ಬೆಳಗಾವಿ | ದೆಹಲಿ ರೈತ ಹೋರಾಟ ವಾಪಸಾತಿ ಸಮಯದ ಭರವಸೆ ಈಡೇರಿಸುವಂತೆ ಆಗ್ರಹ

Date:

ದೆಹಲಿ ರೈತ ಹೋರಾಟ ವಾಪಸಾತಿ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ಬೆಳಗಾವಿ ಜಿಲ್ಲಾಧಿಕಾಗೆ ಮನವಿ ಸಲ್ಲಿಸಿತು.

ರೈತ‌ ಮುಖಂಡ ಸಿದಗೌಡ ಮೋದಗಿ ಮಾತನಾಡಿ, “ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿ, ಸಾಲ ಮನ್ನಾ ಮುಂತಾದ ಆಗ್ರಹಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್-ಹರಿಯಾಣ ಗಡಿಯಲ್ಲಿ ಜಗಜಿತ್ ಸಿಂಗ್ ದಲ್ಲೆವಾಲ ಆಮರಣಾಂತ ಉಪವಾಸ ಮಾಡುತಿದ್ದಾರೆ. ಈ ಉಪವಾಸ 49ನೇ ದಿನಕ್ಕೆ ಕಾಲಿಟ್ಟಿದೆ. ಅವರ ದೇಹ ನಿತ್ರಾಣಗೊಂಡು, ರಕ್ತದೊತ್ತಡ ಕೂಡ ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ. ರೈತ ನಾಯಕರ ಈ ಪರಿಸ್ಥಿತಿಗೆ ಕೇಂದ್ರ ಸರ್ಕಾರವೇ ನೇರ ಕಾರಣವಾಗಿದೆ” ಎಂದು ಆಕ್ರೋಶ ಹೊರಹಾಕಿದರು.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರದ ಹಲವು ರೈತ  ವಿರೋಧಿ ಧೋರಣೆಗಳು ಹಾಗೂ ರೈತರ ಆಗ್ರಹಗಳನ್ನು ನಿರ್ಲಕ್ಷ್ಯ ಮಾಡಿದ್ದರ ಫಲವಾಗಿ ರೈತ ನಾಯಕರ ಪ್ರಾಣ ಹೋಗುವಂಥ ಪರಿಸ್ಥಿತಿ ಉಂಟಾಗಿದೆ. ಈ ಕೂಡಲೇ ರಾಷ್ಟ್ರಪತಿಗಳು ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು” ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಹಾಗೂ ಭಾರತೀಯ ಕೃಷಿಕ ಸಮಾಜ ಮತ್ತು ಜಿಲ್ಲೆಯ ಪ್ರಗತಿಪರ ಸಂಘಟನೆಗಳು ಒತ್ತಾಯಿಸಿದವು.

ಈ ವೇಳೆ ರೈತ ಸಂಘಟನೆ ಮುಖಂಡ ಸಿದಗೌಡ ಮೋದಗಿ, ಬಸವರಾಜ ಮೋಕಾಶಿ, ಶಿವಲಿಲಾ ಮಿಸಾಲೆ, ಸೋಮಪ್ಪ ಹಾಗೂ ರೈತ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...