ಬೆಳಗಾವಿ | ಜಿಲ್ಲೆಯಲ್ಲಿ ಸದ್ಯ ಪ್ರವಾಹ ಭೀತಿ ಇಲ್ಲ; ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Date:

ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರಗಳನ್ನು ಪರಿಶೀಲನೆ ನಡೆಸಿದರು.

ನಂತರ ಮಾಹಿತಿ ನೀಡಿದ ಅವರು, “ಜಲಾನಯನ ಪ್ರದೇಶದಲ್ಲಿ 26 ಬೋಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಗತ್ಯಬಿದ್ದರೆ ಹೆಚ್ಚುವರಿ ಬೋಟ್‌ಗಳನ್ನು ಕಾರವಾರದಿಂದ ತರಿಸಲಾಗುವುದು” ಎಂದು ತಿಳಿಸಿದರು.

“ಕೆಳಹಂತದಲ್ಲಿರುವ ಸೇತುವೆಗಳು ಮುಳುಗಡೆಯಾದಾಗ ಎಚ್ಚರಿಕೆ ಫಲಕಗಳನ್ನು ಅಳವಡಿಸಿ, ಜನರು ದಾಟದಂತೆ ಬ್ಯಾರಿಕೇಡ್ ಹಾಕಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುತಗಟ್ಟಿ ಬಳಿ ಘಟಪ್ರಭಾ ನದಿಯ ಸೇತುವೆ ಬಳಿ ನದಿಯ‌ ಒಳಹರಿವು ಪ್ರಮಾಣ ಹಾಗೂ ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ‌ ಮಾಹಿತಿ ಪಡೆದುಕೊಂಡರು.

ನಂತರ ಸಂಕೇಶ್ವರ ಪಟ್ಟಣಕ್ಕೆ‌ ತೆರಳಿ, ಸಂಭವನೀಯ ಪ್ರವಾಹದಿಂದ ಬಾಧಿತಗೆ ಒಳಗಾಗಬಹುದಾದ ಪ್ರದೇಶಗಳನ್ನು ವೀಕ್ಷಿಸಿದರು. ಕಳೆದ ಬಾರಿ ಪ್ರವಾಹ ಬಂದಾಗ‌ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅವರು, ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ತಹಶೀಲ್ದಾರರು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

2019ರ ಪ್ರವಾಹ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದ‌ ಕಾಳಜಿ ಕೇಂದ್ರಗಳಂತೆ ಈ ಬಾರಿಯೂ ಈಗಾಗಲೇ ಕಾಳಜಿ ಕೇಂದ್ರಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ ಎಂದು ಹುಕ್ಕೇರಿ ತಹಶೀಲ್ದಾರ್‌ ಮಂಜುಳಾ ನಾಯಕ ವಿವರಿಸಿದರು.

ಚಿಕ್ಕೋಡಿ ತಾಲೂಕಿನ ಮಾಂಜರಿ‌ಯ ಸೇತುವೆ ಬಳಿ ಕೃಷ್ಣಾ‌ ನದಿಯ ಒಳಹರಿವು ವೀಕ್ಷಿಸಿದರು. ನಂತರ ಯಡೂರ ಗ್ರಾಮದ ಬಳಿ ಬೋಟ್ ಮೂಲಕ ಕೃಷ್ಣಾ ನದಿಯಲ್ಲಿ ಸಂಚರಿಸಿದ ಜಿಲ್ಲಾಧಿಕಾರಿಗಳು, ತುರ್ತು ಸಂದರ್ಭದಲ್ಲಿ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ನದಿಗಳ ಒಳ ಹರಿವಿನ ಮೇಲೆ ನಿರಂತರ ನಿಗಾ ವಹಿಸುವುದರ ಜತೆಗೆ ತುರ್ತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಬೋಟ್‌ಗಳು ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...