ಬೆಳಗಾವಿ | ಕುಡಿಯುವ ನೀರಿಗಾಗಿ ಹಿಡಕಲ್‌ ಜಲಾಶಯದಲ್ಲಿ ನೀರು ಕಾಯ್ದಿರಿಸಲು ಅನುಮತಿ

Date:

  • ಐದು ಟಿಎಂಸಿ ನೀರು ಕಾಯ್ದಿರಿಸಲು ಸರ್ಕಾರದಿಂದ ಕ್ರಮ
  • ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆದೇಶ

ಬೇಸಿಗೆಯಲ್ಲಿ ಕಿತ್ತೂರು ಕರ್ನಾಟಕ ಭಾಗದ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಪ್ರದೇಶಗಳ ಕುಡಿಯುವ ನೀರಿನ ಅವಶ್ಯಕತೆಗಳನ್ನು ಪೂರೈಸಲು ಅನುಕೂಲವಾಗುವಂತೆ ಘಟಪ್ರಭಾ ನದಿಯ ಹಿಡಕಲ್‌ ಜಲಾಶಯದಲ್ಲಿ ಹೆಚ್ಚುವರಿ 5 ಟಿಎಂಸಿ ನೀರು ಕಾಯ್ದಿರಿಸಲು ಆದೇಶಿಸಿದೆ.

ಸರ್ಕಾರದ ಈ ನಿರ್ಧಾರದಿಂದ ಬಾಗಲಕೋಟೆ, ಮುಧೋಳ, ಬೆಳಗಾವಿ ನಗರ, ಬೆಳಗಾವಿ ಜಿಲ್ಲೆಯ ಇತರೆ ಕೆಲವು ಪ್ರದೇಶಗಳ ನೀರಿನ ಬವಣೆಗೆ ತಾತ್ಕಾಲಿಕ ಪರಿಹಾರ ಸಿಗಲಿದೆ ಎಂದು ಹೇಳಲಾಗಿದೆ.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇದರ ಬಗ್ಗೆ ಆದೇಶ ಹೊರಡಿಸಿದ್ದು, “ರಾಷ್ಟ್ರೀಯ ಜಲ ನೀತಿಯನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋವಿಂದ ಕಾರಜೋಳ ಘಟಪ್ರಭಾ ಲೆಟರ್‌

ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಾಗಲಕೋಟೆ ಜಿಲ್ಲೆಗೆ ಹಿಡಕಲ್‌ ಜಲಾಶಯದಲ್ಲಿ ಈಗ ಕಾಯ್ದಿರಿಸಿದ 4.00 ಟಿಎಂಸಿ ಬದಲಾಗಿ 5.00 ಟಿಎಂಸಿ ನೀರನ್ನು ಕಾಯ್ದಿರಿಸಲಾಗಿದೆ. ಘಟಪ್ರಭಾ ನೀರಾವರಿ ಸಲಹಾ ಸಮಿತಿಯೊಂದಿಗೆ ಸಮಾಲೋಚಿಸಿ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸೂಕ್ತ ವ್ಯವಸ್ಥೆ ಮಾಡಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ನ.14 ರಂದು ಜರುಗಿದ ಘಟಪ್ರಭಾ ನೀರಾವರಿ ಯೋಜನಾ ಸಲಹಾ ಸಮಿತಿಯ ಸಭೆಯಲ್ಲಿ ಬಾಗಲಕೋಟೆ ಮತ್ತು ಮುಧೋಳ ನಗರ ಸೇರಿದಂತೆ ಬೆಳಗಾವಿ ಜಿಲ್ಲೆಯ ಪ್ರದೇಶಗಳಿಗೆ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಅವಶ್ಯಕ ಕುಡಿಯುವ ನೀರನ್ನು ಕಾಯ್ದಿರಿಸಲು ತೀರ್ಮಾನಿಸಲಾಗಿತ್ತು.

ಬಾಗಲಕೋಟೆ ಜಿಲ್ಲಾಧಿಕಾರಿಗಳ ಕೋರಿಕೆಯನ್ವಯ ಈ ಮೊದಲು ಕಾಯ್ದಿರಿಸಿದ 4.00 ಟಿಎಂಸಿ ಬದಲಾಗಿ 5.00 ಟಿಎಂಸಿ ನೀರನ್ನು ಕಾಯ್ದಿರಿಸಲು ಸರ್ಕಾರವು ತೀರ್ಮಾನಿಸಿದ್ದು, ಆದೇಶ ಸಂಖ್ಯೆ: ಜಸಂಇ 13 ಎನ್‌ಐಎನ್‌ 2023 ದಿ. 10/03/2023 ರಂದು ಹೊರಡಿಸಲಾದ ಆದೇಶದಂತೆ ನಿರ್ದೇಶನ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...