ಬೆಳಗಾವಿ | ಮನರೇಗಾ ಯೋಜನೆಯಡಿ ಕನಿಷ್ಠ 200 ದಿನಗಳು ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಆರ್ಥಿಕ ಸಂಕಷ್ಟದಲ್ಲಿರುವ ರೈತರು ಮತ್ತು ಕಾರ್ಮಿಕರ ಸಾಲ ಮನ್ನಾ ಮಾಡಬೇಕು. ಡಾ.ಸ್ವಾಮಿನಾಥನ್‌ ವರದಿ ಜಾರಿಗೊಳಿಸಬೇಕು. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೊಳಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ.

ಪ್ರತಿಭಟನೆಯಲ್ಲಿ ಸಿದಗೌಡ ಮೋದಗಿ, ಡಾ.ಜನಾರ್ದನ್‌, ಮಂದಾ ನೇವಗಿ, ನಾಗೇಶ ಸಾತೇರಿ, ಮಲ್ಲಿಕಾರ್ಜುನ ಡೊಂಗರಗಾವಿ, ಸಂಜು ಡೊಂಗರಗಾವಿ, ಶಿವಲೀಲಾ ಮಿಸಾಳೆ, ಗೀತಾ ಧರೆಣ್ಣವರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...