ಬೆಳಗಾವಿಯಲ್ಲಿ ‘ಭಗವಾಧ್ವಜ’ ಹಾರಿಸಲು ಮುಂದಾದ ನಗರಸಭಾ ಸದಸ್ಯರು; ಪೊಲೀಸರಿಂದ ತಡೆ

Date:

  • ಬೆಳಗಾವಿ ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಬಳಿಕ ಯತ್ನ
  • ಮಂಗಳೂರಿನ ಸುರತ್ಕಲ್‌ ಬಸ್‌ ನಿಲ್ದಾಣದ ಬಳಿಯೂ ಪ್ರತ್ಯಕ್ಷವಾಗಿದ್ದ ‘ಭಗವಾಧ್ವಜ

ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆಯೇ ನಗರಸಭಾ ಸದಸ್ಯರಿಬ್ಬರು ‘ಭಗವಾಧ್ವಜ’ ಹಾರಿಸಲು ಮುಂದಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿಯ ನಿಪ್ಪಾಣಿ ನಗರಸಭೆ ಮೇಲೆ ಮರಾಠಿ ಭಾಷಿಕ ನಿಪ್ಪಾಣಿ ನಗರಸಭಾ ಸದಸ್ಯರಾದ ವಿನಾಯಕ ವಾಡೆ ಹಾಗೂ ಸಂಜಯ ಸಾಂಗಾವಕರ್ ಅವರು ಭಗವಾಧ್ವಜ ಹಾರಿಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಾಗ್ವಾದ ನಡೆದು, ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ.

‘ಇವತ್ತು ಸ್ವಾತಂತ್ರ್ಯ ದಿನ. ಇದನ್ನು ಹಾರಿಸಲು ನಿಮಗೆಷ್ಟು ಧೈರ್ಯ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ’ ಎಂದು ಸ್ಪಷ್ಟವಾಗಿ ವಿರೋಧ ವ್ಯಕ್ತಪಡಿಸಿದ್ದರಿಂದ ಕೊನೆಗೆ ಇಬ್ಬರೂ ಹಿಂದೆ ಸರಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಚಿವೆ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಸ್ಥಳೀಯ ಅಧಿಕಾರಿಗಳ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಈ ಘಟನೆ ನಡೆದಿದೆ.

ಮಂಗಳೂರಿನ ಸುರತ್ಕಲ್‌ನಲ್ಲೂ ಪ್ರತ್ಯಕ್ಷವಾಗಿದ್ದ ಭಗವಾಧ್ವಜ

ಮಂಗಳೂರಿನ ಸುರತ್ಕಲ್ ಬಸ್ ಸ್ಟಾಂಡ್‌ನಲ್ಲಿಯೂ ಕೂಡ ಸಂಘಪರಿವಾರದ ಕಾರ್ಯಕರ್ತರು ಭಗವಾಧ್ವಜ ಹಾರಿಸಿ, ತಿರಂಗಾ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಭಗವಾಧ್ವಜಕ್ಕೆ ಪೊಲೀಸರು ಭದ್ರತೆ ನೀಡಿ, ಕಾವಲು ಕಾಯುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.

WhatsApp Image 2023 08 15 at 3.37.05 PM

ಮೊದಲು ಹರಿದಾಡಿದ್ದ ಫೋಟೋ

ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಅವರನ್ನು ಸಂಪರ್ಕಿಸಿದಾಗ, “ನಿನ್ನೆ ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಡಿ ರಾತ್ರಿ ವಿಶ್ವ ಹಿಂದೂ ಪರಿಷತ್ ಪಂಜಿನ ಮೆರವಣಿಗೆ ಆಯೋಜಿಸಿತ್ತು. ಆ ಕಾರ್ಯಕ್ರಮದ ಭಾಗವಾಗಿ ಆ ಧ್ವಜವನ್ನು ಹಾಕಿದ್ದಾರೆ. ಬೆಳಗ್ಗೆ ಬಂದು ಅವರೇ ತೆಗೆದಿದ್ದಾರೆ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

WhatsApp Image 2023 08 15 at 4.54.04 PM

ಮಂಗಳೂರು ಕಮಿಷನರ್ ಸ್ಪಷ್ಟೀಕರಣ ನೀಡಿ ಕಳುಹಿಸಿರುವ ಫೋಟೋ

‘ಪೊಲೀಸರು ರಾತ್ರಿ ಗಸ್ತಿನ ಕರ್ತವ್ಯದ ಭಾಗವಾಗಿ ಪ್ರತಿನಿತ್ಯ ಅಲ್ಲೇ ವಾಹನ ನಿಲ್ಲಿಸಿದ್ದರು. ಭಗವಾಧ್ವಜಕ್ಕಾಗಿ ಕಾವಲು ನಿಂತಿದ್ದಲ್ಲ. ಬೆಳಗ್ಗೆ ಯಾರೋ ಫೋಟೋ ತೆಗೆದು ಹರಿಯಬಿಟ್ಟಿದ್ದಾರೆ. ಸದ್ಯ ಆ ಧ್ವಜ ಅಲ್ಲಿ ಇಲ್ಲ. ಬೆಳಗ್ಗೆಯೇ ಸಂಘಟಕರು ಬಂದು ತೆಗೆದಿದ್ದಾರೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...