ಬೆಳಗಾವಿ | ಯತ್ನಾಳ್ ಪ್ರತಿಕೃತಿ ದಹಿಸಿ ಬಸವಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

Date:

ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಅವರನ್ನು ಇನ್ಮುಂದೆ ಲಿಂಗಾಯತ ಧರ್ಮದ ಶಾಸಕನೆಂದು ಕರೆಯಬಾರದು ಎಂದು ಯತ್ನಾಳ್ ವಿರುದ್ಧ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬೀದರ ಬಸವಧರ್ಮ ಪೀಠದ ಸತ್ಯಕ್ಕ ಮಾತಾಜಿ ತಿಳಿಸಿದರು.

ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಲಿಂಗಾಯತ ಸಮುದಾಯ ಸಂಘಟನೆಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ‌ ಮೂಲಕ ಸಭಾಪತಿಗಳಿಗೆ ಮನವಿ ಸಲ್ಲಿಸಿದರು. ನಂತರ ಕನ್ನಡ ಸಾಹಿತ್ಯ ಭವನದಲ್ಲಿನ ಸಮಾವೇಶದ ನಂತರ ಪ್ರತಿಭಟನಕಾರರು, ಯತ್ನಾಳ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ಮತ್ತು ಲಿಂಗಾಯತ ಮುಖಂಡರ ನಡುವೆ ಪರಸ್ಪರರ ಮಧ್ಯೆ ವಾಗ್ವಾದ, ತಳ್ಳಾಟ-ನೂಕಾಟ ನಡೆಯಿತು. ಪಟ್ಟು ಸಡಿಲಿಸದ ಕಾರ್ಯಕರ್ತರು ಯತ್ನಾಳ್ ಪ್ರತಿಕೃತಿ ಮತ್ತು ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

IMG 20241207 210341 1

ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಸವಣ್ಣನವರು ಹೊಳೆ ಹಾರಿದ್ದನ್ನು ಬಸನಗೌಡ ಪಾಟೀಲ ಯತ್ನಾಳ ನೋಡಿದ್ದಾರೆಯೇ? ಬಸವಣ್ಣನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ಕೊಡುವ ಅವರು, ಇದಕ್ಕೆ ಪುರಾವೆ ತೆಗೆದುಕೊಂಡು ಬರಬೇಕು. ಇಲ್ಲದಿದ್ದರೆ ತಮ್ಮ ನಾಲಿಗೆ ಕತ್ತರಿಸಿಕೊಳ್ಳಬೇಕು. ಯತ್ನಾಳ್ ಮನಬಂದಂತೆ ಮಾತನಾಡುವುದನ್ನು ಬಿಟ್ಟು, ವಚನ ಸಾಹಿತ್ಯ ಓದಿ ಬುದ್ದಿ ಕಲಿಯಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಂಗಾಯತ ಮುಖಂಡ ಶಂಕರ ಗುಡಾಸ್ ಮಾತನಾಡಿ, ಶರಣರ ನಾಡಿನಲ್ಲಿರುವ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಲಿಂಗಾಯತ ಧರ್ಮದ ಸಂಸ್ಕಾರ ಮತ್ತು ವಚನ ಸಾಹಿತ್ಯದ ಬಗ್ಗೆ ಎಳ್ಳಷ್ಟೂ ಗೊತ್ತಿಲ್ಲ. ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಿಸಿದೆ. ಅಂಥವರಿಗೆ ಅಪಮಾನ ಮಾಡಿದವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವರದಿ ಓದಿದ್ದೀರಾ? ಬೆಳಗಾವಿ | ಪ್ರೀತಿಗೆ ಅಡ್ಡಿಯಾದ ತಾಯಿ ಮತ್ತು ಮಗನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಪ್ರತಿಭಟನೆಯಲ್ಲಿ ಮುಖಂಡ ಬಸವರಾಜ ರೊಟ್ಟಿ, ಅಶೋಕ ಬೆಂಡಿಗೇರಿ, ಕೆ.ಬಸವಪ್ರಸಾದ, ಮಹಾಂತೇಶ ಗುಡಸ್, ಈರಣ್ಣ ದಯನ್ನವರ, ಸೂರ್ಯಕಾಂತ ಭಾವಿ, ಸುಶೀಲಾ ಲಿಂಗಾಯತ, ವಂದನಾ ಬಾಬಾನಗರ ಹಾಗೂ
ರಾಷ್ಟ್ರೀಯ ಬಸವದಳ, ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಕಾಯಕ ಜೀವಿಗಳ ಸಂಘ, ಲಿಂಗಾಯತ ಸಂಘಟನೆ, ಚನ್ನಬಸವ ಫೌಂಡೇಷನ್, ಹಡಪದ ಸಮಾಜದ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...