ಬೆಳಗಾವಿ | ಬಸವಣ್ಣನವರ ವಚನಗಳ ಸಂದೇಶಗಳನ್ನು ಯುವಕರಿಗೆ ಮುಟ್ಟಿಸಬೇಕಿದೆ: ಪ್ರಭಾಕರ ಕೋರೆ

Date:

ಬಸವಣ್ಣನವರ ವಚನಗಳ ಸಂದೇಶಗಳನ್ನು ಯುವಕರಿಗೆ ಮುಟ್ಟಿಸಬೇಕಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.

ಬೆಳಗಾವಿ ಶಹಾಪುರದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಸವೇಶ್ವರ ಪೀಠ ಹಾಗೂ ಜಗಜ್ಯೋತಿ ಬಸವೇಶ್ವರ ಕಲ್ಯಾಣ ಮಂಟಪ, ದಾನಮ್ಮದೇವಿ ಮಂದಿರ ಟ್ರಸ್ಟ್ ಸಹಯೋಗದಲ್ಲಿ ‘ಬಸವ ವಾಹಿನಿ’ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಶತಶತಮಾನಗಳವರೆಗೆ ನಾವು ಬಸವಣ್ಣನವರನ್ನು ರಾಜ್ಯದ ಆಚೆಗೆ ಬಿಟ್ಟುಕೊಡಲಿಲ್ಲ. ಇಂದು ಅವರ ಸಂದೇಶಗಳು ವಿಶ್ವಮಾನ್ಯವೆನಿಸಿವೆ. ಇಂದಿನ ಯುವಜನಾಂಗಕ್ಕೆ ಅದನ್ನು ಮುಟ್ಟಿಸುವ ಕೆಲಸ ಮಾಡಬೇಕಾಗಿದೆ. ಧಾರವಾಡ ವಿ.ವಿ ಬಸವಪೀಠಕ್ಕೆ ಎಸ್.ವಿ.ಬೆಂಬಳಗಿಯವರ ಕೊಡುಗೆ ಅಪಾರವಾಗಿದೆ. ಮುರಗೋಡದ ಮಹಾಂತಜ್ಜನವರ ಭಕ್ತರಾಗಿ ಅವರ ಕಾರ್ಯವನ್ನು ಬಸವಪೀಠದ ಮೂಲಕ ಯಶಸ್ವಿಯಾಗಿ ನೆರವೇರಿಸಿದರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 20 at 9.40.30 AM 1

‘ಬಸವಣ್ಣ ಸಾಂಸ್ಕೃತಿಕ ನಾಯಕ’ ವಿಷಯದ ಮೇಲೆ ವಿದ್ವಾಂಸ ವಿ.ಎಸ್.ಮಾಳಿ ಮಾತನಾಡಿ, “ಮತ, ಮೌಢ್ಯ, ಅಜ್ಞಾನ ತ್ರಿವಿಧ ಮಲಗಳನ್ನು ತೊಳೆದು ನಮ್ಮ ಹೃದಯದಲ್ಲಿ ಭಕ್ತಿಜ್ಞಾನ ಸುಜಲವನ್ನು ತುಂಬಿದವರು ಬಸವಣ್ಣನವರು. ಕನ್ನಡ ಕುಲಕೋಟಿಯ ಸಂಸ್ಕೃತಿಯ ಕುಲಪತಿ ಬಸವಣ್ಣ” ಎಂದರು.

“ರಾಜ್ಯ ಸರ್ಕಾರವು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದಾಗ ರಾಜ್ಯದ ಯಾವುದೇ ಸಮುದಾಯವರು ವಿರೋಧ ಮಾಡಲಿಲ್ಲ. ಕಾರಣ ಬಸವಣ್ಣನವರು ಎಲ್ಲರಿಗೂ ಮಹಾತ್ಮ. ಎಲ್ಲರೂ ತನುಮನದಿಂದ ಒಪ್ಪಿಕೊಂಡ ಮಹಾನ್‌ ಶರಣ” ಎಂದರು.

ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಪತಿ ಕೆ.ಬಿ.ಗುಡಸಿ, ಬಸವಪೀಠ ಕಳೆದ 50 ವರ್ಷಗಳಿಂದ ಮಹತ್ತರ ಕಾರ್ಯಗಳನ್ನು ಮಾಡುತ್ತ ಬಂದಿದೆ ಎಂದು ತಿಳಿಸಿದರು.

ಕಾರಂಜಿ ಮಠದ ಪೂಜ್ಯ ಗುರುಸಿದ್ಧ ಸ್ವಾಮೀಜಿ, ಧಾರವಾಡ ಮುರಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮುರಗೋಡ ದುರದುಂಡೀಶ್ವರ ಮಠದ ನೀಲಕಂಠ ಸ್ವಾಮಿಗಳು ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

ಕೆಎಲ್‌ಇ ಸಂಸ್ಥೆಯಲ್ಲಿ 40 ವರ್ಷ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪ್ರಭಾಕರ ಕೋರೆ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಬಸವಪೀಠದ ಸಂಯೋಜಕ ಸಿ.ಎಂ.ಕುಂದಗೋಳ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇದನ್ನು ಓದಿದ್ದೀರಾ? ಧಾರವಾಡ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಟ್ರಸ್ಟ್‌ ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ ಸ್ವಾಗತಿಸಿದರು. ಕಾರ್ಯದರ್ಶಿ ಸಿ.ಎಂ. ಕಿತ್ತೂರ ವಂದಿಸಿದರು. ಡಾ.ಮಹೇಶ ಗುರನಗೌಡರ ನಿರೂಪಿಸಿದರು. ಎ.ಎಸ್.ಪಾಟೀಲ, ಎಂ.ಜಿ.ಬೊಳಮಲ್ಲ, ಡಾ.ಎಂ.ಎಸ್.ಉಮದಿ, ಎಸ್.ವಿ.ಬಾಗಿ, ಸಚಿನ ಖಡಬಡಿ ಹಾಗೂ ಪದಾಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...