ಬೆಳಗಾವಿ | ಒಂದು ವರ್ಷದಲ್ಲಿ 90 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಡಾ.ನಾಗಲಕ್ಷ್ಮೀ ಚೌಧರಿ

Date:

ಬೆಳಗಾವಿ ಜಿಲ್ಲೆಯಲ್ಲಿ ಆಗಸ್ಟ್ ವರ್ಷ ಅಂದರೆ 2023 ರಿಂದ ಇಲ್ಲಿಯವರೆಗೆ 2024 ಆಗಸ್ಟ್‌ ತಿಂಗಳವರೆಗೆ ಮಹಿಳೆಯರ ಮೇಲೆ ಒಟ್ಟು 90 ಲೈಂಗಿಕ ದೌರ್ಜನ್ಯ ನಡೆದಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಅವರು, ಬೆಳಗಾವಿ ಜಿಲ್ಲಾಸ್ಪತ್ರೆಯ ಸ್ವಚ್ಛತೆ, ಸಿಬ್ಬಂದಿ ಕರ್ತವ್ಯ ಪಾಲನೆ, ಮಹಿಳೆಯರಿಗೆ ರಕ್ಷಣೆ ಸೇರಿದಂತೆ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ನಾಗಲಕ್ಷ್ಮೀ ಚೌಧರಿ, ಜಿಲ್ಲೆಯಲ್ಲಿ ನಿರ್ಭಯ ಘಟಕದಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ತೊಂಬತ್ತಾಗಿದೆ. ಇನ್ನೂ ಕೆಲವು ಪ್ರಕರಣಗಳು ಬೆಳಕಿಗೆ ಬಾರದೇ ಇರಬಹುದು. ಅವುಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ ಜಿಲ್ಲೆಯಲ್ಲಿ ದೇವದಾಸಿಯರ ಪದ್ಧತಿ ಜೀವಂತ ಇರುವ ವಿಷಯದ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ನಾನು ಸವದತ್ತಿಯಲ್ಲಿ ದೇವದಾಸಿಯರನ್ನು ಭೇಟಿಯಾಗಿ ಅವರ ಜೊತೆಗೆ ಚರ್ಚಿಸಿದ್ದೇನೆ.‌ ಅವರಿಗೆ ಕಾನೂನು ಅರಿವು ಮೂಡಿಸುವ ಅಗತ್ಯ ಇದ್ದು, ಸಂಬಂಧಿಸಿದ ಇಲಾಖೆಯವರಿಗೆ ಸೂಚನೆ ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡಲಾಗುವುದು ಹಾಗೂ ಜಿಲ್ಲೆಯ ಬೈಲಹೊಂಗಲ ಹಾಗೂ ಸವದತ್ತಿ ತಾಲೂಕು ಆಸ್ಪತ್ರೆ ಶುಚಿಯಾಗಿವೆ.‌ ಸರ್ಕಾರದ ಆರೋಗ್ಯದ ಸೌಲಭ್ಯವನ್ನು ಸಾರ್ವಜನಿಕರು ಪಡೆದುಕೊಳ್ಳುತ್ತಿದ್ದಾರೆ. ಉಳಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಅಂಗನವಾಡಿ ಶಾಲೆಗಳಲ್ಲಿ ಶಿಕ್ಷಕಿಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಕೊಡಬೇಕೆಂದು ಸೂಚನೆ‌ ನೀಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಮ್ಸ್ ನಿರ್ದೇಶಕರಾದ ಅಶೋಕ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...