ಬೆಳಗಾವಿ | ಉದ್ಘಾಟನೆಯಾದರೂ ಕಾರ್ಯಾರಂಭಿಸದ ಹೊಸ ಸಿಬಿಟಿ: ಪ್ರಯಾಣಿಕರ ಪರದಾಟ

Date:

ಬೆಳಗಾವಿ ನಗರದ ಕೇಂದ್ರೀಯ ಬಸ್ ನಿಲ್ದಾಣ (ಸಿಬಿಟಿ)ಯಿಂದ ಪ್ರತಿದಿನ ಸಾವಿರಾರು ಪ್ರಯಾಣಿಕರು ಪ್ರಯಾಣ ಮಾಡುತ್ತಾರೆ. ಆದರೆ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿದ ಹೊಸ ಸಿಬಿಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಕಳೆದ ಅಕ್ಟೋಬರ್ 4ರಂದು ಉದ್ಘಾಟನೆ ಮಾಡಿದರೂ, ಈವರೆಗೆ ಕಾರ್ಯಾರಂಭವಾಗಿಲ್ಲ. ಇದರಿಂದ ಕಾಲೇಜು ವಿದ್ಯಾರ್ಥಿಗಳು , ಹಿರಿಯರು ದಿನನಿತ್ಯ ಕೆಲಸಕ್ಕಾಗಿ ಹೊರಡುವ ಪ್ರಯಾಣಿಕರು ಪರದಾಡುವಂತಾಗಿದೆ.

2018-19ನೇ ವರ್ಷದಲ್ಲಿ ಹೊಸ ಸಿಬಿಟಿ ನಿರ್ಮಾಣ ಕಾರ್ಯಾರಂಭವಾಗಿತ್ತು. ಆದರೆ ಆಡಳಿತಾತ್ಮಕ ಕಾರಣಗಳಿಂದಾಗಿ 2025ರಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಉದ್ಘಾಟನೆಯೂ ಆಗಿದೆ. ಆದರೂ ಕೂಡ ಸಿಬಿಟಿ ಕಾರ್ಯಾರಂಭವಾಗದೇ ಇರುವುದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಸಿಬಿಟಿ ತಾತ್ಕಾಲಿಕವಾಗಿ ಹಳೆಯ ಬಸ್ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬೆಳಗಾವಿ ನಗರದಿಂದ ಸುಮಾರು 150ಕ್ಕೂ ಹೆಚ್ಚು ಬಸ್‌ಗಳು ಓಡಾಡುತ್ತಿವೆ. ಹಾಗೂ ಸಾವಿರಾರು ಪ್ರಯಾಣಿಕರು ನಿತ್ಯವೂ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಇಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದ ಪ್ರಯಾಣಿಕರಿಗೆ ತೊಂದರೆಯನ್ನು ಉಂಟುಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೆಳಗಾವಿ ಸಿಬಿಟಿ ಉದ್ಘಾಟನೆ

ನಿತ್ಯ ಸಿಬಿಟಿಯಿಂದ ಪ್ರಯಾಣ ಮಾಡುವ ನಾಮದೇವ ಮರಾಠೆ ನಗರ ಪ್ರಯಾಣಿಕ ಈ ದಿನ.ಕಾಮ್ ಜತೆಗೆ ಮಾತನಾಡಿ “ಸಿಬಿಟಿ ಬಸ್ ನಿಲ್ದಾಣದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇಲ್ಲ, ಕುಡಿಯುವ ನೀರಿನ ಸೌಲಭ್ಯವೂ ಇಲ್ಲ. ಮಳೆ ಬಂದರೆ ಪ್ರಯಾಣಿಕರಿಗೆ ಆಶ್ರಯಕ್ಕೆ ಸ್ಥಳವಿಲ್ಲ. ವಯಸಾದವರೂ ಕೂಡ ನಿಂತಕೊಂಡೇ ಬಸ್‌ಗಳಿಗೆ ಕಾಯುವ ಪರಿಸ್ಥಿತಿ ಎದುರಾಗಿದೆ” ಎಂದು ಪ್ರಯಾಣಿಕರ ಸಮಸ್ಯೆಗಳ ಕುರಿತು ತಿಳಿಸಿದರು.

“ನಿತ್ಯ ಸಿಬಿಟಿಯಿಂದ ಪ್ರಯಾಣಿಸುವ ಹರ್ಷ ಕಾಂಬ್ಲೆ ಈ ದಿನ.ಕಾಮ್ ಜತೆ ಮಾತನಾಡಿ, “ಸಿಬಿಟಿಗೆ ಸಾವಿರಾರು ಪ್ರಯಾಣಿಕರು ಬರುವುದರಿಂದ ಕುಳಿತುಕೊಳ್ಳಲು ಸೀಟುಗಳೇ ಇಲ್ಲ. ಹಿರಿಯರು, ವಿದ್ಯಾರ್ಥಿಗಳು ನಿಂತುಕೊಂಡೇ ಬಸ್ ಕಾಯಬೇಕಾದ ಪರಿಸ್ಥಿತಿ ಇದೆ. ಮುಖ್ಯಮಂತ್ರಿಯವರೂ ಬಸ್‌ ನಿಲ್ದಾಣವನ್ನು ಉದ್ಘಾಟನೆ ಮಾಡಿದರೂ ಕೂಡ ಸಿಬಿಟಿ ಇನ್ನೂ ಪ್ರಾರಂಭವಾಗಿಲ್ಲ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಬೇಸಿಗೆ ಕಾಲದಲ್ಲಿ ಬಿಸಿಲಿನಲ್ಲಿಯೇ ನಿಂತು ಬಸ್‌ ಕಾಯುವ ಪರಿಸ್ಥಿತಿ ಇದೆ” ಎಂದು ಹೇಳಿದರು.

ಬೆಳಗಾವಿ ಹಳೆ ಬಸ್‌ ನಿಲ್ದಾಣ

ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿದ ಹೊಸ ಸಿಬಿಟಿಯನ್ನು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯವರಿಗೆ
ಇನ್ನೂ ಅಧಿಕೃತವಾಗಿ ಹಸ್ತಾಂತರಿಸದ ಕಾರಣ ಹೊಸ ಸಿಬಿಟಿ ಆರಂಭವಾಗಿಲ್ಲ.

ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಉದ್ಘಾಟನೆ ಮಾಡಿದರೂ ಕಾರ್ಯಾರಂಭದಲ್ಲಿ ನಡೆಯುತ್ತಿರುವ ವಿಳಂಬ ಪ್ರಯಾಣಿಕರಲ್ಲಿ ಅಸಮಾಧಾನ ಮೂಡಿಸಿದೆ. ಆದಷ್ಟು ಬೇಗನೆ ಸಿಬಿಟಿ ಕಾರ್ಯಾರಂಭವಾಗಬೇಕೆಂಬುದು ಬೆಳಗಾವಿ ನಗರದ ಪ್ರಯಾಣಿಕರ ಒತ್ತಾಯವಾಗಿದೆ.‌

ಇದನ್ನೂ ಓದಿದ್ದೀರಾ? ಬೆಂಬಲ ಬೆಲೆಗೆ ಕಬ್ಬು ಬೆಳೆಗಾರರ ಅನಿರ್ದಿಷ್ಟಾವಧಿ ಧರಣಿ: ನ.7ರಂದು ರಾಜ್ಯಾದ್ಯಂತ ಹೋರಾಟಕ್ಕೆ ರೈತರ ನಿರ್ಧಾರ

ಹೊಸ ಸಿಬಿಟಿ ನಿರ್ಮಾಣ ಪೂರ್ಣಗೊಂಡು ಉದ್ಘಾಟನೆಯಾದರೂ ಕಾರ್ಯಾರಂಭವಾಗದಿರುವುದು ಬೆಳಗಾವಿ ನಗರದ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರ ಹಾಗೂ ಸಂಬಂಧಿತ ಇಲಾಖೆ ತಕ್ಷಣ ಕ್ರಮ ಕೈಗೊಂಡು ನೂತನ ಸಿಬಿಟಿಯನ್ನು ಸಾರ್ವಜನಿಕ ಸೇವೆಗೆ ಒದಗಿಸಿದರೆ ಮಾತ್ರ ಪ್ರಯಾಣಿಕರ ಸಂಕಷ್ಟ ನಿವಾರಣೆಯಾಗಲಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಯೋಜನೆಗಳನ್ನು ಸಮಯಕ್ಕೆ ಅನುಗುಣವಾಗಿ ಕಾರ್ಯಗತಗೊಳಿಸುವುದು ಆಡಳಿತದ ಹೊಣೆಗಾರಿಕೆಯಾಗಿದೆ ಎನ್ನುವದು ಪ್ರಯಾಣಿಕರ ಅಭಿಪ್ರಾಯವಾಗಿದ್ದು, ಆದಷ್ಟು ಬೇಗನೆ ಹೊಸ ಸಿಬಿಟಿ ಆರಂಭವಾದರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...