ಬೆಳಗಾವಿ | ಮರಾಠಿಯಲ್ಲಿ ಮಾತನಾಡಿಲ್ಲವೆಂದು ‘ಪಿಡಿಒ’ಗೆ ಬೆದರಿಕೆ

Date:

ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲೆಗಳು ಕೊಡಿ, ನನ್ನೊಂದಿಗೆ ಮರಾಠಿಯಲ್ಲೇ ಮಾತನಾಡಿ ಎಂದು ಗ್ರಾಮ ಪಂಚಾಯತಿ ಪಿಡಿಒಗೆ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಭಾಷೆಯ ವಿಚಾರಕ್ಕೆ ಕೆಎಸ್‌ಆರ್‌ಟಿಸಿ ನಿರ್ವಾಹಕರ ಮೇಲೆ ಮರಾಠಿ ಯುವಕರ ಗುಂಪು ಹಲ್ಲೆ ನಡೆಸಿದ್ದ ಘಟನೆಯ ಬಳಿಕ ಬೆಳಗಾವಿಯಲ್ಲಿ ಭಾಷಾ ಸಂಘರ್ಷಗಳು ಮತ್ತೆ ಭುಗಿಲೆದ್ದಿವೆ. ಇದೀಗ, ಅಂತದ್ದೇ ಘಟನೆಯಲ್ಲಿ ಬೆಳಗಾವಿ ಸಮೀಪದ ಕಿಣಿಯೆ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

ಕಿಣಿಯೆ ಗ್ರಾಮ ‍ಪಂಚಾಯತಿ ಕಚೇರಿಯಲ್ಲಿ ಪಿಡಿಒ ನಾಗೇಂದ್ರ ಪತ್ತಾರ ಎಂಬವರಿಗೆ ತಿಪ್ಪಣ್ಣ ಡೋಕ್ರೆ ಎಂಬಾತ ನಿಂದಿಸಿ, ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋದಲ್ಲಿ, “ನನಗೆ ಕನ್ನಡ ಬರಲ್ಲ. ನನ್ನೊಂದಿಗೆ ನೀವು ಮರಾಠಿಯಲ್ಲಿ ಮಾತನಾಡಬೇಕು. ಸರ್ಕಾರಿ ದಾಖಲೆಗಳನ್ನು ಮರಾಠಿಯಲ್ಲೇ ಕೊಡಬೇಕು” ಎಂದು ತಿಪ್ಪಣ್ಣ ಕೇಳಿದ್ದಾರೆ.

ಅವರ ಮಾತಿಗೆ ಪ್ರತಿಕ್ರಿಯಿಸಿರುವ ಪಿಡಿಒ ನಾಗೇಂದ್ರ, “ಇದು ಕರ್ನಾಟಕ, ಇಲ್ಲಿ ಕನ್ನಡದಲ್ಲೇ ದಾಖಲೆ ಕೊಡಬೇಕು. ನೀವು ಕನ್ನಡದಲ್ಲಿ ಅರ್ಜಿ ಕೊಡಿ, ಪರಿಶೀಲಿಸಿ, ದಾಖಲೆ ಕೊಡುತ್ತೇನೆ” ಎಂದು ಹೇಳಿದ್ದಾರೆ.

ಅವರ ಮಾತಿಗೆ ಸಿಟ್ಟಾದ ಆರೋಪಿ ತಿಪ್ಪಣ್ಣ, ಪಿಡಿಒ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಯಾರಾದರು ಒಂದು ಹೆಜ್ಜೆ ಮುಂದೆ ಬಂದರೆ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಅಲ್ಲಿನ ಸಿಬ್ಬಂದಿಗಳು ಪೊಲೀಸರನ್ನು ಕರೆಸುವುದಾಗಿ ಹೇಳಿದಾಗ, ಆತ ಪಂಚಾಯತಿ ಕಚೇರಿಯಿಂದ ಹೊರಹೋಗಿದ್ದಾನೆ.

ಬೆಳಗಾವಿ ಬಳಿಯ ಬಾಳೇಕುಂದ್ರಿ ಗ್ರಾಮದಲ್ಲಿ ಬಸ್‌ ಹತ್ತಿದ್ದ ಮರಾಠಿ ಯುವಕರು ನಿರ್ವಾಹಕ ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ, ನಿರ್ವಾಹಕನ ವಿರುದ್ಧವೂ ಲೈಂಗಿಕ ಕಿರುಕುಳದ ದೂರನ್ನೂ ದಾಖಲಿಸಿದ್ದರು. ಘಟನೆಯನ್ನು ಕನ್ನಡ ಪರ ಸಂಘಟನೆಗಳು ಖಂಡಿಸಿ, ಪ್ರತಿಭಟನೆ ನಡೆಸಿದ್ದವು. ಘಟನೆಯಿಂದಾಗಿ, ಬೆಳಗಾವಿಯ ಮಹಾರಾಷ್ಟ್ರ-ಕರ್ನಾಟಕದ ಗಡಿಯಲ್ಲಿ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿತ್ತು. ಸಾರಿಗೆ ಬಸ್‌ಗಳಿಗೆ ಮಸಿ ಬಳಿದು ದಾಂಧಲೆ ನಡೆಸಿದ್ದ ಘಟನೆಗಳೂ ವರದಿಯಾಗಿದ್ದವು.

ಬೆಳಗಾವಿಯಲ್ಲಿ ಮರಾಠಿಗರು ನಡೆಸುತ್ತಿರುವ ದಾಂಧಲೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಮಾರ್ಚ್‌ 22ರಂದು ಕರ್ನಾಟಕ ಬಂದ್‌ಗೆ ಕರೆಕೊಟ್ಟಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...