ಬೆಳಗಾವಿ | ಕಲ್ಲಿನಿಂದ ಜಜ್ಜಿ ಪತ್ನಿಯ ಹತ್ಯೆಗೈದ ಪತಿ

Date:

ಕುಡಿದ ಮತ್ತಿನಲ್ಲಿ ಕಲ್ಲಿನಿಂದ ಜಜ್ಜಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್‌ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮೀರಾಬಾಯಿ (25) ಕೊಲೆಯಾದ ದುರ್ದೈವಿ. ಬಾಲಾಜಿ ಕಬಲಿ (35) ಕೊಲೆ ಆರೋಪಿ. ದಂಪತಿ ಮಹಾರಾಷ್ಟ್ರ ಮೂಲದವರಾಗಿದ್ದು, ಕಬ್ಬು ಕಟಾವು ಮಾಡುವ ಗ್ಯಾಂಗ್‌ ಜತೆ ಕೆಲಸಕ್ಕೆಂದು ಉಪ್ಪಾರಹಟ್ಟಿಗೆ ಬಂದಿದ್ದರು ಎನ್ನಲಾಗಿದೆ. ಕುಡಿತದ ಚಟವಿದ್ದ ಬಾಲಾಜಿ ಪತ್ನಿ ಜತೆ ಯಾವುದೋ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾನೆ. ಕೊನೆಗೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಲಾರಿ-ಕಾರು ನಡುವೆ ಅಪಘಾತ; ಪತಿ ಎದುರೇ ಪತ್ನಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಹಿತಿ ಪ್ರಕಾರ ದಂಪತಿಗೆ ಎರಡು ವರ್ಷದ ಮಗುವೊಂದಿತ್ತು. ತಾಯಿಯ ಮೃತದೇಹದ ಮೇಲೆ ಮಗು ಮಲಗಿ ಎಬ್ಬಿಸಲು ಪ್ರಯತ್ನಿಸುತ್ತಿದ್ದದ್ದು ನೋಡುಗರ ಮನ ಕಲಕುವಂತಿತ್ತು. ಸ್ಥಳೀಯರು ಪಾಪಿ ಪತಿಗೆ ಹಿಡಿಶಾಪ ಹಾಕಿದ್ದು, ಆರೋಪಿಯನ್ನು ಕಠಿಣ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿದ್ದಾರೆ. ಗೋಕಾಕ್‌ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ಬಾಲಾಜಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...