ಬೆಳಗಾವಿ | ಮನರೇಗಾ ಅಕ್ರಮ; ಗ್ರಾಮ ಪಂ. ಪಿಡಿಒ, ಮಾಜಿ ಅಧ್ಯಕ್ಷರಿಗೆ ದಂಡ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮ ಪಂಚಾಯತಿಯ ಅಧಿಕಾರಿಗಳು ಮನರೇಗಾ ಯೋಜನೆಯಡಿ ಕೊಟ್ಟಿಗೆ ನಿರ್ಮಾಣ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದಾರೆ ಎಂಬುದು ಸಾಬೀತಾಗಿದೆ. ಅವ್ಯವಹಾರ ನಡೆಸಿದ ಪಂಚಾಯತಿ ಅಧಿಕಾರಿ (ಪಿಡಿಒ), ತಾಂತ್ರಿಕ ಸಹಾಯಕ ಅಭಿಯಂತರರು ಮತ್ತು ಅಂದಿನ ಅಧ್ಯಕ್ಷರಿಗೆ ದಂಡ ವಿಧಿಸಿ ಜಿಲ್ಲಾ ಪಂಚಾಯತಿ ಓಂಬಡ್ಸ್‌ಮನ್ ತೀರ್ಪು ನೀಡಿದ್ದಾರೆ.

2020-21ನೇ ಸಾಲಿನಲ್ಲಿ ಮನರೇಗಾ ಅಡಿ ಕೊಟ್ಟಿಗೆ ನಿರ್ಮಾಣ ಮಾಡಿರುವುದಾಗಿ ರೈತರೊಬ್ಬರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಪಂಚಾಯತಿ ಅಧಿಕಾರಿ ಮತ್ತು ಅಂದಿನ ಅಧ್ಯಕ್ಷರು ಅಕ್ರಮ ಎಸಗಿದ್ದರು. ಸಾಮಾಜಿಕ ಕಾರ್ಯಕರ್ತರ ಶ್ರಿನಿವಾಸಗೌಡ ಪಾಟಿಲ್ ಅವರು ಆರ್‌ಐಟಿ ಮೂಲಕ ಅಕ್ರಮವನ್ನು ಬಯಲಿಗೆಳೆದಿದ್ದರು. ಅಲ್ಲದೆ, ಜಿಲ್ಲಾ ಪಂಚಾಯತಿಗೆ ದೂರು ನೀಡಿದ್ದರು. ಈ ಬಗ್ಗೆ ಈದಿನ.ಕಾಮ್‌ ಕೂಡ ಸುದ್ದಿ ಮಾಡಿ, ಮೇಲಧಿಕಾರಿಗಳ ಗಮನ ಸೆಳೆದಿತ್ತು.

ಪ್ರಕರಣದ ತನಿಖೆ ನಡೆಸಿದ ಓಂಬಡ್ಸ್‌ಮನ್ ಅಕ್ರಮ ನಡೆದಿರುವುದು ಸಾಬೀತಾಗಿದೆ ಎಂದು ವರದಿ ನೀಡಿದ್ದಾರೆ. ಅಕ್ರಮ ಎಸಗಿದ್ದ ಪಿಡಿಒ ಎಂ.ಡಿ ಬಡಿಗೇರ ಮತ್ತು ತಾಂತ್ರಿಕ ಸಹಾಯಕ ಅಭಿಯಂತರರಿಗೆ ತಲಾ 6,417ರೂಪಾಯಿ ಹಾಗೂ ಅಂದಿನ ಗ್ರಾಮ ಪಂಚಾಯತಿ ಅಧ್ಯಕ್ಷ ಶಂಕರ ರಾ ಲಮಾಣಿ ಅವರಿಗೆ 6,416 ರೂಪಾಯಿ ದಂಡ ವಿಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮದ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸಗೌಡ ಪಾಟಿಲ್, “ಗ್ರಾಮ ಪಂಚಾಯಿತಿ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗಿದ್ದರು. ಅವರಿಗೆ ಶಿಕ್ಷೆ ವಿಧಿಸಿರುವುದು ಸಂತೋಷವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...