ಬೆಳಗಾವಿ | ʼನಮ್ಮನ್ನು ಮನೆಗೆ ಬಿಡದಿದ್ದರೆ ಓಡಿ ಹೋಗುತ್ತೇವೆʼ!

Date:

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನದ ಚುನಾವಣಾ ಕಣ ರಂಗೇರಿದ್ದು, ಬೆಳಗಾವಿಯ ನಿಪ್ಪಾಣಿಯಿಂದ ಸ್ಪರ್ಧೆ ಮಾಡಿರುವ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ತಾಲೂಕಿನ ಪಿಕೆಪಿಎಸ್ ಸದಸ್ಯ ಮತದಾರರನ್ನು ಹಿಡಿದಿಟ್ಟುಕೊಳ್ಳಲು ಹರಸಾಹಸ ಪಡುವಂತಾಗಿದೆ. ಜೊಲ್ಲೆ ಕ್ಯಾಂಪಿನಲ್ಲಿದ್ದ ಪಿಕೆಪಿಎಸ್ ಸದಸ್ಯರ ನಡುವೆ ಜಗಳ ಏರ್ಪಟ್ಟಿದ್ದು, ಒಬ್ಬರಿಗೊಬ್ಬರು ಬೈದಾಡಿಕೊಂಡ ಪ್ರಸಂಗವೂ ನಡೆದಿದೆ. ಈ ಮಧ್ಯೆ ನಮ್ಮನ್ನು ಇಲ್ಲಿಂದ ಬಿಟ್ಟುಬಿಡಿ, ಇಲ್ಲದಿದ್ದರೆ ನಾವೇ ಓಡಿ ಹೋಗುತ್ತೇವೆ ಎಂಬ ಎಚ್ಚರಿಕೆಯನ್ನೂ ಸದಸ್ಯರು ನೀಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ನಿಪ್ಪಾಣಿ ತಾಲೂಕಿನ ಹಲವು ಪಿಕೆಪಿಎಸ್ ನಲ್ಲಿ ಡೆಲಿಗೆಟ್ ಪಡೆಯುವ ವೇಳೆ ಪಾಟೀಲ ಅವರನ್ನೇ ಬೆಂಬಲಿಸುವ ನಿರ್ಧಾರಕ್ಕೆ ಮತದಾರರು ಬಂದಿದ್ದರಂತೆ. ಆದರೆ ಈಗ ಹಣದ ಆಸೆಯಿಂದ ಜೊಲ್ಲೆ ಜೊತೆ ಸೇರಿದ್ದು ಇದರಿಂದ ಡೆಲಿಗೆಟ್ ಗಳು ನಮ್ಮ ಮಾತು ತಪ್ಪಿದ್ದಾರೆ ಎಂದು ಪಿಕೆಪಿಎಸ್ ಸದಸ್ಯರು ಆರೋಪಿಸುತ್ತಿದ್ದಾರೆ. ಸದ್ಯ ಜೊಲ್ಲೆ ಹಿಡಿತದಲ್ಲಿರುವ ಪಿಕೆಪಿಎಸ್ ಸದಸ್ಯ ಮತದಾರರಿಗೆ ತಮ್ಮ ಗ್ರಾಮದ ಸದಸ್ಯರಿಂದ ಕರೆ ಬರುತ್ತಿದ್ದು, ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಇದೇ ಕಾರಣಕ್ಕೆ ಸದಸ್ಯರ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.

ಇನ್ನೂ ಒಕ್ಕೂಟದ ನಿರ್ಧಾರಕ್ಕೆ ಚ್ಯುತಿ ತಂದ ಪಿಕೆಪಿಎಸ್ ಡೆಲಿಗೆಟ್ ವಿರುದ್ಧ ನಿಪ್ಪಾಣಿ ತಾಲೂಕಿನ ಅನೇಕ ಗ್ರಾಮಗಳಲ್ಲಿ ಸ್ವತಃ ರೈತರೇ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಪಿಕೆಪಿಎಸ್‌ ಮತದಾರರು ಕಂಗಾಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಳಗಾವಿ | ಮದುವೆಯಾಗಿ ನಾಲ್ಕು ತಿಂಗಳಲ್ಲೇ ಕೊಲೆ; ಹೆಂಡತಿಯ ಕೊಂದು ಬೆಡ್ ಕೆಳಗೆ ಶವ ಅಡಗಿಸಿದ ಪತಿ!

ಸದಸ್ಯರ ನಡುವಿನ ಜಗಳ ಬಿಡಿಸಲು ಜೊಲ್ಲೆ ಟೀಂ ಹೈರಾಣಾಗಿರುವುದಂತೂ ಸತ್ಯ. ಅಕ್ಟೋಬರ್ 19 ರಂದು ಚುನಾವಣೆ ನಡೆಯಲಿದ್ದು, ಅಡ್ಡ ಮತದಾನದ ಭೀತಿಯಲ್ಲಿ ನಾಯಕರು ಇರುವುದು ಸ್ಪಷ್ಟವಾಗಿದೆ.

ಶಾಸಕ ರಾಜು ಕಾಗೆ ಅವಿರೋಧ ಆಯ್ಕೆ ವಿಚಾರವಾಗಿ ಮಾಜಿ ಸಚಿವ ಶ್ರೀಮಂತ ಪಾಟೀಲ್‌ ವಿರುದ್ಧ ಅನೇಕ ಪಿಕೆಪಿಎಸ್ ಮತದಾರರು ಸಿಟ್ಟು ಹೊರ ಹಾಕಿದ್ದಾರೆ ಎನ್ನುವ ಸುದ್ದಿಯೂ ಹರಿದಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...