ಬೆಳಗಾವಿ | ಚರಂಡಿ ಅವ್ಯವಸ್ಥೆ; ಸಾರ್ವಜನಿಕರ ಆಕ್ರೋಶ

Date:

ಬೆಳಗಾವಿ ನಗರದ ಸಾಯಿ ಕಾಲೋನಿಯಲ್ಲಿ ಕಳೆದ ಆರು ತಿಂಗಳಿಂದ ಚರಂಡಿ ಅವ್ಯವಸ್ಥೆ ಕುರಿತ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಚರಂಡಿ ಅಧ್ವಾನವಾಗಿರುವ ಪರಿಣಾಮ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ.

ಈ ಸಮಸ್ಯೆಯನ್ನು ಅನೇಕ ಬಾರಿ ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ಸಮಸ್ಯೆಯಿಂದ ಹತ್ತಿರದ ಆಸ್ಪತ್ರೆಗಳಿಗೆ ಹೋಗುವವರು, ಶಾಲಾ ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತಿದೆ. ಆರೋಗ್ಯ ಸಮಸ್ಯೆಗಳ ಭೀತಿ ಕೂಡ ವ್ಯಕ್ತವಾಗಿದೆ.

ಈ ಕುರಿತು ಈ ದಿನ ಡಾಟ್ ಕಾಮ್ ಜೊತೆ ಮಾತನಾಡಿದ ಕಾರ್ಪೊರೇಟರ್, “ಈ ಚರಂಡಿಗಳು ಅಮೃತ್ ಯೋಜನೆಯಡಿ ನಿರ್ಮಾಣವಾಗಿದ್ದು, ನಾವು ಸಮಸ್ಯೆಯ ಬಗ್ಗೆ ಮೇಲ್ದರ್ಜೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 04 07 at 9.40.22 AM

“ಸುಮಾರು ಎರಡು ವರ್ಷಗಳಿಂದ ಇಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಚರಂಡಿ ನೀರು ರಸ್ತೆಯ ಮೇಲೆ ಬರುತ್ತಿದ್ದು ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಮಕ್ಕಳಿಗೆ, ವೃದ್ಧರಿಗೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದ್ದು, ಸಮಸ್ಯೆ ಕೇಳುವವರು ಯಾರೂ ಇಲ್ಲದಂತಾಗಿದೆ. ಕಾರ್ಪೋರೇಶನ್‌ ಅಧಿಕಾರಿಗಳು ಇದು ನಮ್ಮ ಜವಾಬ್ದಾರಿಯಲ್ಲ ಎಂದು ಹಾರಿಕೆಯ ಉತ್ತರ ನೀಡುತ್ತಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು” ಎಂದು ಸ್ಥಳೀಯ ನಿವಾಸಿ ರುಕ್ಮಿಣಿ ಈದಿನ ಮುಖಾಂತರ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

WhatsApp Image 2025 04 07 at 9.40.36 AM

“ಚರಂಡಿ ನೀರು ರಸ್ತೆ ಮೇಲೆ ಬರುತ್ತಿದ್ದು ಇಲ್ಲಿನ ಜನರ ಆರೋಗ್ಯ ಹಾಳಾಗುತ್ತಿದೆ. ಸಂಜೆಯಾದರೆ ಸೊಳ್ಳೆಗಳ ಕಾಟ ಕೂಡ ಹೆಚ್ಚಾಗಿದೆ. ಜನಪ್ರತಿನಿಧಿಗಳಂತೂ ಓಟು ಪಡೆದ ಮೇಲೆ ಇತ್ತ ಹೆಜ್ಜೆ ಇಡುವುದೇ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು ಅಲ್ಲಿನ ನಿವಾಸಿ ಶಾಂತಾ.

ಶಕುಂತಲಾ ಮಾತನಾಡಿ, “ಕಾಲ ಕಾಲಕ್ಕೆ ಸರಿಯಾಗಿ ಚರಂಡಿಯನ್ನು ಸ್ವಚ್ಛಗೊಳಿಸುತ್ತಿಲ್ಲ. ಇದರಿಂದ ಚರಂಡಿ ನೀರು ರಸ್ತೆಗೆ ಬರುತ್ತದೆ. ಚರಂಡಿ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ಚರಂಡಿ ನೀರನ್ನು ಹೊರಗಡೆ ಹೋಗುವ ಹಾಗೆ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಇದುವರೆಗೂ ಸಮಸ್ಯೆ ಬಗೆ ಹರಿಸಿಲ್ಲ” ಎಂದು ತಿಳಿಸಿದರು.

WhatsApp Image 2025 04 07 at 9.40.47 AM

ಸಾಯಿ ಕಾಲೋನಿಯಲ್ಲಿ ಹಲವು ವರ್ಷಗಳಿಂದ ಚರಂಡಿ ಅವ್ಯವಸ್ಥೆಯಿಂದ ಜನರು ಸಮಸ್ಯೆ ಎದುರಿಸುತ್ತಿದ್ದು. ಈ ಅವ್ಯವಸ್ಥೆಗೆ ಇಲ್ಲಿನ ಅಧಿಕಾರಿಗಳು ಮತ್ತು ಸ್ಥಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣ. ಆದಷ್ಟು ಬೇಗನೆ ಚರಂಡಿ ವ್ಯವಸ್ಥೆ ಸರಿಪಡಿಸಿ ಜನರ ಆರೋಗ್ಯ ಕಾಪಾಡುವುದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕರ್ತವ್ಯವಾಗಿದೆ.

ಇದನ್ನೂ ಓದಿ: ಬೆಳಗಾವಿ | ಶಾಸಕರ ಸಂಬಂಧಿಯ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...