ಬೆಳಗಾವಿ | ಕನ್ನಡ ಪರ ಹೋರಾಟಗಾರರ ವಿರುದ್ದದ ಪ್ರಕರಣ ವಾಪಸ್‌ ಪಡೆಯಲು ಆಗ್ರಹ

Date:

ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕೆಂದು ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಮೇಕೆದಾಟು ಹೋರಾಟಗಾರರ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರ, ಗಡಿ ಜಿಲ್ಲೆ ಹೋರಾಟಗಾರರನ್ನು ಮರೆತಿದೆ ಎಂದು ಆರೋಪಿಸಿ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

ಅಭಿವೃದ್ಧಿ ಸೇರಿದಂತೆ ಎಲ್ಲ ವಿಚಾರದಲ್ಲಿಯೂ ಉತ್ತರ ಕರ್ನಾಟಕ ತಾರತಮ್ಯಕ್ಕೆ ಒಳಗಾಗುತ್ತಿದೆ. ಈಗ ಹೋರಾಟಗಾರರ ವಿಚಾರದಲ್ಲೂ‌ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಅನುಮಾನ ಮೂಡಿದೆ ಎನ್ನುತ್ತಿದ್ದಾರೆ ಹೋರಾಟಗಾರರು.

ತೀವ್ರ ವಿರೋಧದ ಮಧ್ಯೆ ಬೆಳಗಾವಿ ಮಹಾನಗರ ಪಾಲಿಕೆ ಮುಂದೆ 2020ರಲ್ಲಿ ಕನ್ನಡ ಧ್ವಜವನ್ನು ನೆಟ್ಟು ಕನ್ನಡ ಸಂಘಟನೆಗಳು ಸಂಭ್ರಮಿಸಿದ್ದವು. ಇದಾದ ಒಂದು ವರ್ಷದ ಬಳಿಕ ಆ ಧ್ವಜ ಹಳೆಯದಾಗಿದ್ದು, ಹರಿದು ಹೋಗಿದೆ. ಹಾಗಾಗಿ, ಹೊಸ ಧ್ವಜ ಹಾರಿಸಬೇಕು. ನೀವು ಧ್ವಜ ಬದಲಿಸದಿದ್ದರೆ ನಾವೇ ಬದಲಿಸುತ್ತೇವೆ ಎಂದು ಕನ್ನಡ ಹೋರಾಟಗಾರರು ಪಾಲಿಕೆ ಅಧಿಕಾರಿಗಳಿಗೆ ಕೇಳಿಕೊಂಡಿದ್ದರು. ಈ ವೇಳೆ ಅವರನ್ನು ತಡೆದ ಪೊಲೀಸರು ಹೋರಾಟಗಾರರನ್ನು ಬಂಧಿಸಿದ್ದರು. ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಜೂನ್ 5, 2021ರಲ್ಲಿ ಈ ಸಂಬಂಧ ಕೇಸ್ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಪ್ರತಿಭಟನೆ ಮಾಡಿದ್ದಿರಿ ಎಂದು 51(ಬಿ) ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಹೋರಾಟಗಾರರನ್ನು ಬಂಧಿಸಲಾಗಿತ್ತು. ಸದ್ಯ ಬೆಳಗಾವಿಯ ಜೆಎನ್ಎಫ್​ಸಿ 2ನೇ ನ್ಯಾಯಾಲಯದಲ್ಲಿ ಶ್ರೀನಿವಾಸ ತಾಳೂಕರ್, ಅಕ್ಬರ್ ಸೆಡೇಕರ್, ರೇಷ್ಮಾ ಕಿತ್ತೂರು, ವಾಜೀದ್ ಹಿರೇಕೊಡಿ, ನಾಗೇಶ ಕೊಪ್ಪದ ಸೇರಿ 11 ಜನ ಕನ್ನಡ ಹೋರಾಟಗಾರರ ಮೇಲೆ ವಿಚಾರಣೆ ನಡೆಯುತ್ತಿದೆ.

ಕನ್ನಡ ಪರ ಹೋರಾಟಗಾರ ಶ್ರೀನಿವಾಸ ತಾಳೂಕರ್, ಗಡಿಯಲ್ಲಿ ಕನ್ನಡ ಉಳಿಸಲು ಪ್ರತಿಕ್ಷಣವೂ ಹೋರಡುವ ನಾವು ಕೋರ್ಟ್​ಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಮೇಕೆದಾಟು ಹೋರಾಟಗಾರ ಕೇಸ್ ಹಿಂಪಡೆಯುತ್ತೇವೆ ಎನ್ನುವ ಸರ್ಕಾರ, ಬೆಳಗಾವಿಯ ಕನ್ನಡ ಹೋರಾಟಗಾರರ ಬಗ್ಗೆ ಮಾತನಾಡುತ್ತಿಲ್ಲ. ಗಡಿ ಭಾಗದ ಹೋರಾಟಗಾರರಿಗೆ ಶಕ್ತಿ ತುಂಬಬೇಕಾದ ಸರ್ಕಾರವೇ ಹೀಗೆ ತಾರತಮ್ಯ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು.

ಕನ್ನಡ ಪರ ಹೋರಾಟಗಾರ ವಿಜಯಕುಮಾರ್ ಮಾತನಾಡಿ, ‌ಗಡಿ ಕನ್ನಡ ಹೋರಾಟಗಾರರ ಮೇಲೆ ಪೊಲೀಸರು ಸುಳ್ಳು ಕೇಸ್ ದಾಖಲಿಸಿದ್ದು ಖಂಡನೀಯ. ತಕ್ಷಣವೇ ಕೇಸ್ ಹಿಂಪಡೆಯುವಂತೆ ಕನ್ನಡ ಸಂಘಟನೆ ಒಕ್ಕೂಟವು ಸಿಎಂ ಸಿದ್ದರಾಮಯ್ಯ ಅವರನ್ನು ಶೀಘ್ರವೇ ಭೇಟಿ ಮಾಡಿ ಮನವಿ ಸಲ್ಲಿಸಲಿದೆ. ಏನೆನೋ ಅಪರಾಧ ಮಾಡಿದವರ ಕೇಸ್ ಹಿಂಪಡೆದು ರಾಜಮರ್ಯಾದೆ ಕೊಡ್ತಾರೆ. ಆದರೆ, ಕನ್ನಡ ಹೋರಾಟಗಾರರಿಗೆ ಈ ರೀತಿ ಅನ್ಯಾಯ ಮಾಡುವುದು ಸರಿಯಲ್ಲ, ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...