ಬೆಳಗಾವಿ | ಫೆ.16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

Date:

ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ.

ಬಿಕೆಎ, ಸಿಐಟಿಯು, ಲೆಪಿಆರ್‌ಎಸ್‌, ಎಐಎಡಬ್ಲೂಯು, ಸ್ವಾಭಿಮಾನಿ ಸೇತಕರಿ ಸಂಘ, ಕಾಯಕಮಿತ್ರ, ಗ್ರಾಮ ಪಂಚಾಯತ ನೌಕರರ ಸಂಘ, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ಕಾರ್ಯಕರ್ತರು ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೆಳಗಾವಿಯ ಪ್ರತಿಭಟನೆ ನಡೆಯಲಿದೆ.

ಈ ಕುರಿತು ಸಭೆ ನಡೆಸಿದ ಸಂಘಟನೆಗಳು, ಜನವಿರೋಧಿ ನೀತಿಗಳಿಗೆ ಅಂಟಿಕೊಂಡಿರುವ, ಕಾರ್ಪೂರೇಟ ಕಂಪನಿಗಳ ಪರವಾಗಿರುವ ರಾಜಕೀಯ ಪಕ್ಷಗಳ ಧೋರಣೆಗಳನ್ನು ಉಗ್ರವಾಗಿ ಪ್ರತಿರೋಧಿಸಬೇಕಾಗಿದೆ.ಇದರ ಭಾಗವಾಗಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಅಕ್ರಮ ಮೈತ್ರಿಕೂಟವನ್ನು ಸೋಲಿಸಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು,ರಾಷ್ಟ್ರೀಯ ಸಂಪತ್ತು ಲೂಟಿ,ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸುವುದು ಮತ್ತು ನಮ್ಮ ಹಕ್ಕನ್ನು ಪಡೆಯುವುದು ಸಲುವಾಗಿ ಫೆ.16ರಂದು ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟಣನೆ ಹಮ್ಮಿಕೊಳದಲಾಗಿದೆ.ಇದರ ಭಾಗವಾಗಿ ಬೆಳಗಾವಿಯ ಜಿಲ್ಲಾ ಕೇಂದ್ರ  ಚನ್ನಮ್ಮಾ ಸರ್ಕಲ್ ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದಿವೆ.

ದಯವಿಟ್ಟು ರೈತಪರ, ಕಾರ್ಮಿಕ, ಕೃಷಿ ಕೂಲಿಕಾರರು, ದಲಿತ, ಮಹಿಳಾ, ಯುವಜನ, ವಿಧ್ಯಾರ್ಥಿ ಹಾಗೂ ವಿವಿಧ ಸಾಮಾಜಿಕ ಹೋರಾಟ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶಸ್ವಿಯಾಗಲು ಸಹಕರೀಸಬೇಕೆಂದು ಸಂಘಟನೆ ಕರೆನೀಡಿದೆ.

ಫೆ.16ರಂದು ಅಂಬೇಡ್ಕರ್ ಗಾರ್ಡನ್‌ನಲ್ಲಿ ಸೇರಿ, ನಂತರ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಮುಖಾಂತರ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಲಿವೆ.

ಸಭೆಯಲ್ಲಿ ಸಿದ್ದಗೌಡ ಮೋದಗಿ, ಮಂದಾ ನೇವಗಿ, ಶಿವಲೀಲಾ ಮಿಸಾಳೆ, ಮೀನಾಕ್ಷಿ ದಪಡೆ, ಸರೋಜಾ ಕಾಂಬಳೆ ಹಾಗೂ ಇತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...