ಬೆಳಗಾವಿ | ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಗಲಾಟೆ; ಸಹ ಪ್ರಯಾಣಿಕನಿಗೆ ಚಾಕು ಇರಿದ ಯುವಕ

Date:

ಜಗತ್ತು ಸಹನೆ ಕಳೆದುಕೊಳ್ಳುತ್ತಿದೆ. ಬಹಳಷ್ಟು ‘ಅಗ್ರೆಸಿವ್’ ಆಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಕೋಪಗೊಳ್ಳುವುದು, ಸ್ಮಿಮಿತ ಕಳೆದುಕೊಳ್ಳುವುದು, ಭಾವನೆಗಳ ಹತೋಟಿ ಇಲ್ಲದಿರುವುದು ಮನಸ್ಥಿತಿಯನ್ನು ಆವೇಗಗೊಳಿಸುತ್ತಿದೆ. ಈ ಮಾನಸಿಕ ಸ್ಥಿತಿಯು ಹಲ್ಲೆ, ಕೊಲೆಯಂತಹ ಹಿಂಸಾತ್ಮಕ ಕೃತ್ಯಗಳಿಗೆ ಕಾರಣವಾಗುತ್ತಿವೆ. ಅಂತಹದ್ದೇ ಘಟನೆಯಲ್ಲಿ ಬೆಳಗಾವಿಯಲ್ಲಿ ಯುವಕನೊಬ್ಬ ತನ್ನ ಸಹ ಪ್ರಯಾಣಿಕನಿಗೆ ಚಾಕು ಹಿರಿದಿರುವ ಘಟನೆ ನಡೆದಿದೆ.

ಬಸ್‌ನಲ್ಲಿ ಕಿಟಿಕಿ ಪಕ್ಕದ ಸೀಟ್‌ನಲ್ಲಿ ಕೂರಲು ಇಬ್ಬರು ಪ್ರಯಾಣಿಕರ ನಡುವೆ ಗಲಾಟೆ ನಡೆದಿದೆ. ಜಗಳವು ವಿಕೋಪಕ್ಕೆ ತಿರುಗಿದ್ದು, ಚಾಕು ಇರಿತದಂತಹ ಗಂಭೀರ ಕೃತ್ಯದ ಹಂತಕ್ಕೆ ತಲುಪಿದೆ.

ಬೆಳಗಾವಿಯ ಪಂಚಬಾಳೇಕುಂದ್ರಿ ಗ್ರಾಮದಿಂದ ಬೆಳಗಾವಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆದಿದೆ. ಇಬ್ಬರು ಯುವಕರು ಕಿಟಕಿ ಪಕ್ಕದ ಸೀಟಿಗಾಗಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ, ಯುವಕನೋರ್ವ ಮತ್ತೊಬ್ಬ ಯುವಕನಿಗೆ ಚಾಕು ಇರಿದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಚಬಾಳೇಕುಂದ್ರಿ ಗ್ರಾಮದ ಮಜ್ಜು ಸನದಿ (20) ಎಂಬ ಯುವಕನ ಎದೆ ಭಾಗಕ್ಕೆ ಚಾಕು ಇರಿದು, ಆರೋಪಿ ಯುವಕ ಪರಾರಿಯಾಗಿದ್ದಾನೆ. ಗಾಯಗೊಂಡ ಮಜ್ಜು ಸನದಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಡಿಸಿಪಿ ರೋಹನ್​ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...