ಬೆಳಗಾವಿ | ಮದುವೆಯಾಗಿ ನಾಲ್ಕು ತಿಂಗಳಲ್ಲೇ ಕೊಲೆ; ಹೆಂಡತಿಯ ಕೊಂದು ಬೆಡ್ ಕೆಳಗೆ ಶವ ಅಡಗಿಸಿದ ಪತಿ!

Date:

ಮದುವೆಯಾದ ನಾಲ್ಕು ತಿಂಗಳಲ್ಲೇ ಪತಿಯೊಬ್ಬ ಪತ್ನಿಯನ್ನು ಕೊಂದು ಮಂಚದಡಿ ಶವವನ್ನು ಹೂತಿಟ್ಟ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಸಾಕ್ಷಿ ಆಕಾಶ್ ಕಂಬಾರ (20) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪತಿ ಆಕಾಶ್ ಕಂಬಾರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತೆಯ ಅತ್ತೆ ಊರಿಗೆ ತೆರಳಿ ಮೂರು ದಿನಗಳ ಬಳಿಕ ಮನೆಗೆ ಬಂದಾಗ ಕೊಲೆಯ ವಿಚಾರ ಬೆಳಕಿಗೆ ಬಂದಿದೆ. ಶವವು ಬೆಡ್ ಕೆಳಗೆ ಪತ್ತೆಯಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಮೂಡಲಗಿ ಪೊಲೀಸರು ಹಾಗೂ ಗೋಕಾಕ ಡಿವೈಎಸ್ಪಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಳಗಾವಿ | ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ; ರಮೇಶ್ ಕತ್ತಿ ಪೆನಲ್ ಗೆಲುವಿಗೆ ಕಾರಣವಾದ ಅಂಶಗಳಿವು…

ಸ್ಥಳಕ್ಕೆ ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಸಾಕ್ಷಿಯ ಕುಟುಂಬಸ್ಥರು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ಕೊಲೆಯ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾಗಿರುವ ಆರೋಪಿಯ ಪತ್ತೆ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...