲು ಜಾರಕಿಹೊಳಿ ಸಹೋದರರು ಇನ್ನಿಲ್ಲದ ಅಸ್ತ್ರಗಳನ್ನು ಪ್ರಯೋಗಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಕತ್ತಿ ಕುಟುಂಬದ ಆಪ್ತರು ‘ಗ್ರಾಮದೇವಿ ಮೇಲೆ ಆಣೆ’ ಮಾಡಲು ತಂತ್ರ ರೂಪಿಸಿದ್ದಾರೆ.

ಅಕ್ಟೋಬರ್ 19ರಂದು ಈ ಬ್ಯಾಂಕ್ ಚುನಾವಣೆ ನಿಗದಿಯಾಗಿದೆ. ಆದರೆ, ತಿಂಗಳ ಹಿಂದಿನಿಂದಲೇ ಇನ್ನಿಲ್ಲದ ಸರ್ಕಸ್ ಆರಂಭವಾಗಿವೆ. ಇಷ್ಟು ವರ್ಷ ಬ್ಯಾಂಕಿನತ್ತ ತಲೆ ಹಾಕದ ಜಾರಕಿಹೊಳಿ ಸಹೋದರರು ಈಗ ಶತಾಯ ಗತಾಯ ಹಿಡಿತ ಸಾಧಿಸಲು ಮುಂದಾಗಿದ್ದಾರೆ. ಆದರೆ, ತಮ್ಮ ನಾಯಕನನ್ನು ಬಿಟ್ಟುಕೊಡಲು ಒಲ್ಲದ ಹುಕ್ಕೇರಿ ತಾಲೂಕಿನ ಹಲವರು ಆಣೆ ಪ್ರಮಾಣದ ಮೊರೆ ಹೋಗಿದ್ದಾರೆ. ಮೇಲಾಗಿ, ಇದರ ವಿಡಿಯೊ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲೂ ಹರಿಬಿಟ್ಟಿದ್ದಾರೆ. ಚುನಾವಣೆಯಲ್ಲಿ ಕತ್ತಿ ಕುಟುಂಬ ಹಾಗೂ ಜಾರಕಿಹೊಳಿ ಸಹೋದರರ ಹಗ್ಗ ಜಗ್ಗಾಟದಲ್ಲಿ ಗೆಲ್ಲುವವರಾರೆಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ಬೆಳಗಾವಿ | ಧರ್ಮಾಂದತೆಯ ‘ದ್ವೇಷ’ದ ವಿಷವನ್ನು ಸೋಲಿಸಿದ ಮುಸ್ಲಿಮ್ ಶಿಕ್ಷಕನ ‘ಪ್ರೀತಿ’

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...