ಬೆಳಗಾವಿ | ಗ್ರಾಮ ಪಂಚಾಯತಿ ಅಧ್ಯಕ್ಷನ ವಿರುದ್ಧ 15 ವರ್ಷದ ಅಪ್ರಾಪ್ತೆಯನ್ನು ಬಾಲ್ಯವಿವಾಹವಾದ ಆರೋಪ

Date:

ಆಘಾತಕಾರಿ ಪ್ರಕರಣವೊಂದರಲ್ಲಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮಶಿ ಕಾಳಿಮಣಿ ವಿರುದ್ಧ ಗಂಭೀರ ಆರೋಪವೊಂದು ಹೇಳಿಬಂದಿದೆ. ಅವರು 2023ರ ನವೆಂಬರ್‌ನಲ್ಲಿ 15 ವರ್ಷದ ಬಾಲಕಿಯನ್ನು ಬಾಲ್ಯವಿವಾಹವಾಗಿದ್ದಾರೆ ಎಂದು ಆರೋಪಲಾಗಿದೆ. ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಅವರು ವಿರುದ್ಧ ದೂರು ದಾಖಲಾಗಿದೆ. ಕಾಣಿಮಣಿ ಅವರು 2023ರ ನವೆಂಬರ್ 5ರಂದು ಅಪ್ತಾಪ್ತ ವಯಸ್ಸಿನ ಬಾಲಕಿಯನ್ನು ವಿವಾಹವಾಗಿದ್ದರು. ಬಾಲಕಿ ಐದು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾರೆ. ಆರೋಪ ದೃಢಪಟ್ಟ ಬೆನ್ನಲ್ಲೇ, ಕಾಣಿಮಣಿ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿದ್ದಾರೆ.

ಬಂಧನದಿಂದ ತಪ್ಪಿಸಿಕೊಳ್ಳಲು ಆರೋಪಿಯು ಇಬ್ಬರು ಸಚಿವರ ಹೆಸರುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾನೆ ಎಂಬ ಆರೋಪಗಳು ಕೇಳಿಬಂದಿವೆ. ಆರೋಪಿ ತಲೆಮರೆಸಿಕೊಂಡಿದ್ದು, ಮಕ್ಕಳ ರಕ್ಷಣಾ ತಂಡಗಳು ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಬಾರಿ ಭೇಟಿ ನೀಡಿದ್ದರೂ ಆತನನ್ನು ಬಂಧಿಸುವಲ್ಲಿ ವಿಫಲವಾಗಿವೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...