ಬೆಳಗಾವಿ | ಮೇನಲ್ಲಿ ತಾಪಂ, ಜಿಪಂ ಚುನಾವಣೆ ಸಾಧ್ಯತೆ: ಚುನಾವಣಾ ಆಯುಕ್ತ

Date:

ಬೆಳಗಾವಿಯ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ದಿನಾಂಕವನ್ನು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಜಿ ಎಸ್ ಸಂಗ್ರೇಶಿ ತಿಳಿಸಿದರು.

ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಕಾರಣ ಚುನಾವಣೆ ವಿಳಂಬವಾಗಿವೆ. ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದ ತಕ್ಷಣ ಚುನಾವಣೆ ಘೋಷಿಸಲಾಗುವುದು. ವಿದ್ಯುನ್ಮಾನ ಮತಪೆಟ್ಟಿಗೆ ಬದಲು ಮತಪತ್ರಗಳನ್ನೇ ಬಳಸುವ ಉದ್ದೇಶವಿದ್ದು, ಶೀಘ್ರವಾಗಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಸಂಕ್ರಾತಿ‌ ಹಬ್ಬಕ್ಕೆ ಬುತ್ತಿ ಕೊಡಲು ಮನೆಗೆ ಬಂದ ಅತ್ತೆಯನ್ನು ಕೊಲೆ ಮಾಡಿದ ಅಳಿಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ಸಲ ಚುನಾವಣೆ ಮುಗಿದ ಬಳಿಕ ಇವಿಎಂ ಯಂತ್ರಗಳ ವಿಶ್ವಾಸಾರ್ಹತೆ ಪ್ರಶ್ನಿಸಲಾಗುತ್ತದೆ. ರಾಜಕೀಯ ಪಕ್ಷಗಳ ನಾಯಕರು ಮತ್ತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ, ಮತಪತ್ರಗಳ ಬಳಕೆ ಬಗ್ಗೆ ತೀರ್ಮಾನಿಸಲಾಗುವುದು. ಬೆಳಗಾವಿ ಜಿಲ್ಲೆಯಲ್ಲಿ 91 ಜಿಲ್ಲಾ ಪಂಚಾಯಿತಿ ಮತ್ತು 301 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲಾಗಿದೆ. ಹೊಸದಾಗಿ 7 ಪಟ್ಟಣ ಪಂಚಾಯಿತಿಗಳು ರಚನೆಯಾಗಿದ್ದು, ಈ ಚುನಾವಣೆಗಳನ್ನೂ ಇದೇ ವೇಳೆ ನಡೆಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...