ಬೆಳಗಾವಿ | ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ; ಕಾರು ನಜ್ಜುಗುಜ್ಜು

Date:

ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿಯಾಗಿರುವ ಘಟನೆ ಬೆಳಗಾವಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದೆ.

ಏಕಾಏಕಿ ಕಾರಿನ ಮೇಲೆ ಲಾರಿ ಬಿದ್ದು ಕಾರು ನಜ್ಜುಗುಜ್ಜಾಗಿದೆ. ಕಾರಿನೊಳಗೆ ಸಿಲುಕಿದ್ದ ಇಬ್ಬರು ಸವಾರರು ನರಳಾಡಿದ್ದಾರೆ. ತಮ್ಮನ್ನು ರಕ್ಷಿಸುವಂತೆ ಕೈಬೀಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಇಬ್ಬರೂ ಬದುಕುಳಿದಿದ್ದಾರೆ. ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಭೀಕರ ಅಪಘಾತದಲ್ಲಿ ಬದುಕುಳಿದವರು.

WhatsApp Image 2025 03 15 at 12.44.45 PM

ಇದನ್ನೂ ಓದಿ: ಬೆಳಗಾವಿ | ಗೋಕಾಕ ನಗರಸಭೆ: ₹4.95 ಲಕ್ಷ ಉಳಿತಾಯದ ಬಜೆಟ್ ಮಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್‌ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ರೀತಿಯಲ್ಲೇ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

WhatsApp Image 2025 03 15 at 12.44.05 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...