ಬೆಳಗಾವಿ | ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ: ಕಾರಣಗಳೇನು?

Date:

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಡೀರ್ ರಾಜೀನಾಮೆ ನೀಡಿರುವುದರ ಹಿಂದಿನ ಕಾರಣಗಳು ಏನು ಎಂಬುದು ಜಿಲ್ಲೆಯ ಜನರಲ್ಲಿ ಕುತೂಹಲ ಮೂಡಿಸಿದ್ದು ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ತಮ್ಮ ಬೆಂಬಲಿಗರ ಜೊತೆ ಉಪಾಧ್ಯಕ್ಷರ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು ರಮೇಶ್ ಕತ್ತಿ ರಾಜಿನಾಮೆಗೆ ಕಾರಣವಾಯಿತೆ ಎಂಬ ಅನುಮಾನಗಳು ಮೂಡಿವೆ.

ಜಿಲ್ಲೆಯ ನಿಪ್ಪಾಣಿ ತಾಲೂಕಿನ ಡಿ‌ಸಿಸಿ ಬ್ಯಾಂಕಿನ ಸದಸ್ಯರ ಸಂಖ್ಯೆ ಹೆಚ್ಚಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಣ್ಣಾ ಸಾಹೇಬ್ ಜೊಲ್ಲೆ ‌ಸಭೆಯಲ್ಲಿ ಪಟ್ಟು ಹಿಡಿದಿದ್ದರಿಂದ ರಮೇಶ್ ಕತ್ತಿ ಈ ಕುರಿತು ಎಲ್ಲ ನಿರ್ದೇಶಕ, ಸಹಮತ ಮೂಡಿಲ್ಲ ಮತ್ತು ಇದಕ್ಕೆ ಅವಕಾಶ ಇಲ್ಲ. ಎಲ್ಲರೂ ಒಮ್ಮತದಿಂದ ಬನ್ನಿ ಎಂದು ಖಡಾಖಂಡಿತವಾಗಿ ಹೇಳಿದ್ದರಿಂದ ಅಣ್ಣಾ ಸಾಹೇಬ್ ಜೊಲ್ಲೆ ಸಾಮಾನ್ಯ ಸಭೆ ಬಹಿಷ್ಕರಿಸಿ ತಮ್ಮ ಬೆಂಬಲಿಗರ ಜೊತೆ ಉಪಾಧ್ಯಕ್ಷರ ನೇತೃತ್ವದಲ್ಲಿ ಪ್ರತ್ಯೇಕ ಸಭೆ ಮಾಡಿದ್ದರ ಕಾರಣ, ಅಸಮಾಧಾನಗೊಂಡು ರಮೇಶ್ ಕತ್ತಿ ಒಳ ರಾಜಕಾರಣಕ್ಕೆ ಬೆಸತ್ತು ರಾಜೀನಾಮೆ ನೀಡಿರಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಈ ಕುರಿತು ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ, ರಮೇಶ್ ಕತ್ತಿಯವರು 2015ರಿಂದ 2024ರ ವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಅವಧಿ ಇನ್ನೂ ಒಂದು ವರ್ಷ ಬಾಕಿಯಿದೆ. ಬ್ಯಾಂಕಿನ ನಿರ್ದೇಶಕರು ಪ್ರತ್ಯೇಕ ಸಭೆ ನಡೆಸಿ, ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದ ಬಗ್ಗೆ ತೀರ್ಮಾನ ಮಾಡಿರಲಿಲ್ಲ. ಆದರೆ, ಬ್ಯಾಂಕಿನ ನಿರ್ದೇಶಕರು, ಹಿರಿಯರಿಗೆ ಗೌರವ ಕೊಟ್ಟು ರಮೇಶ ಕತ್ತಿ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ವ ಇಚ್ಛೆಯಿಂದಲೇ ರಾಜೀನಾಮೆ ನೀಡಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಬೆಳಗಾವಿ | ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು

ರಮೇಶ ಕತ್ತಿ ತಮ್ಮ ಅಧಿಕಾರಾವಧಿಯಲ್ಲಿ ಕಳೆದ ವರ್ಷ ರಾಜ್ಯದಲ್ಲೇ ಬೆಳಗಾವಿ ಡಿಸಿಸಿ ಬ್ಯಾಂಕ್ ನಂಬರ್ 1ನೇ ಸ್ಥಾನದಲ್ಲಿದೆ. ಮತ್ತು ₹30 ಕೋಟಿ ನಿವ್ವಳ ಲಾಭ ಗಳಿಸಿದೆ. ಕತ್ತಿ ಅವರು ಉತ್ತಮ ಆಡಳಿತವನ್ನೂ ನೀಡಿದ್ದಾರೆ. 2025ರ ನವೆಂಬ‌ರ್ ತಿಂಗಳಲ್ಲಿ ಡಿಸಿಸಿ ಬ್ಯಾಂಕಿಗೆ ಚುನಾವಣೆ ನಡೆಯಲಿದೆ. ಮುಂದಿನ ಅಧ್ಯಕ್ಷರನ್ನು ಸಚಿವ ಸತೀಶ್ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ಲಕ್ಷ್ಮಣ ಸವದಿ ರಮೇಶ್ ಜಾರಕಿಹೊಳಿ, ರಮೇಶ್ ಕತ್ತಿ ನೇತೃತ್ವದಲ್ಲಿ ನೂತನ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...